ಡೆಂಗ್ಯೂ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಡ್ವೊಕೇಸಿ ಸಭೆಯನ್ನು ಬ್ಯಾಡಗೊಟ ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಯಿತು..
ಡೆಂಗ್ಯೂ ರೋಗದ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಹೆಬ್ಬಾಲೆಯ ವೈದ್ಯಾಧಿಕಾರಿಯಾದ ಡಾ ಸಾನಿಯಾ ರವರು ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾದ ಶ್ರೀಮತಿ ಶಾಂತಿಯವರು ಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಅಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಕೂಡಿಗೆ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ಮಂಜುಳಾರವರು ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಹಾಗೂ ಚರಂಡಿಗಳ ಸ್ವಚ್ಚತೆ ಬಗ್ಗೆ ಮಾಹಿತಿಯನ್ನು ನೀಡಿದರು..
ಸಭೆಯಲ್ಲಿ ಕೂಡಿಗೆ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಶ್ರೀ ಪುನಿತ್, ಸಿಬ್ಬಂದಿಗಳು, ಆರೋಗ್ಯ ನಿರೀಕ್ಷಕರಾದ ಶ್ರೀ ಸಂಜಯ್, ಸಮುದಾಯ ಆರೋಗ್ಯ ಅಧಿಕಾರಿ ದೀಪು, ಅಂಗನವಾಡಿ ಶಿಕ್ಷಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಹಾಡಿಯ ಮುಖಂಡರು ಹಾಜರಿದ್ದರು..
