ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ ನೂತನ ಅಧ್ಯಕ್ಷರಾಗಿ ಗುಲ್ಬರ್ಗದ ಹಝ್ರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಸೈಯದ್ ಮುಹಮ್ಮದ್ ಅಲಿ ಹುಸೈನಿ ಅವರು ಆಯ್ಕೆಯಾಗಿದ್ದಾರೆ. ಶನಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಸೈಯದ್ ಮುಹಮ್ಮದ್ ಅಲಿ ಹುಸೈನಿ ಆಯ್ಕೆಯಾದರು.
ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಕೆ.ಅನ್ವರ್ ಬಾಷಾ ನೇತೃತ್ವದಲ್ಲಿ ಆರು ಮಂದಿ ಸದಸ್ಯರು ಮತದಾನ ಬಹಿಷ್ಕರಿಸಿದರು
ಈ ಸಂದರ್ಭದಲ್ಲಿ ಕರ್ನಾಟಕದ ಮೂಲೆ ಮೂಲೆಗಳಿಂದ ಹಲವು ಸಂಘಟನೆಗಳ ಪದಾಧಿಕಾರಿಗಳು ನೂತನ ಅಧ್ಯಕ್ಷರಿಗೆ ಶುಭಾಶಯಗಳನ್ನು ಕೋರಿದರು
ವರದಿ ಪರ್ವಿಜ್ ಅಹಮದ್