ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟಿಎಪಿಸಿಎಂಎಸ್ ತಾಲೂಕು ಅಧ್ಯಕ್ಷರಾಗಿ ಆವುಲಕೊಂಡರಾಯಪ್ಪ, ಉಪಾಧ್ಯಕ್ಷರಾಗಿ ಜಕ್ಕಲಮೊಡಗು ಲಕ್ಷಿö್ಮÃನರಸಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಶುಕ್ರವಾರ ಅಧಿಕಾರ ವಹಿಸಿಕೊಂಡರು.
ನಗರದ ಬಿಬಿ ರಸ್ತೆಯಲ್ಲಿರುವ ತಾಲೂಕು ವ್ಯವಸಾಯೋತ್ಪನ್ನ ಕೃಷಿ ಮಾರುಕಟ್ಟೆ ಸಮಿತಿ ಕಛೇರಿಯಲ್ಲಿ ಶುಕ್ರವಾರ ಸರಳವಾಗಿ ನಡೆದ ಸಮಾರಂಭದಲ್ಲಿ ಅಧ್ಯಕ್ಷರಾಗಿ ಆವುಲಕೊಂಡರಾಯಪ್ಪ, ಉಪಾಧ್ಯಕ್ಷರಾಗಿ ಜಕ್ಕಲಮೊಡಗು ಲಕ್ಷಿö್ಮÃನರಸಪ್ಪ ಅಧಿಕಾರ ವಹಿಸಿಕೊಂಡರು.
ಈವೇಳೆ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್ ಮಾತನಾಡಿ ಈ ಬಾರಿಯ ೨೦೨೫ನೇ ಸಾಲಿನ ಆಡಳಿತ ಮಂಡಳಿಯ ೧೪ ಸ್ಥಾನಗಳಿಗೆ ನಡೆದ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ೧೩ ಮಂದಿ ಆಯ್ಕೆಯಾಗುವ ಮೂಲಕ ಸಹಕಾರಿ ಸಂಘದಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರಕ್ಕೆ ಏರುವಂತೆ ಆಗಿದೆ.ಎಲ್ಲಾ ಮುಖಂಡರು ಸರ್ವಾನುಮತದಿಂದ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿ ಬಿಜೆಪಿ ಮುಖಂಡರಾದ ನಾಯಕ ಸಮುದಾಯದ ಆವುಲಕೊಂಡರಾಯಪ್ಪ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.ಇದೇ ರೀತಿ ಜೆಡಿಎಸ್ ಪಕ್ಷದ ಮುಖಂಡರು ಹಿಂದುಳಿದ ವರ್ಗಕ್ಕೆ ಸೇರಿದ ಲಕ್ಷಿö್ಮÃನರಸಪ್ಪ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.ಈ ಇಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಜೆಡಿಎಸ್ ಬಿಜೆಪಿ ಎರಡೂ ಪಕ್ಷದ ಮುಖಂಡರು ಒಟ್ಟುಗೂಡಿ ಅನಿಷ್ಟ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಿ ಎನ್ಡಿಎ ಮೈತ್ರಿಕೂಟಕ್ಕೆ ಅಧಿಕಾರ ತಂದುಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳಲ್ಲಿ ಕೂಡ ಇದೇ ರೀತಿ ಒಗ್ಗಟ್ಟು ಕಾಪಾಡಿಕೊಂಡು ಸಾಗುತ್ತಾರೆ.ಎರಡೂ ಪಕ್ಷದ ಎಲ್ಲಾ ಮುಖಂಡರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ.ನೂತನ ಆಡಳಿತ ಮಂಡಳಿ ಸಂಘವನ್ನು ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗಲಿ ಎಂದು ಹಾರೈಸಿದರು.
ನೂತನ ಅಧ್ಯಕ್ಷ ಆವುಲಕೊಂಡರಾಯಪ್ಪ ಮಾತನಾಡಿ ನಮ್ಮ ನಾಯಕರಾದ ಸಂಸದ ಸುಧಾಕರ್ ಅವರ ಆಶೀರ್ವಾದಿಂದ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸೇವಾ ಸಹಕಾರ ಸಂಘದಲ್ಲಿ ಇದೇ ಮೊದಲ ಬಾರಿಗೆ ನಾಯಕ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ದೊರೆತಿದೆ.ಸಾಮಾಜಿಕ ನ್ಯಾಯದ ಪರಿಪಾಲನೆಯಲ್ಲಿ ಸಂಸದ ಸುಧಾಕರ್ ಅವರಿಗೆ ಸರಿಸಾಟಿ ಯಾರೂ ಇಲ್ಲ.ಎನ್ಡಿಎ ಬೆಂಬಲಿತ ಎಲ್ಲ ೧೩ ಮಂದಿ ಕಾರ್ಯಕಾರಿ ಸಮಿತಿ ಸದಸ್ಯರ ಸಹಕಾರದಲ್ಲಿ ಸಂಘವನ್ನು ಲಾಭದಲ್ಲಿ ಮುನ್ನಡೆಸುತ್ತಾ ರೈತಾಪಿವರ್ಗಕ್ಕೆ ಬೇಕಾದ ಎಲ್ಲಾ ರಸಗೊಬ್ಬರ, ಕೀಟನಾಶಕಗಳನ್ನು ಸಕಾಲಕ್ಕೆ ದಾಸ್ತಾನಿರುವಂತೆ ನೋಡಿಕೊಳ್ಳಲು ಮೊದಲ ಆಧ್ಯತೆ ನೀಡಲಾಗುವುದು.ಇದು ಹಳೆಯ ಕಟ್ಟಡವಾಗಿದ್ದು ಇದರ ನವೀಕರಣ ಮಾಡಲು ಯೋಜನೆ ರೂಪಿಸಲಾಗುವುದು.ಬಾಡಿಗೆ ವಿಚಾರದಲ್ಲಿ ಸಮಸ್ಯೆಯಿದ್ದು ಇದನ್ನು ಪರಿಹರಿಸಲಾಗುವುದು. ಮತದಾರರ ಋಣವನ್ನು ತೀರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದರು.
ಉಪಾಧ್ಯಕ್ಷ ಲಕ್ಷಿö್ಮÃನರಸಪ್ಪ ಮಾತನಾಡಿ ಸಂಘದ ಸದಸ್ಯರು ಮತ್ತು ಪಕ್ಷದ ಎಲ್ಲಾ ಹಿರಿಯ ಮುಖಂಡರ ಆಶೀರ್ವಾದದಿಂದ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದೇವೆ.ಕಾರ್ಯಕಾರಿ ಮಂಡಳಿ ಸದಸ್ಯರ ಸಹಕಾರದಲ್ಲಿ ಒಳ್ಳೆಯ ಆಡಳಿತ ನೀಡಲು ಸಂಕಲ್ಪ ಮಾಡಲಾಗಿದೆ ಎಂದರು.
