ಹುಣಸೂರು ಮೇಕೆ ಮೇಯಿಸುತ್ತಿದ್ದ ಯುವಕನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದಿದೆ.ಹುಣಸೂರು ತಾಲೂಕಿನ ಗುರುಪುರ ಗ್ರಾಮದ ನಾಗಾಪುರದ 5 ನೇ ಬ್ಲಾಕ್ ನಲ್ಲಿ ಘಟನೆ ನಡೆದಿದೆ.ಹರೀಶ್ ಮೃತ ದುರ್ದೈವಿ.ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಸಾವನ್ನಪ್ಪಿದ್ದಾನೆ. ಹರೀಶ್ ಮದುವೆ ಆಗಿ 8 ತಿಂಗಳಾಗಿತ್ತು.ಮೃತ ಹರೀಶ್ ನಾಗಾಪುರ 5 ಬ್ಲಾಕ್ ನಿವಾಸಿ.ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

