ಚಿಕ್ಕಬಳ್ಳಾಪುರದ ಜನಪ್ರಿಯ ಶಾಸಕರಾದಂತ ಶ್ರೀ ಪ್ರದೀಪ್ ಈಶ್ವರ್ ರವರು ನಮ್ಮ ಊರಿಗೆ ನಮ್ಮ ಶಾಸಕರು ಎಂಬ ಕಾರ್ಯಕ್ರಮದ ಅಡಿಯಲ್ಲಿ ಇಂದು ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ
ಇಟ್ಟಪ್ಪನಹಳ್ಳಿ, ಹಾಗೂ ಗೊಂಗಡಿಪುರ ಗ್ರಾಮಗಳಿಗೆ 36 ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಜೊತೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸುತ್ತಾ ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನವನ್ನು ಮಾಡಿದರು. ರಸ್ತೆಯನ್ನೇ ಕಾಣದಂತ ಈ ಹಳ್ಳಿಗಳಿಗೆ ಸಿಸಿ ರಸ್ತೆಯನ್ನು ಮಂಜೂರು ಮಾಡುವ ಭರವಸೆಯನ್ನು ನೀಡಿದರು. ಈ ಗ್ರಾಮಗಳಲ್ಲಿ ಒಳಚರಂಡಿಯ ವ್ಯವಸ್ಥೆಯೇ ಇರಲಿಲ್ಲ ಇದನ್ನು ನೋಡಿದ ಶಾಸಕರು ಇನ್ನು ಒಂದು ವಾರದ ಒಳಗೆ ಈ ಎಲ್ಲಾ ಚರಂಡಿ ವ್ಯವಸ್ಥೆ ಮತ್ತು ಸ್ವಚ್ಛತಾ ಕಾರ್ಯ ಆಗಬೇಕೆಂದು ಸೂಚಿಸಿದರು ಬೀದಿ ದೀಪದ ವ್ಯವಸ್ಥೆಯನ್ನು ಸರಿಪಡಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಆದೇಶಿಸಿದರು ಮಾನ್ಯ ಶಾಸಕರು ಮಾತನಾಡುತ್ತಾ ನಾನು ಶಾಸಕನಾದಾಗಿಂದ ಈ ಕ್ಷೇತ್ರದಲ್ಲಿ 186 ಹಳ್ಳಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸಿ ಅದಕ್ಕೆ ಪರಿಹಾರ ಸೂಚಿಸಿದ್ದೇನೆ ಮುಂದಿನ ದಿನಗಳಲ್ಲಿ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿರುವ ಯೋಜನೆಯನ್ನು ರೂಪಿಸಿಕೊಂಡಿದ್ದೇನೆ ಎಂದು ತಿಳಿಸಿದರು
