ಬಂಗಾರಪೇಟೆ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಈ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹಕಾರದೊಂದಿಗೆ ಆಯ್ಕೆಯಾಗಿರುವ ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಸಹಾಯಕರಿಗೆ ಉದ್ಯೋಗ ಪತ್ರವನ್ನು ನೀಡುತ್ತಿರುವುದು ನನಗೆ ಸಂತೋಷ ತಂದಿದೆ ಎಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ನಿಯಮಿತ ಅಧ್ಯಕ್ಷರು ಮತ್ತು ಸ್ಥಳೀಯ ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಸಹಾಯಕರಿಗೆ ಸೇವಾ ಆದೇಶ ಪತ್ರಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಬಹಳಷ್ಟು ಹುದ್ದೆಗಳು ಖಾಲಿ ಉಳಿದಿದ್ದು ಈ ಉದ್ಯೋಗಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿಂದೆ ಉದ್ಯೋಗವನ್ನು ಪಡೆಯಲು ಶಿಫಾರಸ್ಸು ಹಾಗೂ ಹಣದ ಆಧಾರದ ಮೇಲೆ ನೇಮಕಾತಿ ಆಗುತ್ತಿದ್ದನ್ನು ಗಮನಿಸಿದ್ದೇವೆ. ಈಗ ವಿದ್ಯಾವಂತರನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹೇಳಿದರು
