ಕಾಳಗಿ: ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುವಾಗ ಅಧಿಕಾರಿಗಳು ತಮ್ಮ ಸ್ವಪ್ರತಿಷ್ಠೆಯನ್ನು ಬಿಟ್ಟು ಪರಸ್ಪರ ಸಹಕಾರ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಬೇಕು, ಸುಖಾ ಸುಮ್ಮನೆ ಸಮಯ ವ್ಯರ್ಥ ಮಾಡಬಾರದೆಂದು ಅಧಿಕಾರಿಗಳಿಗೆ ಶಾಸಕ ಡಾ. ಅವಿನಾಶ್ ಜಾಧವ್ ಸಲಹೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡ ಟಾಸ್ಕ್ ಫೋರ್ಸ್ ಸಭೆಯಲ್ಲಿ ವಿವಿಧ ಸಮಸ್ಯೆಗಳನ್ನು ಆಲಿಸಿ ಶಾಸಕ ಅವಿನಾಶ್ ಜಾಧವ್ ಕೆಲವು ಅಧಿಕಾರಿಗಳಿಗೆ ಕುಂಟು ನೆಪ ಹೇಳದೆ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಸಂಬಂಧ ಪಟ್ಟ ಇಲಾಖೆಗೆ ಅಧಿಕಾರಿಗಳ ಸಹಕಾರದೊಂದಿಗೆ ತಮ್ಮ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಕೊಳ್ಳಬೇಕು. ಬರೀ ಬಾಯಿ ಮಾತಲ್ಲಿ ಹೇಳದೆ ಕೆಲಸ ಮಾಡಿ ತೋರಿಸಿ ಜನರು ಸಮಸ್ಯೆಯಿದೆ ಎಂದು ನನ್ನ ಹತ್ತಿರ ಬಂದರೆ ಅದಕ್ಕೆ ಅಧಿಕಾರಿಗಳೇ ನೇರ ಹೊಣೆ ಎಂದು ಹೇಳಿದರು.
ಬೇಸಿಗೆ ಬಿಸಿಲು ನಮ್ಮ ಭಾಗದಲ್ಲಿ ಹೆಚ್ಚು ಇರುವುದರಿಂದ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಆದೇಶ ಮಾಡಿದರು.
ತಾಲೂಕಿನಲ್ಲೆಡೆ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದೆ ಎಂದು ದೂರು ಬರುತ್ತಿವೆ ನಾನು ಅದಕ್ಕೆ ಸಹಿಸುವುದ್ದಿಲ್ಲಾ ಎಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಮಾಡಿದ ಶಾಸಕರು ಅಲ್ಲಾಪುರ, ಹಲಚೇರಾ, ರಟಕಲ್, ಕೊಡದೂರ, ಮಂಗಲಗಿ, ಸೇರಿ, ರುಮ್ಮನಗೂಡ, ರಟಕಲ್ ಇನ್ನಿತರ ಗ್ರಾಮಗಳಲ್ಲಿ ಕುಡಿಯಲು ನೀರು ಸಿಗುತ್ತಿಲ್ಲಾ ಎಂದು ದೂರುಗಳು ಬರುತ್ತಿವೆ ಆದಷ್ಟೂ ಬೇಗನೆಯ ಅಧಿಕಾರಿಗಳು ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಿ ನನಗೆ ಮಾಹಿತಿ ನೀಡಬೇಕು ಎಂದು ತರಾಟೆಗೆ ತೆಗೆದುಕೊಂಡರು.
ಕಾಳಗಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಬಗ್ಗೆ ದೂರುಗಳು ಬರುತ್ತಿವೆ ಗಮನ ಹರಿಸಿ ಸಮಸ್ಯೆಗಳನ್ನು ಬಗೆಹರಿಸಿ ಎಂದು ಪಪಂ ಅಧಿಕಾರಿಗೆ ಸೂಚನೆ ನೀಡಿದಾಗ ಪಪಂ,ಯಲ್ಲಿ ರಸ್ತೆ ಮತ್ತು ಇನ್ನಿತರ ಅಭಿವೃದ್ಧಿ ಕಾರ್ಯಗಳಿಗಾಗಿ ಅನುದಾನ ಇಲ್ಲಾ ಎಂದಾಗ ಕೆ ಕೆ ಆರ್ ಡಿ ಬಿ ಇಂದ ಅನುದಾನದ ನೀಡುವ ಬರವಸೆ ನೀಡಿದರು. ಇದೇ ವೇಳೆ ಕಾಳಗಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿ ಜನರಿಗೆ ತೊಂದರೆ ಯಾಗುತ್ತಿದ್ದು ಬಗೆಹರಿಸಲು ಅಧಿಕಾರಿಗಳಿಗೆ ತಿಳಿಸಿದರು.
ತಾಲ್ಲೂಕು ಆಡಳಿತದಿಂದ ಕೆಲಸಗಳು ಆಗುತ್ತಿಲ್ಲಾ ಎಂದು ದೂರುಗಳು ಬರುತ್ತಿವೆ ಕೆಲಸ ಕಾರ್ಯಗಳನ್ನು ಮಾಡದ ಸಿಬ್ಬಂದಿಗಳ ಮೇಲೆ ಶಿಸ್ತುಕ್ರಮ ಜರುಗಿಸಿ ಜನರಿಗೆ ಯಾವುದೇ ಅಡೆ ತಡೆ ಯಾಗದಂತೆ ನೋಡಿಕೊಳ್ಳಲು ದಂಡಾಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯ ಇಲಾಖೆಯ ಅಧಿಕಾರಿಗೆ ಬಿಸಿಲಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ ಘಮಾವತಿ ರಾಠೋಡ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ//ಬಸವಲಿಂಗಪ್ಪ ಡಿಗ್ಗಿ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪಂಕಜಾ, ಲೋಕೋಪಯೋಗಿ ಇಲಾಖೆ ಎಇಇ ಮಲ್ಲಿಕಾರ್ಜುನ ದಂಡಿನ, ಗ್ರೇಡ್ ೨ ತಹಶಿಲ್ದಾರ ರಾಜೇಶ್ವರಿ, ಪಂಚಾಯತ ರಾಜ್ ಎಇಇ,ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿ,ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಮತ್ತು ವಿವಿಧ ಅಧಿಕಾರಿಗಳು ಇದ್ದರೂ