ಕುಮಟಾ ತಾಲೂಕಿನ ನಾಗೂರು ನಿವಾಸಿಯಾದ ಶ್ರೀ ರಾಜು ತಿಮ್ಮಪ್ಪ ಪಟಗಾರ, ಇವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ತೆಂಗಿನಮರದಿಂದ ಬಿದ್ದು ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ಅವರಿಗೆ ಸ್ವಲ್ಪ ಆದರೂ ಸಹಾಯವಾಗಲಿ ಎನ್ನುವ ದೃಷ್ಟಿಯಿಂದ ಗ್ರಾಮ ಒಕ್ಕಲು ಯುವ ಬಳಗದವರು ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಅವರಿಗೆ ರೂಪಾಯಿ 7500=00( ಏಳು ಸಾವಿರದ ಐದು ನೂರು ಮಾತ್ರ) ಸಹಾಯ ಧನವನ್ನು ವಿತರಿಸಿ ಬೇಗ ಗುಣಮುಖರಾಗಲಿ ಎಂದು ಬಳಗದವರು ಹಾರೈಸಿದರು, ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮ ಒಕ್ಕಲು ಯುವ ಬಳಗದ ಸದಸ್ಯರು ಹಾಗೂ ಸ್ಥಳೀಯ ಯುವ ಬಳಗದ ಸದಸ್ಯರು ಹಾಜರಿದ್ದರು, ಸುಮಾರು ಹನ್ನೊಂದು ವರ್ಷಗಳಿಂದ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಜಿಲ್ಲಾ ಗ್ರಾಮ ಒಕ್ಕಲು ಯುವ ಬಳಗದವರ ಕಾರ್ಯವು ಮೆಚ್ಚುವಂತಹದ್ದಾಗಿದೆ.
