ಗೋಕರ್ಣ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಿಮೆಯಲ್ಲಿ ಸಂಭ್ರಮ ಸಡಗರದಿಂದ ಸಾವಿತ್ರಿಬಾಯಿ ಫುಲೆ ಜನ್ಮದಿನದ ಆಚರಣೆ ನಡೆಯಿತು. ಮುಖ್ಯಾಧ್ಯಾಪಕರಾದ ಉಮಾ ಜಿ ನಾಯ್ಕ ರವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ “ಅಕ್ಷರದವ್ವ, ಭಾರತದ ಮೊದಲ ಮಹಿಳಾ ಶಿಕ್ಷಕಿ, ಸಾಮಾಜಿಕ ಹೋರಾಟಗಾರ್ತಿ, ದಣಿವರಿಯದ ಸತ್ಯಶೋಧಕಿ, ಸ್ತ್ರೀಯರಿಗೆ ಸಮಾಜದಲ್ಲಿ ಪುರುಷ ಸಮಾನ ಶೈಕ್ಷಣಿಕ ಸ್ಥಾನಮಾನ ಕೊಡಿಸಲು ತಮಗೆ ಒದಗಿದ ಕಷ್ಟಗಳನ್ನು ಲೆಕ್ಕಿಸದೆ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ದಾರಿ ದೀಪವಾದ ಸಾವಿತ್ರಿಬಾಯಿ ಪುಲೆ ರವರ ಆದರ್ಶ ಗುಣಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ” ಎಂದರು. ಸಾವಿತ್ರಿ ಬಾಯಿ ಪುಲೆ ರವರ ಭಾವಚಿತ್ರಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. ವಿದ್ಯಾರ್ಥಿಗಳಿಂದ ಭಾಷಣಗಳು ನಡೆದವು. ವಿದ್ಯಾರ್ಥಿಗಳಿಗೆ ದೂರದರ್ಶನದ ಮೂಲಕ ಸಾವಿತ್ರಿಬಾಯಿ ಫುಲೆ ಜೀವನ ಚರಿತ್ರೆಯನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಲತಾ ಎಸ್ ಗೌಡ, ರಾಜೀವ್ ಗಾಂವಕರ ದೇವಯಾನಿ ನಾಯಕ, ನಯನಾ ಜೆ.ಪಿ, ವೈಶಾಲಿ ಅಶೋಕ ನಾಯಕ, ನಾಗರತ್ನ ಗೌಡ, ಸವಿತಾ ಗೌಡ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ನಿರ್ವಹಿಸಿದರು . ಶಾಲಾ SDMC ಅಧ್ಯಕ್ಷರಾದ ಶ್ರೀ ಈಶ್ವರ ಮಡಿವಾಳರವರು ವಿದ್ಯಾರ್ಥಿಗಳಿಗೆ ಸಾವಿತ್ರಿಬಾಯಿ ಪುಲೆ ಜನ್ಮದಿನದ ಶುಭಾಶಯ ತಿಳಿಸಿದರು. ಹೀಗೆ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.
