ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಹೊಸಕೋಟೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ನಡೆದ ರಸ್ತೆ ಕಾಮಗಾರಿ ಗುದ್ದಲಿ ಪೂಜಾ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಡಿ. ರವಿಶಂಕರ್ ರವರಿಗೆ ನಾಯಕ ಸಮಾಜದ ವತಿಯಿಂದ ಶಾಲು ಹಾಕಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ದೊಡ್ಡ ಸ್ವಾಮಿಗೌಡ, ರಾಜ್ಯ ವಾಲ್ಮೀಕಿ ನಿಗಮದ ಅಧ್ಯಕ್ಷ ಎಸ್.ಸಿ.ಬಸವರಾಜು, ರಾಜ್ಯ ಕಾಂಗ್ರೆಸ್ ಎಸ್.ಟಿ ಘಟಕದ ಕಾರ್ಯದರ್ಶಿ ಹೊಸೂರು ಕಲ್ಲಳ್ಳಿ ಶ್ರೀನಿವಾಸ್, ಕೆ.ಆರ್.ನಗರ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ತಿಪ್ಪರು ಮಹಾದೇವ, ಮುಂಜನಹಳ್ಳಿ ಮಹಾದೇವ್, ಗ್ರಾಪಂ ಮಾಜಿ ಅಧ್ಯಕ್ಷ ಮಧು, ಸಾಲಿಗ್ರಾಮ ಎಸ್ ಘಟಕದ ಅಧ್ಯಕ್ಷ ನರಸಿಂಹ ನಾಯಕ, ಚಿಕ್ಕಭೇರ್ಯ ಶ್ರೀನಿವಾಸ್ ಇತರರು ಭಾಗವಹಿಸಿದ್ದರು.
