ಹುಣಸೂರು ರೋಗಿಗಳಿಂದ ಹಣ ಪಡೆದು ಚಿಕಿತ್ಸೆ ನೀಡಿದ ಆರೋಪದ ಹಿನ್ನಲೆ ಹುಣಸೂರು ತಾಲೂಕು ಹನಗೂಡು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಹೇಮಂತ್ ಕುಮಾರ್ ಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ನೋಟೀಸ್ ಜಾರಿಯಾಗಿದೆ.2 ದಿನಗಳ ಕಾಲಾವಕಾಶ ನೀಡಿದ್ದು ಸೂಕ್ತ ಸಮಜಾಯಿಷಿ ನೀಡುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.

ಡಾ.ಹೇಮಂತ್ ಕುಮಾರ್ ರವರು ರೋಗಿಗಳಿಂದ ಹಣ ಪಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳ ಹಿಂದೆ ಪ್ರಸಾರವಾಗಿತ್ತು.ಈ ಹಿನ್ನಲೆ ಎಚ್ಚೆತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.
