ಬೆಂಗಳೂರಿನ ಕರ್ನಾಟಕ ರಕ್ಷಣಾ ವೇದಿಕೆಯ ಕೇಂದ್ರ ಕಚೇರಿಯಲ್ಲಿ, ರಾಜ್ಯಾಧ್ಯಕ್ಷರಾದ ಶ್ರೀ ಟಿ. ಎ. ನಾರಾಯಣಗೌಡರ ನೇತೃತ್ವದಲ್ಲಿ ಜ್ಯೋತಿ ಕುದುಪಜೆ ಅವರನ್ನು ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ ಜಿಲ್ಲಾ ಅಧ್ಯಕ್ಷೆಯಾಗಿ ಹಾಗೂ ದಿವ್ಯ ದೇವಾಂಗರನ್ನು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕೃತವಾಗಿ ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ರಾಜ್ಯ ಸಂಚಾಲಕರಾದ ದೀಪಾ ಪೂಜಾರಿಯವರು ಕೇಂದ್ರ ಕಚೇರಿಯಲ್ಲಿ ಉಪಸ್ಥಿತರಿದ್ದರು.
