ಹಾಸನ / ಮಂಗಳೂರು / ಬೆಂಗಳೂರು : ವಿ.ಸೋಮಣ್ಣ ಅವರಿಂದ ಬೆಂಗಳೂರು ಹಾಗೂ ಮಂಗಳೂರಿನ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದಾರೆ. ವಂದೇ ಭಾರತ್ ರೈಲಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬಂಪರ್ ನ್ಯೂಸ್ ಕೊಟ್ಟಿದೆ. ಇನ್ನು ಕರ್ನಾಟಕಕ್ಕೆ ಒಂದೂವರೆ ತಿಂಗಳಿನಲ್ಲಿ ವಂದೇ ಭಾರತ್ ಸ್ವೀಪರ್ ರೈಲು ಲಭ್ಯವಾಗಲಿದೆ ಎನ್ನುವ ಗುಡ್ನ್ಯೂಸ್ ಹೇಳಿದ್ದಾರೆ. ಇನ್ನು ಒಂದೂವರೆ ತಿಂಗಳಿನ ಒಳಗಾಗಿ ವಂದೇ ಭಾರತ್ ಸ್ಟೀಪರ್ ಕೋಚ್ ರೈಲು ಸಂಚಾರಕ್ಕೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಆದರೆ, ಇನ್ನೊಂದು ವಿಶೇಷವೆಂದರೆ ಇದರಲ್ಲಿ ಕರ್ನಾಟಕಕ್ಕೂ ಸೇವೆ ವಿಸ್ತರಿಸುವ ಬಗ್ಗೆ ಮಾತನಾಡಿದ್ದಾರೆ. ವಿ.ಸೋಮಣ್ಣ ಅವರು ಕೇಂದ್ರ ರಾಜ್ಯ ಸಚಿವರಾದ ಮೇಲೆ ಹಲವು ರೈಲ್ವೆ ಸೇವೆ ಹಾಗೂ ಸೌಲಭ್ಯಗಳನ್ನು ವಿಸ್ತರಿಸುತ್ತಿದ್ದಾರೆ. ಇದೀಗ ಕರ್ನಾಟಕಕ್ಕೆ ವಂದೇ ಭಾರತ್ ವಂದೇ ಭಾರತ್ ಸೇವೆ ವಿಸ್ತರಿಸುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಇದರೊಂದಿಗೆ ಹಾಸನ- ಮಂಗಳೂರು ರೈಲು ಮಾರ್ಗದಲ್ಲಿ ಸಕಲೇಶಪುರದಿಂದ ಸುಬ್ರಹ್ಮಣ್ಯ ಮಾರ್ಗವರೆಗೆ ಹೊಸ ಲೈನ್ / ರೈಲ್ವೆ ಹಳಿ ಅಭಿವೃದ್ಧಿಯ ಬಗ್ಗೆಯೂ ಅವರು ಮಾತನಾಡಿದ್ದಾರೆ. ಇದಕ್ಕಾಗಿ ಬರೋಬ್ಬರಿ 2 ಸಾವಿರ ಕೋಟಿ ರೂಪಾಯಿಗಳ ಡಿಪಿಆರ್ ಸಿದ್ಧಪಡಿಸುವುದಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಭಾಗದಲ್ಲಿ ರೈಲ್ವೆ ಮತ್ತು ರಸ್ತೆ ಮಾರ್ಗವನ್ನು ಎರಡನ್ನೂ ಅಭಿವೃದ್ಧಿ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಈ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಭೆ ನಡೆಸಿರುವುದಾಗಿ ಅವರು ಹೇಳಿದ್ದಾರೆ. ಇನ್ನು ಜಮ್ಮು ಕಾಶ್ಮೀರ ಮಾದರಿಯಲ್ಲಿ ಸುರಂಗ ಮಾರ್ಗವನ್ನು ನಿರ್ಮಾಣ ಮಾಡುವ ಚಿಂತನೆ ಇದೆ ಎಂದಿದ್ದಾರೆ. , ಇನ್ನು ವಂದೇ ಭಾರತ್ ಸ್ವೀಪರ್ ರೈಲಿಗೆ ಸಂಬಂಧಿಸಿದಂತೆ ವಿ. ಸೋಮಣ್ಣ ಅವರು ಮತ್ತೊಂದು ಗುಡ್ನ್ಯೂಸ್ ಕೊಟ್ಟಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಮಂಗಳೂರು-ಬೆಂಗಳೂರು ನಡುವೆ ಎರಡು ವಂದೇ ಭಾರತ್ ರೈಲು ಓಡಾಟ ನಡೆಯಲಿದೆ ಎಂದಿದ್ದಾರೆ. ಅದರಲ್ಲಿ ಒಂದನ್ನು ಮಂಗಳೂರಿಗೆ ನೀಡಲಾಗುವುದು ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ರೈಲು ಸೇವೆ ಕೊಡಬೇಕು ಎಂದು ಇಲ್ಲಿನ ಜನರ ಬಹುದಿನಗಳ ಬೇಡಿಕೆ ಇದೆ. ಹೀಗಾಗಿ, ಈ ಹೇಳಿಕೆಯು ಇದೀಗ ಮಹತ್ವ ಪಡೆದುಕೊಂಡಿದೆ. ಮಂಗಳೂರು ಸೆಂಟ್ರಲ್- ಕಬಕ ಪುತ್ತೂರು- ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ ರೈಲಿನ ಸುಬ್ರಹ್ಮಣ್ಯ ರೋಡ್ ನಿಲ್ದಾಣ ವರೆಗಿನ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು – ಮಂಗಳೂರು ಪ್ರಯಾಣಿಕರಿಗೆ ಗುಡ್ನ್ಯೂಸ್: ಇನ್ನು ಬೆಂಗಳೂರು ಹಾಗೂ ಮಂಗಳೂರಿನ ನಡುವೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಾರಂಭ ಮಾಡುವುದರಿಂದ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.
ವರದಿ ಪರ್ವಿಜ್ ಅಹಮದ್ ಹಾಸನ