ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕುಶಾಲನಗರ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಸರಹದ್ದಿನ ಎಲ್ಲಾ ಮಸೀದಿಗಳ ಮುಖಂಡರನ್ನು ಠಾಣೆಗೆ ಕರೆಸಿ ಪೂರ್ವಭಾವಿ ಸಭೆಯನ್ನು ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು
ನೀಡಲಾಯಿತು. ಸಭೆಯಲ್ಲಿ ಪಿಎಸ್ಐ ಮೋಹನ್ ರಾಜ್ ರವರು ಉಪಸ್ಥಿತರಿದ್ದರು.
