ನಂಜನಗೂಡು ನಗರದ ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ ಶ್ರೀ ನುಲಿಯ ಚಂದಯ್ಯ ಜಯಂತಿ, ಸ್ವಾತಂತ್ರ್ಯ ದಿನಾಚರಣೆ, ಶ್ರೀ ಕೃಷ್ಣ ಜಯಂತಿ ಹಾಗೂ ಶ್ರೀ ಡಿ. ದೇವರಾಜ ಅರಸು ರವರ ಜಯಂತಿ ಕಾರ್ಯಕ್ರಮ ಹಿನ್ನೆಲೆ ಇಂದು ನಂಜನಗೂಡು ಕ್ಷೇತ್ರದ ಜನಪ್ರಿಯ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಪೂರ್ವಭಾವಿ ಸಭೆ ನಡೆಸಿ ಜಯಂತಿಗಳ ಸಂಬಂಧ ರೂಪರೇಷೆ ಮತ್ತು ಸಿದ್ಧತೆ ಕುರಿತು ಚರ್ಚಿಸಿ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ರವರು, ರಾಜಕಾಂತ್ ರವರು, ನಗರಸಭೆ ಪೌರಯುಕ್ತರಾದ ವಿಜಯ್ ರವರು, EO ಜೆರಾಲ್ಡ್ ರಾಜೇಶ್ ರವರು, BEO ಮಹೇಶ್ ರವರು ಸೇರಿದಂತೆ ಹಲವು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಅಧ್ಯಕ್ಷರುಗಳು ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
