ಕೆ.ಆರ್.ನಗರ: ಪಟ್ಟಣದ ಪುರಸಭೆ ಬಯಲು ಮಂದಿರದಲ್ಲಿ ಕೇಂದ್ರದ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜಾ.ದಳದಿಂದ ಆಯೋಜಿಸಿದ್ದ ಅಭಿಮಾನದ ಅಭಿನಂದನಾ ಸಮಾರಂಭಕ್ಕೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಜನರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಅವರಿಗೆ ಮನಃಪೂರ್ವಕವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಸಮಾರಂಭ ಯಶಸ್ವಿಯಾಗಲು ಜಾ.ದಳ ಮತ್ತು ಬಿಜೆಪಿ ಮೈತ್ರಿ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಿದ್ದಾರೆ. ಎಲ್ಲರಿಗೂ ಅಭಿನಂದನೆಗಳು ಎಂದಿದ್ದಾರೆ.
