ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಅಂಗ ಸಂಸ್ಥೆಯಾದ ವಾಸವಿ ಅಕಾಡೆಮಿ ಮೂಲಕ ಕೇಂದ್ರ ಲೋಕಸೇವಾ ಆಯೋಗ ಐಎಎಸ್ ಐಪಿಎಸ್ ಇತ್ಯಾದಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಆಡಳಿತಾತ್ಮ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಊಟ ವಸತಿ ಸೌಲಭ್ಯಗಳನ್ನು ನೀಡಲಾಗುವುದು. ಬೆಂಗಳೂರು ನಗರದ ವಿಜಯನಗರ ಬಡಾವಣೆಯಲ್ಲಿರುವ ಅಕಾಡೆಮಿಯ ಕೇಂದ್ರದಲ್ಲಿ 2026ನೇ ವರ್ಷದಲ್ಲಿ ಯುಪಿಎಸ್ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಸಕ್ತ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿ ನಡೆಸುವ ಎಲ್ಲಾ ತರಗತಿಗಳು ಸಂಪೂರ್ಣ ಉಚಿತವಾಗಿರುತ್ತದೆ. ಯಾವುದೇ ಸಮುದಾಯದ ವಿದ್ಯಾರ್ಥಿಗಳು ತಮ್ಮ ಸಂಸ್ಥೆಯ ನಿಯಮಾನುಸಾರ ಪ್ರವೇಶವನ್ನು ಪಡೆಯಲು ಅವಕಾಶವಿದೆ. ಪ್ರವೇಶಾಸಕ್ತ ವಿದ್ಯಾರ್ಥಿಗಳು ವಾಸವಿ ಅಕಾಡೆಮಿಯು ನಡೆಸುವ ಸಾಮಾನ್ಯ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ತೀರ್ಣರಾಗಬೇಕಾಗಿರುತ್ತದೆ. ಮಧ್ಯಮ ಹಾಗೂ ಬಡ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಸಹ ಐಎಎಸ್ ಹಾಗೂ ಸಮಾನಾಂತರ ಪಕ್ಷಗಳನ್ನು ಬರೆಯಲು ಈ ನಮ್ಮ ತರಗತಿಗಳು ಹೆಚ್ಚಿನ ಪರಿಣಾಮಕಾರಿ ಆಗಿರುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಆರ್ಯವೈಶ್ಯ ಮಹಾಸಭಾಧ್ಯಕ್ಷರಾದಂತಹ ಬಿ ಆರ್ ಶ್ರೀನಿವಾಸ್ ಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದಂತಹ ರಮೇಶ್ ಗುಪ್ತ . ಶ್ರೀಮತಿ ದೀಪ ಸತೀಶ್ ಹಾಗೂ ಚಿಕ್ಕಬಳ್ಳಾಪುರ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷರಾದಂತಹ ಡಿಎಸ್ ನಂಜುಂಡರಾಮ ಶೆಟ್ಟಿ ಇತರರು ಇದ್ದರು.
