ಸಾಲಿಗ್ರಾಮ: 65 ಕೋಟಿ ರೂ.ಗಳ ವೆಚ್ಚದಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆ ಮಾಡಲಾಗುವುದು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದು ಕೇಂದ್ರ ಬಿಂದು ಆಗಿರುವ ಕಾರಣ ಮಹಿಳೆಯರೇ ಜಾಸ್ತಿ ಆಸ್ಪತ್ರೆಗೆ ಬರುತ್ತಾರೆ, ಹಾಗಾಗಿ ಅನುಕೂಲಕ್ಕಾಗಿ ಹೆಚ್ಚಾಗಿ ವೈದ್ಯರುಗಳ ನೇಮಕ ಮಾಡಿ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ತೆರೆಯಲಾಗುವುದು, ಹಲವು ರೀತಿಯ ಸಮಸ್ಯೆಗಳು ಈ ಆಸ್ಪತ್ರೆಯಲ್ಲಿ ಇವೆ, ಆರೋಗ್ಯ ಸಚಿವರಿಗೆ ಮನವಿ ಮಾಡಿ ಸಮಸ್ಯೆ ಬಗೆಹರಿಸಲಾಗುವುದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ಕರೆದು ಈ ನೂತನ ತಾಲೂಕಿಗೆ ಬೇಕಾಗಿರುವ, ತಾಲೂಕು ಪಂಚಾಯತಿ ಕಟ್ಟಡ, ಮಿನಿ ವಿಧಾನಸೌದ ಸೇರಿದಂತೆ ಎಲ್ಲಾ ರೀತಿಯ ಕಟ್ಟಡಗಳನ್ನು ನಿರ್ಮಿಸಲು ಸೂಚನೆ ನೀಡಿದ್ದಾರೆ, ಈ ತಾಲೂಕಿನ ಸಂಪೂರ್ಣ ಜವಾಬ್ದಾರಿ ನನ್ನ ಮೇಲೆ ಇದೆ, ನಾನು ಹಂತ ಹಂತವಾಗಿ ಏನೇ ಸಮಸ್ಯೆಗಳಿದ್ದರೂ ಬಗೆಹರಿಸುತ್ತೇನೆ, ಇದು ಶತಸಿದ್ದ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಿಹೆಚ್ ಓ ಡಾ.ಕುಮಾರಸ್ವಾಮಿ, ಟಿಹೆಚ್ ಓ ಡಾ.ನಟರಾಜ್, ತಹಶೀಲ್ದಾರ್ ನರಗುಂದ, ತಾಲೂಕು ಪಂಚಾಯತಿ ಇಓ ರವಿಕುಮಾರ್, ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶೋಕ್, ತಜ್ಞ ವೈದ್ಯ ಡಾ.ಮಂಜುನಾಥ್, ಡಾ.ಕೀರ್ತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಉದಯಶಂಕರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸಎಲ್.ಎಂ.ಸಣ್ಣಪ್ಪ, ಮಂಜೇಗೌಡ, ಬಸವರಾಜು, ಅಶ್ವಿನಿ, ದಿನೇಶ್, ಗೋಪಾಲ, ಗ್ರಾ.ಪಂ. ಅಧ್ಯಕ್ಷ ಸುವರ್ಣ, ಉಪಾಧ್ಯಕ್ಷ ಶಶಿಕಲಾ, ಸಿಡಿಸಿ ಅಧ್ಯಕ್ಷರಾದ ಅಪ್ಪು ಶ್ರೀನಿವಾಸ್, ಎಸ್.ಎಮ್.ಪರೀಕ್ಷಿತ್, ಸೈಯದ್ , ಬಲರಾಮ್ , ಸೌಕತ್ ಸೇರಿದಂತೆ ಹಲವರು ಇದ್ದರು.
