ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಹೊಸ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡವು ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು ಕೂಡಲೇ ಇದಕ್ಕೆ ಸಂಬಂಧಪಟ್ಟ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ತನಿಖೆಯನ್ನು ನಡೆಸಿ ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ಅಗ್ರಹಿಸಿ ಯಡ್ರಾಮಿ ತಾಲೂಕಿನ ಕೆ ಆರ್ ಎಸ್ ಪಕ್ಷದ ತಾಲೂಕ ಅಧ್ಯಕ್ಷರಾದ ರಿಯಾಜ್ ಕೆ ಬಿಳವಾರ ಅವರು ಜೇವರ್ಗಿ ತಾಲೂಕ ಪಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದ್ದೆವೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಒಂದು ವೇಳೆ ಈ ಕಳಪೆ ಕಾಮಗಾರಿಯ ವಿರುದ್ಧ ನಿರ್ಲಕ್ಷ್ಯ ವಹಿಸಿದರೆ ಜೇವರ್ಗಿ ತಾಲೂಕ ಪಿಡಬ್ಲ್ಯೂಡಿ ಇಲಾಖೆಯ ಕಚೇರಿಗೆ ಕೆ ಆರ್ ಎಸ್ ಪಕ್ಷದ ವತಿಯಿಂದ ಮುತ್ತಿಗೆಯನ್ನು ಹಾಕಬೇಕಾಗುತ್ತದೆ ಎಂದು ಈ ಸಂದರ್ಭದಲ್ಲಿ ಯಡ್ರಾಮಿ ತಾಲೂಕ ಕೆಆರ್ ಎಸ್ ಪಕ್ಷದ ತಾಲೂಕ ಅಧ್ಯಕ್ಷರಾದ ರಿಯಾಜ್ ಕೆ ಬೀಳವಾರ ಅವರು ಹಾಗೂ ಹಾಗೂ ಕೆ ಆರ್ ಎಸ್ ಪಕ್ಷದ ಕಾರ್ಯದರ್ಶಿಯಾದ ಸಿದ್ದು ಎಸ್ ಬಿಳವಾರ್ ಅವರು ಈ ಸಂದರ್ಭದಲ್ಲಿ ತಿಳಿಸಿದರು
ವರದಿ ಜೇಟ್ಟೆಪ್ಪ ಎಸ್ ಪೂಜಾರಿ
