ದ್ವಿತೀಯ ಪಿಯುಸಿಯಲ್ಲಿ ಸತತ 7ವರ್ಷಗಳಿಂದ ಆನೇಕಲ್ ತಾಲ್ಲೂಕಿಗೆ 100ಕ್ಕೆ 100 ರಷ್ಟು ಉತ್ತಮ ಫಲಿತಾಂಶ ನೀಡುತ್ತಿರುವ ನ್ಯೂ ಬಾಲ್ಡ್ ವಿನ್ ಇಂಟರ್ನ್ಯಾಷನಲ್ ಪಿಯು ಕಾಲೇಜ್
ಆನೇಕಲ್ : ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ಪ್ರಕಟಗೊಂಡಿದ್ದು ಆನೇಕಲ್ ನ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ನ್ಯೂ ಬಾಲ್ಡ್ ವಿನ್ ಇಂಟರ್ನ್ಯಾಷನಲ್ ಪಿಯು ಕಾಲೇಜು ಸತತ 7 ವರ್ಷಗಳಿಂದ 100ರಷ್ಟು ಉತ್ತಮ ಫಲಿತಾಂಶವನ್ನು ನೀಡುತ್ತಾ ಬಂದಿದೆ ಈಗ ಮತ್ತೊಮ್ಮೆ ಉತ್ತಮ ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದೆ.
ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಸತತ 8ನೇ ಬಾರಿಗೆ 100ರಷ್ಟು ಶೇಕಡಾ ಫಲಿತಾಂಶ ಪಡೆದುಕೊಂಡಿದೆ.
ವಾಣಿಜ್ಯ ವಿಭಾಗದಲ್ಲಿ ಅನುಮಿತ. ಪಿ ಅವರು 600ಕ್ಕೆ 583 (97%)ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಆನೇಕಲ್ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ . ಇದರ ಜೊತೆಗೆ ವಿಜ್ಞಾನ ವಿಭಾಗದಲ್ಲಿ ದಿಶಾ ನರೇಂದ್ರ 600 ಕ್ಕೆ 564 (94%) ಅಂಕ ಅಂಕಗಳನ್ನು ಪಡೆದುಕೊಂಡು ಎರಡನೇ ರ್ಯಾಂಕ್ಗಳನ್ನು ಪಡೆದುಕೊಂಡಿದ್ದಾರೆ.

ಸಾಧನೆಯ ಹಾದಿ ಸುಗಮವಲ್ಲ ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ ಅದೇ ರೀತಿ ನಾವು ಅಪೇಕ್ಷೆ ಪಟ್ಟಂತ ಫಲಿತಾಂಶವನ್ನು ಪಡೆಯಲು ಅತೀ ವೇಗವಾಗಿ ಸಾಧನೆಯ ಹಾದಿಯಲ್ಲಿ ಸಾಗಬೇಕಾಗಿದೆ ಎಂದು ನ್ಯೂ ಬಾಲ್ಡ್ ವಿನ್ ಇಂಟರ್ನ್ಯಾಷನಲ್ ಪಿಯು ಕಾಲೇಜ್ ನ ಪ್ರಾಂಶುಪಾಲರಾದ ಸೈಯದ್ ಸದತ್ ಪಾಷಾ ರವರು ತಿಳಿಸಿದರು.
ನ್ಯೂ ಬಾಲ್ಡ್ ವಿನ್ ಇಂಟರ್ನ್ಯಾಷನಲ್ ಪಿಯು ಕಾಲೇಜಿನಲ್ಲಿ ನಡೆದ 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಭಿನಂದನಾ ಮತ್ತು ಸನ್ಮಾನಿಸಿ ಗೌರವಿಸಲಾಯಿತು.
ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ಇಂದೇ ಸೇರಿರಿ ನ್ಯೂ ಬಾಲ್ಡ್ ವಿನ್ ಇಂಟರ್ನ್ಯಾಷನಲ್ ಪಿಯು ಕಾಲೇಜ್
ವರದಿ:- ನಾಗರಾಜ್ ಪದ್ಮಶಾಲಿ