ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಸುಕ್ಷೇತ್ರ ಬಸವ ಜನ್ಮಸ್ಥಳವಾದ ಇಂಗಳೇಶ್ವರ ಗ್ರಾಮದ ಶ್ರೀ ಜಗದ್ಗುರು ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವವು ಇದೆ ಡಿಸೆಂಬರ್ 11 ರಿಂದ 18 ರ ವರೆಗೆ ಅದ್ದೂರಿಯಾಗಿ ನಡೆಯಲಿದ್ದು ಈ ವರ್ಷವು ಜಾತ್ರೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, 1996 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬಳಗದಿಂದ ಯೋಗ ಗುರುಗಳಾದ ಕಾಶಿನಾಥ್ ಅವಟಿ ನೇತೃತ್ವದಲ್ಲಿ ಡಿಸೆಂಬರ್ 9 ರಿಂದ 15 ರವರೆಗೆ ಪ್ರತಿದಿನ ಬೆಳಿಗ್ಗೆ 5:30 ರಿಂದ 7:30ರ ವರೆಗೆ ಯೋಗ ಶಿಬಿರ ನಡೆಯಲಿದೆ.
ದಿನಾಂಕ 11 ರಂದು ಶ್ರೀ ಜಗದ್ಗುರು ರೇವಣಸಿದ್ದೇಶ್ವರ ಆಗಮನ ಪಲ್ಲಕ್ಕಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಶ್ರೀ ಬಸವೇಶ್ವರ ಭಜನಾ ಮಂಡಳಿ ಇವರಿಂದ ಭಜನಾ ಸೇವೆ ನಡೆಯಲಿದೆ ಹಾಗೂ ಅನ್ನಪ್ರಸಾದ ನಡೆಯಲಿದ್ದು, ಆದೆ ದಿನ ರಾತ್ರಿ ಚೌಡಕಿಪದಗಳು ಜರುಗಲಿವೆ. ದಿನಾಂಕ 12 ರಂದು ಬೆಳಿಗ್ಗೆ 8 ಗಂಟೆಗೆ ಗೇರ್ ಗಾಡಿಯ ಸ್ಟೋ ಸೈಕಲ್ ಮೋಟರ್ ರೆಸ್, ಸಂಜೆ 4 ಗಂಟೆಗೆ ಚಿನ್ನು ಗ್ರೂಪ್ ವತಿಯಿಂದ ಹಾಲ ಹಲ್ಲಿನ ಟಗರು, ಎರಡು ಹಲ್ಲಿನ ಟಗರು, ನಾಲ್ಕು ಹಲ್ಲಿನ ಟಗರು ಹಾಗೂ ಓಪನ್ ಟಗರಿನ ಕಾಳಗ ನಡೆಯಲಿದೆ. ಸಂಜೆ 7ಗಂಟೆಗೆ 2007ನೇ ಸಾಲಿನ ಎಸ್ ಎಸ್ ಎಲ್ ಸಿ ಗೆಳೆಯರ ಬಳಗದ ವತಿಯಿಂದ ಶ್ರೀ ಕಲಾಗುರು ಮೆಲೋಡಿಸ್ ಇಂಗಳೇಶ್ವರ ಇವರಿಂದ ಹಾಸ್ಯರಸಮಂಜರಿ ಕಾರ್ಯಕ್ರಮ ಜರುಗಲಿದೆ. ದಿನಾಂಕ 13 ರಂದು 2007ನೇ ಸಾಲಿನ ಎಸ್ ಎಸ್ ಎಲ್ ಸಿ ಗೆಳೆಯರ ಬಳಗದ ವತಿಯಿಂದ ಶಿರಗುಪ್ಪಿಯ ಶ್ರೀ ಸ್ವಾಮಿ ವಿವೇಕಾನಂದ ಯೋಗಿಮಂದಿರ ಮಲ್ಲಗಂಬ ತರಬೇತಿ ಕೇಂದ್ರದಿಂದ ಮಲ್ಲಗಂಬ ಪ್ರದರ್ಶನಗೊಳ್ಳಲಿದೆ. ದಿನಾಂಕ 14 ರಂದು ಬೆಳಿಗ್ಗೆ 9 ಗಂಟೆಗೆ ಒಂದು ಎತ್ತು ಒಂದು ಕುದುರೆ ಓಟದ ಸ್ಪರ್ಧೆ ನಡೆಯಲಿದೆ. ಜಿಲ್ಲಾಡಳಿತ ಜಿಲ್ಲಾ ಪಂಚಾಯತ ವಿಜಯಪುರ,ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪುರ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಬಸವನಬಾಗೇವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕುದುರಿಸಾಲೊಡಗಿ ಹಾಗೂ ಗ್ರಾಮ ಪಂಚಾಯಿತಿ ಇಂಗಳೇಶ್ವರ ಇವರ ಸಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದು ಅದೇ ದಿನ ಸಂಜೆ 5 ಗಂಟೆಗೆ 2000ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ 25ನೇ ವರ್ಷದ ಬೆಳ್ಳಿ ಮಹೋತ್ಸವ ಸ್ನೇಹ ಸಮ್ಮಿಲನ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ಸನ್ಮಾನ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ತದನಂತರ ಕೊಣ್ಣೂರಿನ ಜೈ ಕಿಸಾನ್ ಸಂಸ್ಕೃತಿಕ ಮತ್ತು ಜನಪದ ಕಲಾತಂಡದಿಂದ ಜನಪದ ಜಾತ್ರೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀ ಸಿದ್ದಪ್ಪ ಬಿದರಿಯವರು ಪಾಲ್ಗೊಳ್ಳಲಿದ್ದಾರೆ.
ದಿನಾಂಕ 15 ರಂದು ಬೆಳಿಗ್ಗೆ 8 ಗಂಟೆಗೆ ಜೋಡು ಎತ್ತಿನ ಓಟದ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ರೇವಣಸಿದ್ದೇಶ್ವರ ನವೋದಯ ಮತ್ತು ಸೈನಿಕ ಕೋಚಿಂಗ್ ಕ್ಲಾಸ್ ಇಂಗಳೇಶ್ವರ ವತಿಯಿಂದ ತಾಲೂಕು ಮಟ್ಟದ ರಸಪಶ್ನೆ ಕಾರ್ಯಕ್ರಮ ಜರುಗಲಿದೆ. ಬೆಳಗ್ಗೆ 10 ಗಂಟೆಗೆ ಶ್ರೀ ನೆಲಮಾಳಸಿದ್ದೇಶ್ವರ ಡೊಳ್ಳಿನ ಹಾಡಕಿ ಸಂಘ ಇಂಗಳೇಶ್ವರ ಹಾಗೂ ಶ್ರೀ ರೇವಣಸಿದ್ದೇಶ್ವರ ಡೊಳ್ಳಿನ ಹಾಡಿಸಿ ಸಂಘ ಮನಗೂಳಿ ಇವರಿಂದ ಡೊಳ್ಳಿನ ಪದಗಳು ಜರಗುವುದು. ಸಂಜೆ 7:30ಕ್ಕೆ 2003 ನೇ ಸಾಲಿನ ಬಾಲ್ಯದ ಗೆಳೆಯರ ಬಳಗದ ವತಿಯಿಂದ ಜೀ ಕನ್ನಡ ಮಾದರಿಯ ಸರಿಗಮಪ ಗ್ರಾಂಡ್ ಫಿನಾಲೆ ಆದ್ಧೂರಿ ಕಾರ್ಯಕ್ರಮ ಹಾಗೂ ಸಾಧನೆಗೈದ ಸಾಧಕರಿಗೆ ಸನ್ಮಾನ ನಡೆಯಲಿದೆ. ಅದೇ ದಿನ ರಾತ್ರಿ 9ಕ್ಕೆ ಶ್ರೀ ಬಸವೇಶ್ವರ ಭಜನಾ ಮಂಡಳಿ ಇಂಗಳೇಶ್ವರ ಹಾಗೂ ಪ್ರೀತಿಯ ಪಾರಿವಾಳ ಖ್ಯಾತಿಯ ರಮೇಶ್ ಕುರಬಗಟ್ಟಿ ಇವರ ಶ್ರೀ ಜಗದ್ಗುರು ಶ್ರೀ ಶಿವಾನಂದ ಭಜನಾ ಮಂಡಳಿ ಕುರುಬಗಟ್ಟಿ ಇವರಿಂದ ಬಜನಾ ಪದಗಳು ಜರಗಲಿವೆ. ಹೀಗೆ ಇನ್ನೂ ಹಲವಾರು ಕಾರ್ಯಕ್ರಮ ಜರುಗಲಿವೆ ಎಂದು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಜಾತ್ರಾ ಕಮಿಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಯಮನಪ್ಪ ಚೌಧರಿ