ಬಲಪಂಥೀಯ ರಾಜಕೀಯವು ದ್ವೇಷದ ರಾಜಕೀಯ ಅಲ್ಲ, ಭಯದ ರಾಜಕೀಯ – ಸಂಸದ ಸಸಿಕಾಂತ್ ಸೆಂಥಿಲ್

Share

ಉಡುಪಿ: ಈ ದೇಶದಲ್ಲಿ ನಡೆಯುತ್ತಿರುವ 80-20 ಬಲಪಂಥೀಯ ರಾಜಕೀಯವು ದ್ವೇಷದ ರಾಜಕೀಯ ಅಲ್ಲ, ಬದಲು ಭಯದ ರಾಜಕೀಯ ನಡೆಸುತ್ತಿದೆ. ಜನರನ್ನು ಭಯ ಪಡಿಸಿ ಮತ ಪಡೆದು ಅಧಿಕಾರಕ್ಕೇರುವುದೇ ಅದರ ಉದ್ದೇಶವಾಗಿದೆ. ಇದೇ ಭಯದಿಂದ ಅಭದ್ರತೆ ಮೂಡಿ ಸಮಾಜದಲ್ಲಿ ಸಂಘರ್ಷ ಉಂಟಾಗುತ್ತದೆ. ಈ ಸಂಘರ್ಷ ಇಡೀ ಸಮಾಜಕ್ಕೆ ಅಪಾಯಕಾರಿಯಾಗಿ ಪರಿಣಮಿಸಲಿದೆ. ಆದುದರಿಂದ ಇದನ್ನು ತಪ್ಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಅದರಲ್ಲೂ ಬಹುಸಂಖ್ಯಾತರಿಗೆ ಇದೆ. ಸಂವಿಧಾನದ ಮೂಲಕ ಈ ಭಯದ ರಾಜಕೀಯವನ್ನು ವಿರೋಧಿಸಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನೀವೇ ಬೆಂಕಿ ಇಟ್ಟ ಹಾಗೆ ಆಗುತ್ತದೆ. ಬಲಪಂಥೀಯ ರಾಜಕೀಯ ಬೆಳೆಯುಲು ಬಹುಸಂಖ್ಯಾತ ಸಮುದಾಯದ ಮೌನವೇ ಮುಖ್ಯ ಕಾರಣ ಎಂದು ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಉಡುಪಿಯ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ರವಿವಾರ ಆಯೋಜಿಸಲಾದ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾನವ ರತ್ನ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು ದೇ ಸಂದರ್ಭದಲ್ಲಿ 2023-24ನೇ ಸಾಲಿನ ಮಾನವ ರತ್ನ ಪ್ರಶಸ್ತಿಯನ್ನು ಸಂಸದ ಸಸಿಕಾಂತ ಸೆಂಥಿಲ್, ಸೇವಾ ರತ್ನ ಪ್ರಶಸ್ತಿಯನ್ನು ಕಾರ್ಕಳದ ಉದ್ಯಮಿ ಕೆ.ಎಸ್.ನಿಸಾರ್ ಅಹ್ಮದ್ ಮತ್ತು ಚೊಚ್ಚಲ ಸೌಹಾರ್ದ ರತ್ನ ಪ್ರಶಸ್ತಿ ಯನ್ನು ಉಡುಪಿಯ ಧರ್ಮಗುರು ಫಾ.ವಿಲಿಯಮ್ ಮಾರ್ಟಿಸ್ ಅವರಿಗೆ ಪ್ರದಾನ ಮಾಡಲಾಯಿತು. ಯಾಸಿನ್ ಮಲ್ಪೆ ಮಾತನಾಡಿ ಸಮುದಾಯಗಳ ನಡುವೆ ಇರುವ ದ್ವೇಷ ಅಪನಂಬಿಕೆಗಳ ನಡುವೆ ಇರುವ ಗೋಡೆಗಳನ್ನು ಕೆಡವಿ ಪರಸ್ಪರ ಅರಿಯು ಮತ್ತು ತಿಳಿವಳಿಕೆಯ ವಾತಾವರಣವನ್ನು ಸೃಷ್ಟಿಸುದೇ ಈ ಕಾರ್ಯಕ್ರಮದ ಉದ್ದೇಶ ಎಂದು ತಿಸಿದರು ಹಿಂದಿನ ದಿನಗಳಲ್ಲಿ ನಮ್ಮ ಸಮಾಜದಲ್ಲಿ ಸ್ವಭಾವಿಕವಾಗಿ ವಿವಿಧ ಸಮುದಾಯದಗಳ ನಡುವೆ ಸ್ನೇಹ ಮತ್ತು ಸೌಹಾರ್ದ ಇತ್ತು ಇಂತಹ ಸಮಾವೇಶಗಳ ಅವಶ್ಯಕತೆ ಇರಲಿಲ್ಲ ಎಂದು ಹೇಳಿದರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಸಾಧಕರಾದ ಸಾಹಿತಿ ಡಾ.ಗಣನಾಥ ಎಕ್ಕಾರ್, ಉಡುಪಿ ಜಿಪಂ ಮಾಜಿ ಅಧ್ಯಕ್ಷೆ ಸರಸು ಡಿ.ಬಂಗೇರ, ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಸರಳಾ ಕಾಂಚನ್, ದಲಿತ ನಾಯಕ ಅಣ್ಣಪ್ಪನಕ್ರೆ ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಮತ್ತು ಹಸೈನಾರ್ ಕೋಡಿ ಕುಂದಾಪುರ ಅವರನ್ನು ಸನ್ಮಾನಿಸಲಾಯಿತು ಬರಕಾ ಇಂಟರ್‌ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ಶರ್ಫುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಜಯಪ್ರಕಾಶ ಹೆಗ್ಡೆ, ಒಕ್ಕೂಟದ ಗೌರವಾಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ, ಉದ್ಯಮಿ ಅಫ್ರೋಝ್ ಅಸ್ಸಾದಿ ದುಬೈ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭಾ ಸದಸ್ಯ ರಮೇಶ್ ಕಾಂಚನ್, ಸಹ ಬಾಳ್ವೆಯ ಅಧ್ಯಕ್ಷ ಕೆ.ಫಣಿರಾಜ್, ದಸಂಸ ರಾಜ್ಯ ಸಂಘಟನಾ ಕಾರ್ಯದರ್ಶಿ ಸುಂದರ್ ಮಾಸ್ತರ್, ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷ ಗ್ರೇಸಿ ಕೊಯಲೋ, ಕುಂದಾಪುರದ ಕೊಡಿ ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾ.ಫಿರ್ದೌಸ್, ಕಾರ್ಯಕ್ರಮ ಸಂಚಾಲಕರಾದ ಇಕ್ಬಾಲ್ ಕಟಪಾಡಿ, ಇಕ್ಬಾಲ್ ಮನ್ನಾ ಉಪಸ್ಥಿತರಿದ್ದರು. ಹಾಫಿಝ್ ಯೂನುಸ್ ಕುರ್‌ಆನ್ ಪಠಿಸಿದರು. ಶಂಕರ್ ದಾಸ್ ಮತ್ತು ಬಳಗದಿಂದ ಸೌಹಾರ್ದ ಗೀತೆ, ಹೂಡೆ ಸಾಲಿಹಾತ್ ಶಾಲಾ ಶಿಕ್ಷಕಿಯರಿಂದ ಪ್ರಾರ್ಥನಾ ಗೀತೆ ಹಾಡಿದರು. ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇದ್ರೀಸ್ ಹೂಡೆ ವಂದಿಸಿದರು. ಡಾ.ಜಮಾಲುದ್ದೀನ್ ಹಿಂದಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


Share

ಸಿ. ಪಿ. ಯೋಗೇಶ್ವ‌ರ್ ಪರ ಚನ್ನಪಟ್ಟಣ ತಾಲ್ಲೂಕು ಅಕ್ಕೂರು ಜಿಪಂ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಯಾಚನೆ

Share

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಿ. ಪಿ. ಯೋಗೇಶ್ವ‌ರ್ ಪರ ಚನ್ನಪಟ್ಟಣ ತಾಲ್ಲೂಕು ಅಕ್ಕೂರು ಜಿಪಂ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಯಾಚನೆ ಮಾಡುತ್ತಿರುವುದು, ಬೆಂಗಳೂರು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಮೈಸೂರು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಕೆ. ಆರ್. ನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಸ್. ಮಹದೇವ್ ಸಾಲಿಗ್ರಾಮ ತಾಲೂಕು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯ ಶಂಕರ್ ಮುಖಂಡರಾದ ಕುಮಾರ್ ಹಾಗೂ ಮಹಿಳಾ ಸದಸ್ಯರುಗಳನ್ನು ಕಾಣಬಹುದು.


Share

ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ

Share

ಬೆಳಗಾವಿ ಜಿಲ್ಲಾ, ರಾಮದುರ್ಗ ತಾಲೂಕನಲ್ಲಿ ಭರ್ಜರಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ

ರಾಮದುರ್ಗ ತಾಲೂಕಿನ ಭಾರತಿಯ ಜನತಾ ಪಾರ್ಟಿ ಸದಸ್ಯತ್ವ ಅಭಿಯಾನವನ್ನು ನೇಕಾರ ಪೇಟೆಯಲ್ಲಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಡಾ. ನಯನಾ ಭಸ್ಮೆ ಅವರ ನೇತೃತ್ವದಲ್ಲಿ ರಾಮದುರ್ಗದ ಕಿಲಬನೂರಿನಲ್ಲಿ ಕಾರ್ಯಕ್ರಮವನ್ನು ನೆಡೆಸಲಾಯಿತು.
ಸದಸ್ಯತ್ವ ಅಭಿಯಾನದಿಂದ ಬಿಜೆಪಿ ಪಕ್ಷವನ್ನು ಇನ್ನು ಗಟ್ಟಿಗೊಳಿಸಲು ಮಹಿಳಾ ತಂಡವು ಪ್ರೋತ್ಸಾಹಿಸಿ,ಉತ್ಸಾಹದಿಂದ ಸದಸ್ಯತ್ವದ ಅಭಿಯಾನವನ್ನು ಯಶಸ್ವಿಯಾಗಿಸಲು ಮುಂದಾದರು, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಇಳಿಗೇರ ಇವರು ಸದಸ್ಯತ್ವ ಅಭಿಯಾನದ ಮಹತ್ವದ ಬಗ್ಗೆ ತಿಳಿ ಹೇಳಿದರು 192 ನೇ ಬೂತ್ ಮಟ್ಟದ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಸದಸ್ಯತ್ವ ನೋಂದಣಿಯನ್ನು ಮಾಡಸಲಾಯಿತು.
ಈ ಸಂದರ್ಭದಲ್ಲಿ ರಾಧಿಕಾ ಧೂತ್, ನಾಗವೇಣಿ ಕುಲಕರ್ಣಿ ಸುವರ್ಣ, ಅಕ್ಷತಾ ನಂದರಗಿ, ಅನುಷಾ ಗರಡಿಮಣಿ, ರುದ್ರಮ್ಮ ಕಲ್ಲೂರ, ನೂರಕ್ಕೂ ಹೆಚ್ಚು ಮಹಿಳಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ರಾಮಚಂದ್ರ ಹ ಕುಕಡಿ ರಾಮದುರ್ಗ


Share

ಭಾರತೀಯ ಜನತಾ ಪಾರ್ಟಿ ಗ್ರಾಮೀಣ ಕಾರವಾರ ಪಕ್ಷದ ಕಚೇರಿಯಲ್ಲಿ ಮೋರ್ಚಾದ ಸಭೆ

Share

ಭಾರತೀಯ ಜನತಾ ಪಾರ್ಟಿ ಗ್ರಾಮೀಣ ಕಾರವಾರ ಪಕ್ಷದ ಕಚೇರಿಯಲ್ಲಿ ಮೋರ್ಚಾದ ಸಭೆ ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿಯವರ ಅಧ್ಯಕ್ಷತೆ ಯಲ್ಲಿ ನಡೆಯಿತು, ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿ ಆರಂಭಿಸಲಾಯಿತು ಸಭೆಯಲ್ಲಿ ಮಹಿಳಾ ಮೋರ್ಚಾದ ಆರತಿ ಬಾನಾವಳಿ, ಓ ಬಿ ಸಿ ಮೋರ್ಚಾದ ಶೃದ್ದಾ ನಾಯ್ಕ್, ಎಸ್ ಸಿ ಮೋರ್ಚಾದ ಉದಯ ಬಸಟ್ಟಿ, ಸುಜಾತಾ, ಬಾಂದೆ ಕರ್, ಸಂಘಟನೆ ಕುರಿತು ಮಾತನಾಡಿದರು ಯುವ ಮೋರ್ಚಾದ ಸುರೇಂದ್ರ ಗಾವಕರ್, ರೈತ ಮೋರ್ಚಾದ ದೇವಿದಾಸ್ ಉಪಸ್ಥಿತರಿದ್ದರು ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ ಮಾತನಾಡಿ ಮೋರ್ಚಾಗಳು ಪಕ್ಷದ ಬೆನ್ನೆಲುಬು ಆ ನಿಟ್ಟಿನಲ್ಲಿ ತಾವುಗಳು ಕಾರ್ಯ ಪ್ರವರ್ಥ ರಾಗಿ ಕೆಲಸ ಮಾಡಬೇಕು ನಿಕಟ ಪೂರ್ವ ಶಾಸಕಿ ರಾಜ್ಯ ಬಿ ಜೆ ಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ್ ರವರು ನಮಗೆ ಬೆನ್ನೆಲುಬು ಆಗಿ ನಿಂತು ಸಂಘಟನೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು ವೇದಿಕೆ ಮೇಲೆ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ್ ಅಮದಳ್ಳಿ, ಸೂರಜ್ ದೇಸಾಯಿ, ಜಿಲ್ಲಾ ಮಹಿಳಾ ಕಾರ್ಯದರ್ಶಿ ಸುಜಾತಾ ಬಾಂದೆಕರ್, ಮಹಿಳಾ ಮೋರ್ಚಾ ಅಧ್ಯಕ್ಷರು ಕಲ್ಪನಾ ನಾಯ್ಕ್, ಪ್ರಧಾನ ಕಾರ್ಯದರ್ಶಿ, ಚಂದಾ ನಾಯ್ಕ್, ಅಶ್ವಿನಿ ಮಾಲ್ಸೇಕರ್, ಎಲ್ಲಾ ಮೋರ್ಚಾದ ಸದಸ್ಯರು ಕಾರ್ಯಕರ್ತರು, ಸಾಮಾಜಿಕ ಜಾಲತಾಣದ ಕಿಶನ್ ಕಾಂಬ್ಳೆ ಕಾರ್ಯಕರ್ತರು ಉಪಸ್ಥಿತರಿದ್ದರು ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಂದಾ ನಾಯ್ಕ್ ಸ್ವಾಗತಿಸಿದರುತದ ನಂತರ ಏಕ್ ಪೇಡ್ ಮಾ ಕೆ ನಾಮ, ಗಿಡ ನೆಡುವ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು


Share

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿದ್ರೂ ಸುಮ್ನೆ ಇರಬೇಕಾ?: ಬಾಯಿಗೆ ಬೀಗ ಹಾಕಿಕೊಳ್ಳಿ ಎಂದ ಡಿಕೆಶಿಗೆ ರಾಜಣ್ಣ ಪ್ರಶ್ನೆ

Share

ಬೆಂಗಳೂರು: ಮುಖ್ಯಮಂತ್ರಿ ಮತ್ತು ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾಳಯದಲ್ಲಿ ಶುರುವಾಗಿರುವ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.ಈ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಾರ್ನಿಂಗ್​ ನೀಡಿದರೂ ಕೇರ್ ಮಾಡದ ಸಚಿವ ಕೆ.ಎನ್​ ರಾಜಣ್ಣ ಅವರು, ನೋಟಿಸ್​ ಕೊಡಲಿ ಬಿಡಿ, ಕೊಟ್ಮೇಲೆ ನಾನು ಹೇಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆಎನ್ ರಾಜಣ್ಣ, ನಾವು ಹೇಳಿದರೆ ಏನು ತಪ್ಪಾಗುತ್ತೆ. ವಾರ್ನಿಂಗ್​​ಗೆಲ್ಲಾ ನಾನು ಕೇಳುತ್ತೇನಾ. ನಾವು ಅಲ್ಲ. ಬಾಯಿಗೆ ಎಲ್ಲರೂ ಬೀಗ ಹಾಕಿಕೊಳ್ಳಬೇಕು. ಅವರು ಹೇಳಿದ್ದಕ್ಕೆ ಬಾಯಿ ಮುಚ್ಚಿಕೊಂಡು ಇರಲು ಆಗಲ್ಲ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆಗೆ ತಿರುಗೇಟು ನೀಡಿದರು.ಸ್ವಾಮಿಗಳು ಹೇಳಿದಂತೆ ಸಿಎಂ ಮಾಡುವುದಕ್ಕೆ ಆಗುತ್ತಾ? ಎಲ್ಲರೂ ಸುಮ್ಮನೆ ಇದ್ರೆ ನಾನೂ ಸುಮ್ಮನೆ ಇರುತ್ತೇನೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿದ್ರೂ ನಾವು ಸುಮ್ಮನಿರಬೇಕಾ? ಸ್ವಾಮೀಜಿಗಳು ಹೇಳೋದನ್ನು ಕೇಳೋದಕ್ಕೆ ಆಗುತ್ತಾ ಎಂದು ಸಾಲು ಸಾಲು ಪ್ರಶ್ನೆ ಮಾಡಿದರು.

ಶಾಮನೂರು ಶಿವಶಂಕರಪ್ಪ ಅವರನ್ನು ಸಿಎಂ ಮಾಡಿ ಅಂತಾ ಕೆಲವು ಶ್ರೀಗಳು ಕೇಳುತ್ತಾರೆ. ಸತೀಶ್ ಜಾರಕಿಹೊಳಿ ಮಾಡಿ ಅಂತಾ ಅವ್ರ ಸ್ವಾಮೀಜಿ ಹೇಳುತ್ತಾರೆ. ಸ್ವಾಮೀಜಿ ಹೇಳಿರೋದು ಪ್ರಜಾಪ್ರಭುತ್ವಕ್ಕೆ ಅವಮಾನ. ನಾನು ಸಿಎಂ ಪರ ಅಂತಲ್ಲ, ನಾನು ಪ್ರಜಾಪ್ರಭುತ್ವ ಪರ ಎಂದು ರಾಜಣ್ಣ ಹೇಳಿದ್ದಾರೆ.

ನಾನು ಹಗರಣ ಮಾಡಿದರೆ ತನಿಖೆ ಮಾಡಲಿ. ಬಡವರ ಪರ ಸಿಎಂ ಸಿದ್ದರಾಮಯ್ಯ ಕೆಲಸ ಮಾಡುತ್ತಾರೆ. ಅದಕ್ಕೆ ಸಿದ್ದರಾಮಯ್ಯರ ಜೊತೆ ನಾವಿದ್ದೇವೆ. ಸಂಸದರಾಗಿ ಡಿ.ಕೆ.ಸುರೇಶ್ ಒಳ್ಳೆಯ ಕೆಲಸ ಮಾಡಿದ್ದಾರೆ. ಪರಿಣಾಮಕಾರಿಯಾಗಿ ಕೆಲಸ ಮಾಡಿರುವವರಲ್ಲಿ ಅವರು ಪ್ರಮುಖರು. ಯಾರು ಸೋಲಿಸಿದ್ದು, ಸ್ವಾಮೀಜಿಗಳು ಒಂದಾಗಿ ಅವರನ್ನು ಸೋಲಿಸಿದ್ದರು. ದೇವೇಗೌಡರು ಹುಟ್ಟು ಹಾಕಿದ ಸ್ವಾಮೀಜಿಗಳು ಇವರು. ಯಾರನ್ನ ಸಿಎಂ ಮಾಡಬೇಕೆಂದು ವರಿಷ್ಠರು, ಶಾಸಕರು ನಿರ್ಧರಿಸುತ್ತಾರೆ. ಸ್ವಾಮೀಜಿಗಳು ಹೇಳಿದಂತೆ ಸಿಎಂ ಮಾಡುವುದಕ್ಕೆ ಆಗಲ್ಲ ಎಂದಿದ್ದಾರೆ.


Share

ಜುಲೈ 12 ರಂದು ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಈ ಉಪಚುನಾವಣೆಗೆ ಜೂನ್ 25 ರಂದು ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ ಎರಡು ಕೊನೆಯ ದಿನಾಂಕವಾಗಿದೆ.

ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.ಜನವರಿ 24 ರಂದು ಶೆಟ್ಟರ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ತೆರವಾಗಿತ್ತು. ಅವರ ಅವಧಿ ಜೂನ್ 2028 ರಲ್ಲಿ ಕೊನೆಗೊಳ್ಳಬೇಕಿತ್ತು. ಆದರೆ 68 ವರ್ಷದ ಮಾಜಿ ಸಿಎಂ ಜನವರಿಯಲ್ಲಿ ಬಿಜೆಪಿಗೆ ಮರಳಿದ ನಂತರ ಕಾಂಗ್ರೆಸ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಂತರ ಬಿಜೆಪಿಯಿಂದ ಲೋಕಸಭೆ ಚುನಾವಣೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಜಗದೀಶ್ ಶೆಟ್ಟರ್ ಅವರು ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.


Share

ಶರಣ ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸೋಣ..!

Share

ಕಲಬುರಗಿ:- 12ನೇ ಶತಮಾನದಲ್ಲಿ ಶರಣರು ನೀಡಿದ ಸಾಹಿತ್ಯ ಕೊಡುಗೆ ಮತ್ತು ಸಂಸ್ಕೃತಿ ನಾವೆಲ್ಲ ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಸಮ್ಮೇಳನ ಸರ್ವಾಧ್ಯಕ್ಷೆ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್. ಅಪ್ಪ ಅಭಿಪ್ರಾಯಪಟ್ಟರು.
ಶ್ರೀ ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ನಗರದ ಪೂಜ್ಯ ಲಿಂ. ಡಾ. ಬಸವರಾಜಪ್ಪ ಅಪ್ಪ ಸ್ಮರಣಾರ್ಥ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶರಣ ಸಾಹಿತ್ಯ ಮತ್ತು ಸಾಂಸ್ಕೃತಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರೋಟದಲ್ಲಿ ಮೆರವಣಿಗೆಯಲ್ಲಿ ಶರಣರ ವಚನ ಕಟ್ಟುಗಳ ಪ್ರದರ್ಶನ, ಮಹಿಳೆಯರ ಕುಂಭ ಕಳಸ, ಗೊಂಬೆ ಕುಣಿತ ಮತ್ತು ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ನೃತ್ಯ ನೋಡಿದರೆ ಇಂದಿನ ಆಧುನಿಕ ಯುಗದಲ್ಲಿಯೂ ಕಲೆ, ಸಂಸ್ಕೃತಿ ಉಳಿಸಿಕೊಂಡು ಹೋಗುತ್ತಿರುವುದನ್ನು ನೋಡಿ ತುಂಬಾ ಖುಷಿಯಾಯಿತು. ಈ ಸಂಸ್ಕೃತಿ ನಿರಂತರವಾಗಿರಲಿ ಎಂದು ಆಶಯ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ, ವೈದ್ಯಕೀಯ ಕ್ಷೇತ್ರದ ಸಾಧಕರಿಗೆ ಗೌರವ ಸನ್ಮಾನ, ಸಾಧಕರಿಗೆ ರಾಜ್ಯ ಮಟ್ಟದ ಬಸವ ಪುರಸ್ಕಾರ, ಬಸವ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಂತರ ಮೊದಲ ಗೋಷ್ಠಿ ಮತ್ತು ಕವಿಗೋಷ್ಠಿ ನಡೆದ ಬಳಿಕ ಸಂಜೆ ಸಮಾರೋಪ ಸಮಾರಂಭ ನಡೆಯಿತು.ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನದ ಮಠದ ಡಾ. ಸಿದ್ಧತೋಟೇಂದ್ರ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಶ್ರೀನಿವಾಸ ಸರಡಗಿಯ ಶ್ರೀ ಗುರು ಚಿಕ್ಕವೀರೇಶ್ವರ ಸಂಸ್ಥಾನ ಹಿರೇಮಠದ ಡಾ. ರೇವಣಸಿದ್ಧ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ನೇತೃತ್ವ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕ ಅಲ್ಲಮಪ್ರಭು ಪಾಟೀಲ್, ಸ್ವಾಗತ ಸಮಿತಿಯ ಶಿವಕಾಂತ ಮಹಾಜನ, ಕಾರ್ಯಾಧ್ಯಕ್ಷ ದಿಲೀಪ ಆರ್. ಪಾಟೀಲ್, ಸ್ವಾಗತ ಸಮಿತಿ ಸಂಯೋಜಕ ಮಲ್ಲಿನಾಥ ಪಾಟೀಲ್ ಕಾಳಗಿ, ಚಂದ್ರಕಾಂತ ಕಾಳಗಿ, ಸುರೇಶ ಬಡಿಗೇರ , ಅಂಬಾರಾಯ ಕೋಣೆ , ಬಸವಂತರಾಯ ಕೋಳಕೂರ್ ಸೇರಿದಂತೆ ಇತರರಿದ್ದರು.ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ್ ಪಾಳಾ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಸಮ್ಮೇಳನದ ಸಂಚಾಲಕ ಪ್ರೊ.ಯಶವಂತರಾಯ ಅಷ್ಠಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗಲಿಂಗಯ್ಯ ಮಠಪತಿ ಕಾರ್ಯಕ್ರಮ ನಿರೂಪಿಸಿದರು.ಇದೇ ಸಂದರ್ಭದಲ್ಲಿ ನುಪೂರ ಸಂಸ್ಕೃತಿ, ನೃತ್ಯ ಮತ್ತು ಸಂಗೀತ ಸಂಸ್ಥೆಯ ಸೌಖ್ಯ ಪ್ರವೀಣ ಕುಲಕರ್ಣಿ ತಂಡದ ರಮ್ಯಶ್ರೀ ಮತ್ತು ಪ್ರಾರ್ಥನಾ ಅವರ ನೃತ್ಯ ರೂಪಕ ಕಣ್ಮನ ಸೆಳೆಯಿತು.

ಗಮನ ಸೆಳೆದ ಸಾರೋಟದ ಮೆರವಣಿಗೆ:

ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮತ್ತು ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್. ಅಪ್ಪ ಅವರಿಗೆ ಬೆಳಗ್ಗೆ ೧೦ ಗಂಟೆಗೆ ಸಾರೋಟದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಗೆ ಎಸಿಪಿ ಡಿ.ಜಿ.ರಾಜಣ್ಣ ಚಾಲನೆ ನೀಡಿದರು. ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದಿಂದ ಸಮ್ಮೇಳನದ ಸಭಾಭವನದವರೆಗೂ ಮಹಿಳೆಯರಿಂದ ಕುಂಭ ಕಳಸ ಮೆರವಣಿಗೆ ಮತ್ತು ಶರಣರ ವಚನ ಕಟ್ಟುಗಳ ಪ್ರದರ್ಶನ, ಗೊಂಬೆ ಕುಣಿತ, ವಿವಿಧ ಕಲಾ ತಂಡಗಳ ನೃತ್ಯ ಗಮನ ಸೆಳೆಯಿತು. ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ರಾಷ್ಟಧ್ವಜಾರೋಹಣ ನೆರವೇರಿಸಿದರು. ಪ್ರಭು ಶ್ರೀ ತಾಯಿ ಅವರು ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಮ್ಮೇಳನದ ಶರಣ ಸತಿ ಎಂಬ ಸ್ಮರಣ ಸಂಚಿಕೆಯ ಮುಖಪುಟವನ್ನು ಬಿಡುಗಡೆ ಮಾಡಲಾಯಿತು.೧೨ನೇ ಶತಮಾನದ ಚಳವಳಿ ಕ್ರಾಂತಿಕಾರಿ ಚಳವಳಿಯಾಗಿತ್ತು. ಕಾಯಕವೇ ಅದರ ಮೂಲ ಉದ್ದೇಶವಾಗಿತ್ತು. ನಾವೆಲ್ಲ ಶರಣರ ಹೋರಾಟಕ್ಕೆ ಮಾನ್ಯತೆ ನೀಡಿ ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ಪ್ರೊ ಯಶವಂತರಾಯ ಅಷ್ಠಗಿ
ಸಮ್ಮೇಳನದ ಸಂಚಾಲಕ
ಶ್ರೀ ಶರಣಬಸವೇಶ್ವರ ಸಂಸ್ಥಾನದ ದೊಡ್ಡಪ್ಪ ಅಪ್ಪ ಮತ್ತು ನೀಲಮ್ಮ ಗೌಡತಿಯವರು ತ್ರಿವಿಧ ದಾಸೋಹ ಸೇವೆ ಮಾಡುತ್ತಿದ್ದರು. ಅವರಂತೆಯೇ ಡಾ. ಶರಣಬಸವಪ್ಪ ಅಪ್ಪ ಮತ್ತು ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವನವರು ಅದನ್ನು ಮುಂದುವರಿಸಿಕೊಂಡು ಹೋಗುವುದರ ಜೊತೆಗೆ ನಿರ್ಗತಿಕರಿಗೆ ನೆರವಾಗುತ್ತಿದ್ದಾರೆ.
ಪ್ರಭು ಶ್ರೀ ತಾಯಿ, ಅಕ್ಕಮಹಾದೇವಿ ಆಶ್ರಮ, ಬಿದ್ದಾಪೂರ, ‌

ವರದಿ-ಡಾ ಎಂ ಬಿ ಹಡಪದ ಸುಗೂರ ಎನ್


Share

ಸ್ಥಳೀಯ ಚುನಾವಣೆಗೆ ಸಿದ್ಧತೆ: ಜಿಲ್ಲಾ ಘಟಕಗಳ ಬಲಪಡಿಸಲು ಬಿಜೆಪಿ ಮುಂದು!

Share

ಬೆಂಗಳೂರು: ಲೋಕಸಭೆ ಚುನಾವಣೆ ಪೂರ್ಣಗೊಂಡಿದ್ದು, ಸ್ಥಳೀಯ ಚುನಾವಣೆಗಳಿಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. ಇದರಂತೆ ಜಿಲ್ಲಾ ಘಟಕಗಳ ಪುನಶ್ಚೇತನಗೊಳಿಸಲು ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಎಂಟು ಲೋಕಸಭಾ ಸ್ಥಾನಗಳಲ್ಲಿ ಸೋತಿರುವ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪಕ್ಷವು ಪ್ರಯತ್ನ ನಡೆಸುತ್ತಿದ್ದು, ಸಮಿತಿ ರಚಿಸಲು ಮುಂದಾಗಿದೆ. ಈ ಸಮಿತಿಯು ಆಯಾ ಜಿಲ್ಲಾ ಘಟಕಗಳಿಗೆ ಭೇಟಿ ನೀಡಿ, ಸೋಲಿಗೆ ಕಾರಣಗಳ ತಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

ಈ ಭೇಟಿಗಳ ನಂತರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ತಂಡ ಜಿಲ್ಲಾ ಘಟಕಗಳನ್ನು ಪುನಶ್ಚೇತನಗೊಳಿಸಲು ಮುಂದಾಗಲಿದ್ದಾರೆಂದು ಹೇಳಲಾಗುತ್ತಿದೆ.

ವಿಜಯೇಂದ್ರ ಅವರು ನವೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಕೆಲವು ಜಿಲ್ಲಾಧ್ಯಕ್ಷರನ್ನು ಬದಲಾಯಿಸಿದ್ದಾರೆ. ಆದರೂ ಹಲವು ಘಟಕಗಳು ಒಂದೇ ಪದಾಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎನ್ನಲಾಗಿದೆ.ಅವಧಿ ಮುಗಿದರೂ ಅವರನ್ನು ಮುಂದುವರಿಸಲಾಗುತ್ತಿದ್ದು, ಇವರು ಉತ್ಸಾಹದಿಂದ ಕೆಲಸ ಮಾಡುತ್ತಿಲ್ಲ ಎಂದು ದಕ್ಷಿಣ ಜಿಲ್ಲಾ ಘಟಕದ ಪದಾಧಿಕಾರಿಯೊಬ್ಬರು ದೂರಿದ್ದಾರೆ.

ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಮಾತನಾಡಿ, ನಾನು ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗ ಜಿಲ್ಲಾ ಘಟಕಗಳೆಲ್ಲವೂ ಪುನರುಜ್ಜೀವನಗೊಂಡವು. ವಿಜಯೇಂದ್ರ ಅವರು ತಮ್ಮ ವಿವೇಚನೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂದು ಹೇಳಿದ್ದಾರೆ.ಹಲವು ಜಿಲ್ಲೆಗಳ ಪದಾಧಿಕಾರಿಗಳು ಬದಲಾವಣೆಗೆ ಮುಂದಾಗಿದ್ದು, ಸಭೆಗೆ ಕರೆದ ನಂತರ ವಿಜಯೇಂದ್ರ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಹೇಳಿದ್ದಾರೆ.

ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಬೇಕಿದ್ದು, ಪರಿಣಾಮಕಾರಿ ಪದಾಧಿಕಾರಿಗಳ ತಂಡ ಮುಖ್ಯ ಎಂದು ತಿಳಿಸಿದ್ದಾರೆ.

ಜಿಲ್ಲಾ ಮತ್ತು ಮಂಡಲ ಮಟ್ಟದ ಪದಾಧಿಕಾರಿಗಳ ಸ್ಥಾನಕ್ಕೆ ಹೊಸ ಮುಖಗಳನ್ನು ನೇಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯ ಘಟಕದ ಮಾಜಿ ಪದಾಧಿಕಾರಿಯೊಬ್ಬರು ಮಾತನಾಡಿ, ಹಲವು ಸ್ಥಳಗಳಲ್ಲಿ ಘಟಕಗಳು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಇದರಿಂದ ಬಿಜೆಪಿ ಒಂಬತ್ತು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಸಮಸ್ಯೆಯನ್ನು ಎಷ್ಟು ಬೇಗ ಪರಿಹರಿಸಲಾಗುತ್ತದೆಯೋ ಅಷ್ಟು ಒಳ್ಳೆಯದು ಎಂದು ಹೇಳಿದ್ದಾರೆ.


Share

ವಿರೋಧ ಪಕ್ಷದ ನಾಯಕರಿಗೆ ಇನ್ನೂ ಹಂಚಿಕೆಯಾಗಿಲ್ಲ ಸರ್ಕಾರಿ ವಸತಿ ಗೃಹ..!

Share

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಸರ್ಕಾರಿ ನಿವಾಸ ಇನ್ನೂ ಸಿಕ್ಕಿಲ್ಲ. ಸರ್ಕಾರಿ ನಿವಾಸಕ್ಕೆ ಆರ್.‌ಅಶೋಕ್ ಮನವಿ ಮಾಡಿದರೂ ಸರ್ಕಾರ ಮಾತ್ರ ಈವರೆಗೂ ಯಾವುದೇ ಸ್ಪಂದನೆ ನೀಡಿಲ್ಲ. ಈ ಬಗ್ಗೆ 4 ಬಾರಿ ಪತ್ರ ಬರೆದರೂ ಸರ್ಕಾರಿ ನಿವಾಸ ನೀಡದೆ ಇರುವುದು ಚರ್ಚೆಗೆ ಗ್ರಾಸವಾಗಿದೆ.

ವಿಪಕ್ಷ ನಾಯಕನಾಗಿರುವ ನನಗೆ ಯಾವುದಾದರು ಒಂದು ಸರ್ಕಾರಿ ನಿವಾಸ ನೀಡಿ ಎಂದು ಆರ್ ಅಶೋಕ್ ಮನವಿ ಮಾಡಿದ್ದರು. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿವಾಸ ಅಥವಾ ಕುಮಾರಕೃಪಾ ನಿವಾಸಕ್ಕೆ ಮನವಿ ಮಾಡಿದ್ದರು. ಆದರೆ, ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ದು ಎಂದು ಅಶೋಕ ಅವರ ಆಪ್ತರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವರಿಗೆ ಆದ್ಯತೆಯ ಮೇಲೆ ಅಧಿಕೃತ ನಿವಾಸಗಳನ್ನು ನೀಡಲಾಗಿದೆ, ಆದರೆ ಪ್ರತಿಪಕ್ಷ ನಾಯಕನಿಗೆ ಸಂಬಂಧಿಸಿದಂತೆ ಮೂಲ ಶಿಷ್ಟಾಚಾರವನ್ನು ಅನುಸರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದು ರಾಜ್ಯ ಸರ್ಕಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮುಖ್ಯ ಕಾರ್ಯದರ್ಶಿಗೆ ಮತ್ತು ಈ ವರ್ಷದ ಫೆಬ್ರವರಿಯಲ್ಲಿ ಸಿಎಂಗೆ ಅಶೋಕ ಅವರು ಬರೆದ ಪತ್ರದಲ್ಲಿ ನಂ. 1 ಕುಮಾರಕೃಪಾ ಪೂರ್ವ ನಿವಾಸ, ನಂ. 1 ರೇಸ್ ವ್ಯೂವ್ ಕಾಟೇಜ್, ನಂ.‌ 2 ರೇಸ್ ವ್ಯೂವ್ ಕಾಟೇಜ್ ಮೂರರಲ್ಲಿ ಒಂದು ನಿವಾಸಕ್ಕೆ ಆರ್ ಅಶೋಕ್ ಮನವಿ ಮಾಡಿದ್ದರು. ಆದರೆ, ಸರ್ಕಾರ ಇನ್ನೂ ಸ್ಪಂದಿಸಿಲ್ಲ ಎನ್ನಲಾಗಿದೆ.ಅಧಿಕೃತ ನಿವಾಸದ ಸಿಗದ ಕಾರಣ ಅಶೋಕ್ ಅವರು, ಪ್ರಸ್ತುತ ಜಯನಗರದಲ್ಲಿರುವ ತಮ್ಮ ಸ್ವಗೃಹದಲ್ಲಿಯೇ ಅಧಿಕೃತ ಸಭೆಗಳನ್ನು ನಡೆಸುತ್ತಿದ್ದಾರೆ.

ರಾಜ್ಯದಾದ್ಯಂತ ಜನರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಲು ಬರುತ್ತಾರೆ. ಅಧಿಕಾರಿಗಳನ್ನು ಭೇಟಿ ಮಾಡುವುದನ್ನು ಹೊರತುಪಡಿಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಅವರು ನಿಯಮಿತವಾಗಿ ಪ್ರತಿಪಕ್ಷದ ಶಾಸಕರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ, ಈ ಸಭೆಗಳಲ್ಲಿ ಪಾಲ್ಗೊಳ್ಳುವವರಿಗೆ ವಿಧಾನಸೌಧದ ಬಳಿ ಇರುವ ಅಧಿಕೃತ ನಿವಾಸವು ಸಹಾಯ ಮಾಡುತ್ತದೆ.

ಅಶೋಕ ಮನವಿ ಮಾಡಿರುವ ಕ್ವಾಟ್ರರ್ಸ್‌ ಖಾಲಿ ಇದ್ದರೂ ಹಲವು ಬಾರಿ ಪತ್ರ ಬರೆದು ಅಧಿಕಾರಿಗಳನ್ನು ಭೇಟಿ ಮಾಡಿದರೂ ಸರ್ಕಾರ ಇನ್ನು ಅಧಿಕೃತ ನಿವಾಸ ಮಂಜೂರು ಮಾಡಿಲ್ಲ. ಇಂತಹ ನಿರ್ಧಾರಗಳನ್ನು ತಡಮಾಡದೆ ತೆಗೆದುಕೊಳ್ಳಬಹುದು, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯ ಕಾರ್ಯದರ್ಶಿ ಏಕೆ ಏನನ್ನೂ ನಿರ್ಧರಿಸುತ್ತಿಲ್ಲ ಎಂಬುದು ನಮಗೆ ತಿಳಿದಿಲ್ಲ ಎಂದು ನಾಯಕರೊಬ್ಬರು ಹೇಳಿದ್ದಾರೆ.


Share

ಪ್ರಭಾವಿ ನಾಯಕರ ಕ್ಷೇತ್ರದಲ್ಲೇ ಹಿನ್ನಡೆ, ಭ್ರಷ್ಟಾಚಾರ ಆರೋಪ: ಸಚಿವರ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ!

Share

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಡಿಮೆ ಸ್ಥಾನ, ವಾಲ್ಮೀಕಿ ನಿಗಮದಲ್ಲಿ ಹಗರಣ ಆರೋಪ ಹಿನ್ನೆಲೆ ಸಚಿವರ ಜತೆ ರಾಹುಲ್ ಗಾಂಧಿ ಪ್ರತ್ಯೇಕ ಸಭೆ ನಡೆಸಿ, ತರಾಟೆಗೆ ತೆಗೆದುಕೊಂಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳ ಉಸ್ತುವಾರಿ ಹೊತ್ತ ಸಚಿವರು ಕ್ಷೇತ್ರದಲ್ಲಿ ಕಡಿಮೆ ಮತಗಳಿಸಿ, ಸೋತಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರಾಹುಲ್‌, ನೀವು ಹೇಳಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಿಮ್ಮ ಮೇಲಿತ್ತು. ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದವರ ಮೇಲೆ ಯಾವ ಕ್ರಮ ಕೈಗೊಳ್ಳಬೇಕು. ಮುಂದಿನ ದಿನದಲ್ಲಿ ಹೀಗಾಗದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ, ಸಚಿವರು ರಾಜ್ಯ ಸರ್ಕಾರದ ವರ್ಚಸ್ಸಿಗೆ ದಕ್ಕೆ ಬರದ ಹಾಗೆ ನೋಡಿಕೊಳ್ಳಬೇಕು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬಾರದು. ವಿರೋಧ ಪಕ್ಷಗಳ ವಾಗ್ದಾಳಿಗೆ ಸಿಲುಕದಂತೆ ಕೆಲಸ ಮಾಡಲು ಎಲ್ಲ ಸಚಿವರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆಂದು ಎಂದು ತಿಳಿದು ಬಂದಿದೆ.

ಚಿತ್ರದುರ್ಗ, ಕೋಲಾರ, ತುಮಕೂರು ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಆಂತರಿಕ ಕಚ್ಚಾಟದಿಂದ ಪಕ್ಷದ ಸೋಲಿನ ವರದಿ ರಾಹುಲ್ ಬಳಿ ಇತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈಗಾಗಲೇ ಈ ಬಗ್ಗೆ ಕ್ರಮಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆಇದೀಗ ಸ್ವತಃ ರಾಹುಲ್ ಗಾಂಧಿಯವರೇ ಸಚಿವರೊಂದಿಗೆ ಸಭೆ ನಡೆಸಿದ್ದು, ಇದರ ಬೆನ್ನಲ್ಲೇ ಪಕ್ಷದ ಅಭ್ಯರ್ಥಿಗಳ ಗೆಲ್ಲಿಸುವಲ್ಲಿ ವಿಫಲವಾಗಿರುವ ಸಚಿವರ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ರಾಹುಲ್ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಎಲ್ಲ ಸಚಿವರೊಂದಿಗೆ ಚರ್ಚಿಸಿದ್ದು, ಚುನಾವಣಾ ಫಲಿತಾಂಶದ ಬಗ್ಗೆ ವರದಿ ಕೇಳಿದ್ದಾರೆ. ನಮ್ಮ ಎಲ್ಲ ನಾಯಕರ ಜತೆ ಚರ್ಚಿಸಿ ಶೀಘ್ರದಲ್ಲೇ ವರದಿ ಸಲ್ಲಿಸಲಾಗುವುದು ಎಂದು ಡಿಕೆ. ಶಿವಕುಮಾರ್ ಅವರು ಸುದ್ದಿಗಾರರಿಗೆ ಹೇಳಿದರು.

ರಾಜ್ಯದಿಂದ ಪಕ್ಷಕ್ಕೆ 5-6 ಸ್ಥಾನಗಳನ್ನು ರಾಹುಲ್ ಗಾಂಧಿ ಹೆಚ್ಚು ನಿರೀಕ್ಷಿಸಿದ್ದರು. ಶನಿವಾರ ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಡೆಯಲಿದ್ದು, ಸಭೆಯಲ್ಲಿ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಭಾಗವಹಿಸುತ್ತಿದ್ದೇವೆ. ವಾಪಸಾದ ನಂತರ ಪಕ್ಷದೊಳಗಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಪರಿಣಾಮ ಕುರಿತು ಚರ್ಚೆಗಳಾಗಿಲ್ಲ. ಲೋಕಸಭೆಯಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದಂತೆ ವಿಶೇಷವಾಗಿ ಕೇಂದ್ರದ “ಮಲತಾಯಿಯ” ಧೋರಣೆ ಕುರಿತು ಪ್ರಸ್ತಾಪಿಸುವಂತೆ ನೂತನ ಚುನಾಯಿತ ಸಂಸದರಿಗೆ ಸೂಚಿಸಿದರು. ಕಾಂಗ್ರೆಸ್ ಫಲಿತಾಂಶ ಸುಧಾರಿಸಿದೆ. ಪಕ್ಷದ ಸಂಸದರು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ಸೂಚಿಸಿದ್ದಾರೆಂದು ಹೇಳಿದರು.

ಪಕ್ಷದ ಹಿರಿಯ ನಾಯಕರಾಗಿರುವ ಗೃಹ ಸಚಿವ ಡಾ.ಪರಮೇಶ್ವರ್ ಹಾಗೂ ಇತರೆ ನಾಯಕರು ಬೆಂಗಳೂರಿನಲ್ಲಿಯೇ ಇದ್ದರೂ ಸಭೆಗೆ ಹಾಜರಾಗಿರಲಿಲ್ಲ. ತುಮಕೂರಿನಲ್ಲಿ ಪಕ್ಷದ ಸೋಲು ಅಸಮಾಧಾನ ತಂದಿರಬಹುದು ಎಂದು ಹೇಳಲಾಗುತ್ತಿದೆ.

ಸಚಿವರಿಗೆ ಯಾವುದೇ ಔಪಚಾರಿಕ ಆಹ್ವಾನ ಇರಲಿಲ್ಲ. ಹೀಗಾಗಿಯೇ ಹಲವು ನಾಯಕರು ಸಭೆಗೆ ಹಾಜರಾಗಿರಲಿಲ್ಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.


Share
1 2 3 7