ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದಂತಹ ಸಂದೀಪ್ ರೆಡ್ಡಿಯವರು ಸ್ಕಾಲರ್ಶಿಪ್ ವಿತರಣೆ ಮಾಡುವುದಾಗಿ ತಿಳಿಸಿದರು. ಜೂನ್ 15ನೇ ತಾರೀಕನಂದು ಚಿಕ್ಕಬಳ್ಳಾಪುರ ನಗರದಲ್ಲಿ ಇರುವಂತ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಐದರಿಂದ ಹತ್ತು ಸಾವಿರ ರೂಪಾಯಿ ಸ್ಕಾಲರ್ಶಿಪ್ ಅನ್ನು ವಿತರಿಸಲಾಗುವುದು ಎಂದು ತಿಳಿಸಿದರು ಕಳೆದ ಎರಡು ವರ್ಷಗಳ ಹಿಂದೆ ಎಸ್ಎಸ್ಎಲ್ಸಿ ಪಾಸಾದ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಮಾತ್ರ ವಿತರಣೆ ಮಾಡಿದ್ದೆವು ಆದರೆ ಈ ವರ್ಷ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗು ವಿತರಿಸಲಾಗುವುದು. ನಮ್ಮ ಭಗತ್ ಸಿಂಗ್ ಟ್ರಸ್ಟ್ ನಲ್ಲಿ ಅರ್ಜಿ ವಿತರಿಸಲಾಗುವುದು ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕಾಗಿ ತಿಳಿಸಿದರು
