ಮೈಸೂರು ಗ್ಯಾಸ್ ಬಲೂನ್ ಸ್ಪೋಟದಿಂದ ಒಬ್ಬರು ಸಾವನ್ನಪ್ಪಿದ ದುರ್ಘಟನೆ ಅರಮನೆ ಗೇಟ್ ಬಳಿ ನಡೆದಿದೆ.ಘಟನೆಯಲ್ಲಿ 4 ಮಂದಿ ಗಾಯಗೊಂಡಿದ್ದು ಈ ಪೈಕಿ ಇಬ್ಬರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.ಕ್ರಿಸ್ಮಸ್ ಸಂಭ್ರಮದಲ್ಲಿ ಮುಳುಗಿದ್ದ ಸಾಂಸ್ಕೃತಿಕ ನಗರಿ ಮೈಸೂರು ಘಟನೆಯಿಂದ ಬೆಚ್ಚಿಬಿದ್ದಿದೆ.ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
