ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾಗಿ ಮೌಲಾನಾ ಶಾಫಿ ಸಅ ದಿ ಯನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಗಾದಿ ಪೈಪೋಟಿಯಲ್ಲಿ ಮೌಲಾನಾ ಶಾಫಿ ಸಅದಿ ಹೆಸರು ಮುಂಚೂಣಿಯಲ್ಲಿತ್ತು.ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕರ ನಡುವಿನ ಸಂಧಾನದಲ್ಲಿ ಶಾಫಿ ಸಅದಿಯವರಿಗೆ ಸೂಕ್ತ ಸ್ಥಾನಮಾನದ ಭರವಸೆ ನೀಡಿ ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾಗಿ ತೀರ್ಮಾನಿಸಲಾಗಿತ್ತು. ಕಳೆದ ಮೂರು ತಿಂಗಳಿಂದ ಶಾಫಿ ಸಅದಿ ಬೆಂಗಳೂರು ಅಧಿಕಾರ ಸ್ವೀಕರಿಸದ ಕಾರಣ ಅನಿಶ್ಚಿತತೆಯಲ್ಲಿ ಮುಂದುವರೆದಿತ್ತು.
ಇದೀಗ ಅಲ್ಪಸಂಖ್ಯಾತ ವಕ್ಫ್ ಸಚಿವರಾದ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಮಾರ್ಗದರ್ಶನದಂತೆ ಮೌಲಾನಾ ಶಾಫಿ ಸಅದಿ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಸರ್ಕಾರದ ಆದೇಶವೂ ಹೊರಬಿದ್ದಿದೆ. ಸಾಮಾನ್ಯವಾಗಿ ವಕ್ಫ್ ಕೌನ್ಸಿಲ್ ವಕ್ಫ್ ಸಚಿವರು ಅಧ್ಯಕ್ಷರಾಗಿ ಸದಸ್ಯರು ಮಾತ್ರ ಆಯ್ಕೆ ಮಾಡುವ ವಾಡಿಕೆಯಾಗಿದೆ. ಶಾಫಿ ಸಅದಿ ಗೆ ವಿಶೇಷ ಸ್ಥಾನವನ್ನು ಕಲ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ನೇರವಾಗಿ ರಾಜ್ಯ ಆರ್ಥಿಕ ಇಲಾಖೆಯ ಅನುಮತಿ ಪಡೆದು ಹೊಸ ಸ್ಥಾನವನ್ನು ಕಲ್ಪಿಸಿ ವಕ್ಫ್ ಸಚಿವರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಉಪಾಧ್ಯಕ್ಷ ಸ್ಥಾನವನ್ನು ಹೆಚ್ಚುವರಿ ಸ್ಥಾನವಾಗಿ ಕಲ್ಪಿಸಿ ಅಧಿಕಾರ ನೀಡಲಾಗಿದೆ.
ಪಕ್ಷಾತೀತವಾಗಿ ತನ್ನ ಛಾಪನ್ನು ಹೊಂದಿರುವ , ವಕ್ಫ್ ಮಂಡಳಿ ಅಧ್ಯಕ್ಷರಾಗಿ ಮಾದರಿಯೋಗ್ಯ ಸೇವೆ ಸಲ್ಲಿಸಿರುವ ಶಾಫಿ ಸಅದಿಯ ಆಯ್ಕೆಗೆ ವ್ಯಾಪಕ ಅಭಿನಂದನೆಗಳು ಮತ್ತು ಪ್ರಶಂಸೆಗಳು ವ್ಯಕ್ತವಾಗುತ್ತಿದೆ.
ಕರ್ನಾಟಕ ವಕ್ಫ್ ಪರಿಷತ್ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಮೌಲಾನ ಶಾಫಿ ಸಅದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಪತ್ರ ನೀಡಿದರು. ಈ ವೇಳೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಜಮೀರ್ ಅಹ್ಮದ್ ಖಾನ್ , KMF ಅಧ್ಯಕ್ಷ ಭೀಮ ನಾಯ್ಕ್ ಉಪಸ್ಥಿತರಿದ್ದರು.
ವರದಿ : ಪರ್ವಿಜ್ ಅಹಮದ್
