ರೋಟರಿ ಪರಿವಾರದ ಡಾಕ್ಟರ್ ಹಾಗೂ ಸಿ.ಎ ಗಳಿಗೆ ವಿಧಾತ್ರಿ ಅಕಾಡೆಮಿಯಿಂದ ಸನ್ಮಾನ.

Share

ಕುಮಟಾ : ರೋಟರಿ ಕ್ಲಬ್ ಹಾಗೂ ವಿಧಾತ್ರಿ ಅಕಾಡೆಮಿಯ ಸಹಯೋಗದಲ್ಲಿ, ಇಲ್ಲಿನ ನಾದಶ್ರೀ ಕಲಾಕೇಂದ್ರದಲ್ಲಿ ನಡೆದ ರೋಟರಿ ವಾರದ ಸಭೆಯಲ್ಲಿ ಕುಮಟಾ ತಾಲ್ಲೂಕಿನ ರೋಟರಿಯನ್ ಡಾಕ್ಟರ್ ಗಳಿಗೆ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಗಳಿಗೆ ಡಾಕ್ಟರ್ಸ್ ಡೇ ಮತ್ತು ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ನಿಮಿತ್ತ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.ಹಿರಿಯ ವೈದ್ಯ ಡಾ. ಡಿ. ಡಿ. ನಾಯ್ಕ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಡಾಕ್ಟರ್ ಗಳ ಕೆಲಸ ಸಾಮಾನ್ಯ ಕೆಲಸವಲ್ಲಾ, ಅವರು ದಿನದ ಇಪ್ಪತ್ತು ನಾಲ್ಕು ಗಂಟೆಗಳ ಕಾಲ ಸೇವೆಯನ್ನು ಒದಗಿಸುವ ಮನಸ್ಸಿನಲ್ಲಿಯೇ ಇರಬೇಕಾಗುತ್ತದೆ. ಕುಮಟಾದ ವೈದ್ಯರುಗಳು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ರೋಗವನ್ನು ಗುಣಪಡಿಸುವ ಕಾರ್ಯವನ್ನು ನಿರಂತರವಾಗಿ, ನಿಸ್ವಾರ್ಥವಾಗಿ ಮಾಡುತ್ತಾ ಬಂದಿದ್ದಾರೆ. ಡಾಕ್ಟರ್ ಗಳ ಸೇವೆಯನ್ನು ಗುರುತಿಸಿ ರೋಟರಿ ಕ್ಲಬ್ ಹಾಗೂ ವಿಧಾತ್ರಿ ಅಕಾಡೆಮಿಯವರು ಗೌರವಿಸುತ್ತಿರುವುದು ಅವರ ಜನಪರ ಕಾಳಜಿಗೆ ಹಿಡಿದ ಕೈ ಗನ್ನಡಿಯಾಗಿದೆ ಎಂದರು.ಇನ್ನೋರ್ವ ಖ್ಯಾತ ವೈದ್ಯ ಹೈಟೆಕ್ ಆಸ್ಪತ್ರೆಯ ಡಾ. ನಿತೀಶ ಶಾನಭಾಗ ಅವರು ಗೌರವ ಸ್ವೀಕರಿಸಿ ಮಾತನಾಡುತ್ತಾ ಮಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿಧಾತ್ರಿ ಅಕಾಡೆಮಿಯು ಇಲ್ಲಿನ ಕೊಂಕಣ ಎಜುಕೇಶನ್ ಟ್ರಸ್ಟ್ ನ ಸಹಭಾಗಿತ್ವದಲ್ಲಿ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಗುರುರಾಜ ಶೆಟ್ಟಿಯವರ ನೇತೃತ್ವದಲ್ಲಿ ಮುನ್ನಡೆಯುತ್ತಿದ್ದು, ಕುಮಟಾ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತ ಬಂದಿದೆ. ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಇಲ್ಲಿನ ವಿದ್ಯಾರ್ಥಿಗಳ ಸಾಧನೆ ಜನಮೆಚ್ಚುವಂತಾಗಿದೆ, ಹಾಗೆಯೇ ರೋಟರಿ ಕ್ಲಬ್ ನ ಸೇವಾ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ವಿಧಾತ್ರಿ ಹಾಗೂ ರೋಟರಿ ಕ್ಲಬ್ ನ ಸೇವಾ ಕಾರ್ಯಗಳು ಹೀಗೆ ನಿರಂತರವಾಗಿ ನಡೆಯುತ್ತಿರಲಿ ಎಂದು ಶುಭ ಹಾರೈಸಿದರು.ರೋಟರಿ ಕ್ಲಬ್ ಕುಮಟಾ ಶಾಖೆಯ ಅಧ್ಯಕ್ಷ ಅತುಲ್ ಕಾಮತ್, ಕಾರ್ಯದರ್ಶಿಯಾದ ವಿನಾಯಕ ಹೆಗಡೆ, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿಯವರು ಡಾಕ್ಟರ್ ಗಳಿಗೆ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಗಳಿಗೆ ಸನ್ಮಾನ ಕಾರ್ಯವನ್ನು ನೆರವೇರಿಸಿದರು.ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟ ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿಯವರು ಮಾತನಾಡಿ, ಚಾರ್ಟರ್ಡ್ ಅಕೌಂಟೆಂಟ್ ಗಳು ಆರ್ಥಿಕತೆಯ ಬೆನ್ನೆಲುಬು ಎಂದು ಹೇಳಬಹುದು, ಅವರ ಮಾರ್ಗದರ್ಶನ ಸದಾಕಾಲವೂ ಒಬ್ಬ ವ್ಯಕ್ತಿ, ಸಂಸ್ಥೆ, ಉದ್ಯಮ, ಹೀಗೆ ವಿವಿಧ ಕ್ಷೇತಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಹಾಗೇ ಜೀವರಕ್ಷಕರಾದ ವೈದ್ಯರುಗಳ ಸೇವಾ ಕಾರ್ಯ ದೇವರಿಗೆ ಸಮಾನವಾದ್ದು. ಈ ಸಂದರ್ಭದಲ್ಲಿ ಇಂತವರನ್ನು ಗೌರವಿಸುವುದು ನಮ್ಮ ಸೌಭಾಗ್ಯ ಎಂದೆ ಭಾವಿಸಿಕೊಳ್ಳುತ್ತೇವೆ ಎಂದರು.ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕುಮಟಾದ ಖಜಾಂಚಿ ಪವನ ಶೇಟ್ ಹಾಗೂ ಇತರ ಸದಸ್ಯರುಗಳು ಉಪಸ್ಥಿತರಿದ್ದರು

Add New Post


Share

ಮಹಿಳಾ ಪೇದೆ ಮನೆಯಲ್ಲಿ ಕಳ್ಳರ ಕೈಚಳಕ…30 ಗ್ರಾಂ ಚಿನ್ನಾಭರಣ,10 ಸಾವಿರ ನಗದು ಕಳುವು…

Share

ಹುಣಸೂರು,ಜು2,Tv23 ಕನ್ನಡ

ಮಹಿಳಾ ಪೇದೆ ಮನೆ ಬಾಗಿಲು ಮೀಟಿ ಕಳ್ಳರು ನಗದು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಹುಣಸೂರು ತಾಲೂಕು ಬಿಳಿಕೆರೆಯಲ್ಲಿ ನಡೆದಿದೆ.ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿರುವ ಪೊಲೀಸ್ ಕ್ವಾರ್ಟರ್ಸ್ ನಲ್ಲೇ ಕೃತ್ಯ ನಡೆದಿದೆ.ಹಾಡುಹಗಲೇ ಮನೆಗೆ ಕನ್ನ ಹಾಕಿದ ಖದೀಮರು 30 ಗ್ರಾಂ ಚಿನ್ನಾಭರಣ ಹಾಗೂ 10 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಸುಧಾರಾಣಿ ರವರ ಮನೆಯಲ್ಲಿ ಖದೀಮರು ಕೃತ್ಯವೆಸಗಿದ್ದಾರೆ.ಸುಧಾರಾಣಿ ರವರು ಕರ್ತವ್ಯಕ್ಕೆ ತೆರಳಿದ್ದ ಸಮಯದಲ್ಲಿ ಹಾಡುಹಗಲೇ ಖದೀಮರು ಕೃತ್ಯವೆಸಗಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಬೆರಳು ಮುದ್ರಾ ಘಟಕದ ಸಿಬ್ಬಂದಿಗಳು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share

ಉತ್ತರಕನ್ನಡ ಯುವತಿಗೆ ಒಲಿದ ವಿಶ್ವ ಸುಂದರಿ ಕಿರೀಟ

Share

ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. ಈಕೆ ಈ ಮೊದಲು 2018 ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ, ಈಗ ಅಮೆರಿಕದಲ್ಲಿ ನಡೆದ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.


Share

ಭಾರತೀಯ ಜನತಾ ಪಾರ್ಟಿ ಗ್ರಾಮೀಣ ಕಾರವಾರ ಪಕ್ಷದ ಕಚೇರಿಯಲ್ಲಿ ಮೋರ್ಚಾದ ಸಭೆ

Share

ಭಾರತೀಯ ಜನತಾ ಪಾರ್ಟಿ ಗ್ರಾಮೀಣ ಕಾರವಾರ ಪಕ್ಷದ ಕಚೇರಿಯಲ್ಲಿ ಮೋರ್ಚಾದ ಸಭೆ ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿಯವರ ಅಧ್ಯಕ್ಷತೆ ಯಲ್ಲಿ ನಡೆಯಿತು, ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿ ಆರಂಭಿಸಲಾಯಿತು ಸಭೆಯಲ್ಲಿ ಮಹಿಳಾ ಮೋರ್ಚಾದ ಆರತಿ ಬಾನಾವಳಿ, ಓ ಬಿ ಸಿ ಮೋರ್ಚಾದ ಶೃದ್ದಾ ನಾಯ್ಕ್, ಎಸ್ ಸಿ ಮೋರ್ಚಾದ ಉದಯ ಬಸಟ್ಟಿ, ಸುಜಾತಾ, ಬಾಂದೆ ಕರ್, ಸಂಘಟನೆ ಕುರಿತು ಮಾತನಾಡಿದರು ಯುವ ಮೋರ್ಚಾದ ಸುರೇಂದ್ರ ಗಾವಕರ್, ರೈತ ಮೋರ್ಚಾದ ದೇವಿದಾಸ್ ಉಪಸ್ಥಿತರಿದ್ದರು ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ ಮಾತನಾಡಿ ಮೋರ್ಚಾಗಳು ಪಕ್ಷದ ಬೆನ್ನೆಲುಬು ಆ ನಿಟ್ಟಿನಲ್ಲಿ ತಾವುಗಳು ಕಾರ್ಯ ಪ್ರವರ್ಥ ರಾಗಿ ಕೆಲಸ ಮಾಡಬೇಕು ನಿಕಟ ಪೂರ್ವ ಶಾಸಕಿ ರಾಜ್ಯ ಬಿ ಜೆ ಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ್ ರವರು ನಮಗೆ ಬೆನ್ನೆಲುಬು ಆಗಿ ನಿಂತು ಸಂಘಟನೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು ವೇದಿಕೆ ಮೇಲೆ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ್ ಅಮದಳ್ಳಿ, ಸೂರಜ್ ದೇಸಾಯಿ, ಜಿಲ್ಲಾ ಮಹಿಳಾ ಕಾರ್ಯದರ್ಶಿ ಸುಜಾತಾ ಬಾಂದೆಕರ್, ಮಹಿಳಾ ಮೋರ್ಚಾ ಅಧ್ಯಕ್ಷರು ಕಲ್ಪನಾ ನಾಯ್ಕ್, ಪ್ರಧಾನ ಕಾರ್ಯದರ್ಶಿ, ಚಂದಾ ನಾಯ್ಕ್, ಅಶ್ವಿನಿ ಮಾಲ್ಸೇಕರ್, ಎಲ್ಲಾ ಮೋರ್ಚಾದ ಸದಸ್ಯರು ಕಾರ್ಯಕರ್ತರು, ಸಾಮಾಜಿಕ ಜಾಲತಾಣದ ಕಿಶನ್ ಕಾಂಬ್ಳೆ ಕಾರ್ಯಕರ್ತರು ಉಪಸ್ಥಿತರಿದ್ದರು ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಂದಾ ನಾಯ್ಕ್ ಸ್ವಾಗತಿಸಿದರುತದ ನಂತರ ಏಕ್ ಪೇಡ್ ಮಾ ಕೆ ನಾಮ, ಗಿಡ ನೆಡುವ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು


Share

ಅಕ್ಕ ಅನ್ನಪೂರ್ಣ ನಿಧನಕ್ಕೆ ಸಂತಾಪ

Share

ಕಲಬುರಗಿ:- ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ತನ್ನ ಜೀವನದ ಉಸಿರನ್ನಾಗಿಸಿಕೊಂಡು ಸದಾಕಾಲ ಪ್ರವಚನ, ಲಿಂಗ ಪೂಜೆಯಲ್ಲಿ ತೊಡಗಿ ಜನರಲ್ಲಿ ಅದರ ಅರಿವನ್ನುಂಟು ಮಾಡುತ್ತ ಹಸನ್ಮುಖಿಯಾಗಿರುತ್ತಿದ್ದ ಅಕ್ಕ ಅನ್ನಪೂರ್ಣ ಅವರು ಲಿಂಗೈಕ್ಯರಾದುದು ಈ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಬಸವಾದಿ ಶರಣರು, ಮಹಾದಾಸೋಹಿ ಶರಣಬಸವರು ಅವರ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಶ್ರೀ ಬಾಲ ಬ್ರಹ್ಮಚಾರಿ ರಾಜಶಿವಯೋಗಿ ಮಹಾಸ್ವಾಮಿಗಳು ಶಹಾಬಾದ ಹಡಪದ ದೇವಸ್ಥಾನದ ಪೂಜ್ಯರು , ಹಾಗೂ ಕಲಬುರಗಿ ಜಿಲ್ಲೆಯ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ ಎನ್, ಮತ್ತು ಕಲಬುರಗಿ ಜಿಲ್ಲಾಧ್ಯಕ್ಷರು ಈರಣ್ಣ ಸಿ ಹಡಪದ ಸಣ್ಣೂರ, ಕಲಬುರಗಿ ಜಿಲ್ಲೆಯ ಕಾರ್ಯಾಧ್ಯಕ್ಷರು ಭಗವಂತ ಶಿಕ್ಷಕರು ಕಿರಣಗಿ, ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳು ರಮೇಶ್ ನೀಲೂರ, ಜಿಲ್ಲಾ ಉಪಾಧ್ಯಕ್ಷರು ರುದ್ರಮಣಿ ಅಪ್ಪಣ ಬಟಗೇರಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್, ಮತ್ತು ಕಲಬುರಗಿ ಜಿಲ್ಲೆಯ ನಗರಾಧ್ಯಕ್ಷರು -ಮಲ್ಲಿಕಾರ್ಜುನ ಸಾವಳಗಿ, ಮತ್ತು ಕಲಬುರಗಿ ಜಿಲ್ಲಾ ತಾಲೂಕು ಅಧ್ಯಕ್ಷರು ಚಂದ್ರಶೇಖರ ಹಡಪದ ತೋನಸನಹಳ್ಳಿ, ಮತ್ತು ಮಲ್ಲಿಕಾರ್ಜುನ ಹಡಪದ ಬನ್ನೂರ , ಸೇರಿದಂತೆ ಅನೇಕರು ತಿಳಿಸಿದ್ದಾರೆ.


Share

ಗದಗ: ಅಪಘಾತದಲ್ಲಿ ಕಾಲು ಕಳೆದುಕೊಂಡ ಯುವಕ, ಮಾನವೀಯತೆ ಮರೆತು ವಿಡಿಯೋ ಮಾಡಿದ ಜನ!

Share

ಗದಗ: ಬೈಕ್‌ನಿಂದ ಕೆಳಗೆ ಬಿದ್ದ ಯುವಕನ ಮೈಮೇಲೆ ಟಿಪ್ಪರ್ ಹರಿದು ಕಾಲು ಕಳೆದುಕೊಂಡ ಘಟನೆ ಗದಗ ಜಿಲ್ಲೆ ಮಲ್ಲಸಮುದ್ರ ಗ್ರಾಮದ ಬಳಿ ನಡೆದಿದೆ. ಬೈಕ್ ಸಾವರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಒದ್ದಾಡುತ್ತಿದ್ದರೂ ಜನ ಆತನನ್ನು ಆಸ್ಪತ್ರೆಗೆ ದಾಖಲಿಸದೆ ಮಾನವೀಯತೆ ಮರೆತು ವಿಡಿಯೋ ಮಾಡಿದ್ದಾರೆ.

ಅಪಘಾತದಲ್ಲಿ ಕಾಲು ಕಳೆದುಕೊಂಡ ವಿನಾಯಕ ಹುಡೇದ್(23) ನೋವಿನಿಂದ ರಸ್ತೆಯಲ್ಲೇ ಒದ್ದಾಡುತ್ತಿದ್ದರು. ರಕ್ತ ಸೋರುತ್ತಿದ್ದ ಕಾಲಿಗೆ ತಾವೇ ಕರ್ಚೀಫ್ ಕಟ್ಟಿಕೊಂಡಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ಜನ ಆ ಯುವಕನಿಗೆ ಸಹಾಯ ಮಾಡುವ ಬದಲು, ಆತನ ಕಷ್ಟವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿದರು ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲು ಪ್ರಾರಂಭಿಸಿದರು.

ಕೊನೆಗೆ 20 ನಿಮಿಷಗಳ ನಂತರ ಮತ್ತೊಬ್ಬ ಯುವಕ ಆತನ ಸಹಾಯಕ್ಕೆ ಬಂದಿದ್ದು, ಕೆಲ ಗ್ರಾಮಸ್ಥರು ಆತನನ್ನು ಖಾಸಗಿ ವಾಹನದಲ್ಲಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಹರ್ತಿ ಗ್ರಾಮದ ಹುಡೇದ್ ಮತ್ತು ಮಂಜುನಾಥ ಸಂಶಿ ಅವರು ಮಲ್ಲಸಮುದ್ರ ಬಳಿಯ ಆರ್‌ಟಿಒಗೆ ತೆರಳಿದ ವೇಳೆ ಈ ಅಪಘಾತ ಸಂಭವಿಸಿದೆ. ಹರ್ತಿಗೆ ಹಿಂದಿರುಗುತ್ತಿದ್ದಾಗ ಗದಗ-ಲಕ್ಷ್ಮೇಶ್ವರ ರಸ್ತೆಯಲ್ಲಿ ಬೈಕ್ ಬ್ಯಾಲೆನ್ಸ್ ತಪ್ಪಿ ಕೆಳಗೆ ಬಿದ್ದಿದೆ. ಅವರ ಹಿಂದೆ ಬಂದ ಟಿಪ್ಪರ್ ಹುಡೇದ ಅವರ ಕಾಲಿನ ಮೇಲೆ ಹರಿದಿದೆ.

ಹುಡೇದ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Share

Sanju weds Geetha-2 ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!

Share

ಸಂಜು ವೆಡ್ಸ್ ಗೀತಾ 2 ಚಿತ್ರದ ಹಾಡಿನ ಚಿತ್ರೀಕರಣ ನಡೆದಿದ್ದು ಹಾಡಲ್ಲಿ ಶ್ರೀನಗರ ಕಿಟ್ಟಿ ಮತ್ತು ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಜೊತೆ ತುಪ್ಪದ ಬೆಡಗಿ ರಾಗಿಣಿ ಕುಣಿದು ಕುಪ್ಪಳಿಸಿದ್ದಾರೆ. ಹಾಡಿಗೆ ಮಂಗ್ಲಿ ದನಿಯಾಗಿದ್ದಾರೆ.

ಪ್ರೇಮಕಥೆಗಳತ್ತ ಒಲವು ಹೊಂದಿರುವ ನಿರ್ದೇಶಕ ನಾಗಶೇಖರ್ ಈಗ ಮತ್ತೊಂದು ರೋಮ್ಯಾಂಟಿಕ್ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರಲು ಸಜ್ಜಾಗಿದ್ದಾರೆ. ದಶಕದ ಹಿಂದೆ ಬಿಡುಗಡೆಯಾದ ಸಂಜು ವೆಡ್ಸ್ ಗೀತಾ, (ಶ್ರೀನಗರ ಕಿಟ್ಟಿ ಮತ್ತು ರಮ್ಯಾ) ಭಾರಿ ಹಿಟ್ ಆಗಿತ್ತು. ನಿರ್ದೇಶಕರು ಈಗ ‘ಸಂಜು ವೆಡ್ಸ್ ಗೀತಾ 2’ ಮೂಲಕ ಹೊಸ ಪ್ರೇಮಕಥೆಯನ್ನು ಹೆಣೆದಿದ್ದಾರೆ. ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಅಭಿನಯದ ಈ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿದೆ.

ಇತ್ತೀಚೆಗೆ, ಸಂಜು ಮತ್ತು ಗೀತಾ ಅವರ ವಿವಾಹ ವಾರ್ಷಿಕೋತ್ಸವದ ಆಚರಣೆಯ ಸನ್ನಿವೇಶದ ಹಾಡನ್ನು ನಿರ್ಮಾಪಕರು ಚಿತ್ರೀಕರಿಸಿದ್ದಾರೆ. ಈ ವಿಶೇಷ ಪಾರ್ಟಿ ಹಾಡಿನಲ್ಲಿ ರಾಗಿಣಿ ದ್ವಿವೇದಿ ಕೂಡ ಕಾಣಿಸಿಕೊಂಡಿದ್ದಾರೆ. ಕುಂಬಳಗೋಡು ಬಿಜಿಎಸ್ ಪ್ರೌಢಶಾಲೆಯ ಗಾಜಿನ ಮನೆಯಲ್ಲಿ ಚಿತ್ರೀಕರಣ ನಡೆದಿದ್ದು, ಹಾಡಿನಲ್ಲಿ 200 ರಿಂದ 250 ನೃತ್ಯಗಾರರು ಭಾಗವಹಿಸಿದ್ದಾರೆ. ಈ ಹಾಡಿಗೆ ಮಾಂಗ್ಲಿ ಧ್ವನಿ ನೀಡಿದ್ದು, ಬಜರಂಗಿ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿತ್ರದ ಬಹುತೇಕ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಕೇವಲ ಎರಡು ಫೈಟ್ ಸೀಕ್ವೆನ್ಸ್‌ಗಳು ಮತ್ತು ಒಂದು ಹಾಡಿಗೆ ಪ್ಯಾಚ್‌ವರ್ಕ್ ಉಳಿದಿದೆ.

ಆಗಸ್ಟ್‌ನಲ್ಲಿ ಸಿನಿಮಾ ಬಿಡುಗಡೆ ಮಾಡುವ ಗುರಿಯನ್ನು ಹೊಂದಿರುವ ಚಿತ್ರತಂಡವು ಈಗಾಗಲೇ ಪೋಸ್ಟ್-ಪ್ರೊಡಕ್ಷನ್‌ನಲ್ಲಿ ಕೆಲಸ ಮಾಡುತ್ತಿದೆ, ಎಡಿಟಿಂಗ್ ಪೂರ್ಣಗೊಂಡಿದ್ದು ಡಬ್ಬಿಂಗ್ ಅಂತಿಮ ಹಂತದಲ್ಲಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರೀಕರಣದ ಮಹತ್ವದ ಭಾಗವು ಸ್ವಿಟ್ಜರ್ಲೆಂಡ್‌ನಲ್ಲಿ 15 ದಿನಗಳ ಕಾಲ 11 ಸ್ಥಳಗಳಲ್ಲಿ ನಡೆದಿದೆ.

ಜೊತೆಗೆ ಕುಣಿಗಲ್‌ನಲ್ಲಿ ಐದು ದಿನಗಳ ಕಾಲ ಹಾಡಿನ ದೃಶ್ಯವನ್ನು ಅದ್ದೂರಿಯಾಗಿ ಚಿತ್ರೀಕರಿಸಲಾಗಿದೆ, ಹಾಸನ ಮತ್ತು ಹಾವೇರಿಯಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮಗಳಲ್ಲಿ ಹಾಡುಗಳನ್ನು ಬಿಡುಗಡೆ ಮಾಡುವ ಯೋಜನೆ ನಡೆಯುತ್ತಿದೆ. ಪವಿತ್ರಾ ಇಂಟರ್‌ನ್ಯಾಶನಲ್ ಮೂವೀ ಮೇಕರ್ಸ್ ಬ್ಯಾನರ್‌ನಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿದ ಈ ಚಿತ್ರಕ್ಕೆ ನಾಗಶೇಖರ್ ಅವರ ಕಥೆ, ಚಿತ್ರಕಥೆ ಮತ್ತು ನಿರ್ದೇಶನವಿದೆ, ಶ್ರೀಧರ್ ವಿ ಸಂಭ್ರಮ್ ಐದು ಹಾಡುಗಳನ್ನು ರಚಿಸಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ಚೇತನ್ ಚಂದ್ರ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ಸಂಪತ್ ಕುಮಾರ್ ಖಳನಟನಾಗಿ, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮತ್ತು ಗಿಚ್ಚಿ ಗಿಲಿಗಿಲಿ ವಿನೋದ್ ನಟಿಸಿದ್ದಾರೆ. ಇದನ್ನು ಗೋಕುಲ್ ಫಿಲಂಸ್ ಮೂಲಕ 24 ಕ್ರಿಯೇಷನ್ಸ್ ವಿಶ್ವಾದ್ಯಂತ ಬಿಡುಗಡೆ ಮಾಡುವ ಯೋಜನೆಯಿದೆ.


Share

ಚಾಮರಾಜನಗರದ ಗಡಿ ಗ್ರಾಮಗಳಲ್ಲಿ ಆಂಬ್ಯುಲೆನ್ಸ್ ಕೊರತೆ: ಖಾಸಗಿ ಕಾರಿನಲ್ಲೇ ಮಹಿಳೆಗೆ ಹೆರಿಗೆ!

Share

ಮೈಸೂರು: ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ದೂರದ ಹಳ್ಳಿಗಳು ಆಂಬ್ಯುಲೆನ್ಸ್ ಸೇವೆಗಳ ಅಲಭ್ಯತೆಯಿಂದಾಗಿ ಇಲ್ಲಿನ ನಿವಾಸಿಗಳು ಅನೇಕ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ.

ಕಳೆದ ಆರು ತಿಂಗಳಿನಿಂದ ಹನೂರು ತಾಲೂಕಿನ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ಆಂಬ್ಯುಲೆನ್ಸ್‌ ಸೇವೆ ಸ್ಥಗಿತಗೊಂಡಿದ್ದು ಗ್ರಾಮಸ್ಥರು ಪರದಾಡುವಂತಾಗಿದೆ. ಎಂ.ಎಂ.ಹಿಲ್ಸ್‌ನ ಪರಿಸ್ಥಿತಿಯೂ ಅಷ್ಟೇ ಶೋಚನೀಯವಾಗಿದೆ, ದಶಕದ ಹಿಂದೆ ಖರೀದಿಸಿದ ಆಂಬ್ಯುಲೆನ್ಸ್, ಟೈರ್ ಕೊರತೆಯಿಂದ ನಿರುಪಯುಕ್ತವಾಗಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ನಿಲ್ಲಿಸಲಾಗಿದೆ. ಕೌಡಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಏಕೈಕ ಆಂಬ್ಯುಲೆನ್ಸ್ ಮಾತ್ರ ಕಾರ್ಯನಿರ್ವಹಿಸುತ್ತಿದೆ, ಆದರೆ ಈ ಎಲ್ಲಾ ಸ್ಥಳಗಳಿಗೆ ಇದೊಂದೇ ಆ್ಯಂಬುಲೆನ್ಸ್ ಹೋಗಲು ಸಮಯ ತೆಗೆದುಕೊಳ್ಳುತ್ತದೆ ಮತ್ತು ಸಾಮಾನ್ಯವಾಗಿ ತುರ್ತು ಸೇವೆಗಳಿಗೆ ಮಾತ್ರ ಕಾರ್ಯನಿರ್ವಹಿಸುತ್ತದೆ.

ಈ ಯಾಂತ್ರಿಕ ವೈಫಲ್ಯಗಳು ಹಳ್ಳಿಗರನ್ನು ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಇಕ್ಕಟ್ಟಿಗೆ ಸಿಲುಕಿಸಿದೆ. ಸೋಮವಾರ ಗರ್ಭಿಣಿ ಮಹಿಳೆಯೊಬ್ಬರಿಗೆ ಆಂಬ್ಯುಲೆನ್ಸ್ ಸೇವೆ ಸಿಗದೆ, ಖಾಸಗಿ ಕಾರಿನೊಳಗೆ ಹೆರಿಗೆ ಮಾಡುವಂತ ಪರಿಸ್ಥಿತಿ ಎದುರಾಯಿತು. ಇದು ಇಲ್ಲಿನ ಪರಿಸ್ಥಿತಿಯ ಗಂಭೀರತೆ ಬಗ್ಗೆ ಹಿಡಿದ ಕನ್ನಡಿಯಾಗಿದೆ.ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಂಬುಲೆನ್ಸ್‌ ಲಭ್ಯವಿರಲಿಲ್ಲ, ಕೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆ್ಯಂಬುಲೆನ್ಸ್ ಬರಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು. ಆಂಬುಲೆನ್ಸ್ ಗಾಗಿ ಕಾಯಲು ಪ್ರಯತ್ನಿಸಿದರು. ಆಶಾ ಕಾರ್ಯಕರ್ತೆಯರಿಂದ ಮಾಹಿತಿ ಪಡೆದ ಕೂಡಲೇ ಮಹಿಳೆಯನ್ನು ಸಾಮಾಜಿಕ ಕಾರ್ಯಕರ್ತೆಯರೊಬ್ಬರ ಖಾಸಗಿ ಕಾರಿನಲ್ಲಿ ಕರೆದುಕೊಂಡು ಹೋಗಲಾಗಿದ್ದು, ದಾರಿ ಮಧ್ಯೆ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ.

ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಹರಸಾಹಸ ಪಡುತ್ತಿರುವ ಗ್ರಾಮಸ್ಥರು ಆತಂಕ ಮತ್ತು ಸಂಕಷ್ಟದ ಕಥೆಗಳನ್ನು ಮೆಲುಕು ಹಾಕುತ್ತಾರೆ. ಯಾವುದೇ ಕಾರ್ಯನಿರ್ವಹಣೆಯ ಆಂಬ್ಯುಲೆನ್ಸ್‌ಗಳಿಲ್ಲದೆ, ಅವರು ಖಾಸಗಿ ವಾಹನಗಳ ಮೇಲೆ ಅವಲಂಬಿತರಾಗುತ್ತಾರೆ, ಅವುಗಳು ತುರ್ತು ವೈದ್ಯಕೀಯ ಸಾರಿಗೆಗೆ ಸೂಕ್ತವಲ್ಲ. ಕೂಡಲೇ ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಆಗ್ರಹಿಸಿದ್ದಾರೆ.

ಇದು ಜೀವನ್ಮರಣದ ಸಮಸ್ಯೆಯಾಗಿದೆ ಎನ್ನುತ್ತಾರೆ ಹನೂರಿನ ನಿವಾಸಿ ಮಹೇಶ. ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲು ಸಂಬಂಧಪಟ್ಟ ಇಲಾಖೆ ಮುಂದಾಗಬೇಕು, ಇರುವ ಆ್ಯಂಬುಲೆನ್ಸ್ ಗಳನ್ನು ರಿಪೇರಿ ಮಾಡಿಸಲಿ ಅಥವಾ ಸೇವೆಗಾಗಿ ಹೊಸ ಮತ್ತು ಹೆಚ್ಚಿನ ಆಂಬ್ಯುಲೆನ್ಸ್‌ಗಳನ್ನು ನೀಡಲಿ ಎಂದು ಒತ್ತಾಯಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಲು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರಯತ್ನಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.


Share

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Share

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಪ್ರಸಾದದಲ್ಲಿ ಕಲುಷಿತ ಪದಾರ್ಥ ಸೇರಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.

ಗ್ರಾಮದಲ್ಲಿ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು‌ ಮಾವಿನ ಹಣ್ಣಿನ ಸೀಕರಣೆಯನ್ನು ಗ್ರಾಮಸ್ಥರು ಸೇವಿಸಿದ್ದರು. ಆದರೆ, ಪ್ರಸಾದ ಸೇವಿಸಿದ ಜನರಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಮಾಹಿತಿ ಸಿಗುತ್ತಿದ್ದಂತೆ ಸ್ಥಳೀಯ ಶಾಸಕ ವಿಶ್ವಾಸ್ ವೈದ್ಯ ಆಸ್ಪತ್ರೆಗೆ ದೌಡಾಯಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ. ಅಸ್ವಸ್ಥಗೊಂಡವರನ್ನು ಕೂಡಲೇ ಸ್ಥಳೀಯ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆಆರೋಗ್ಯ ಇಲಾಖೆ ಅಧಿಕಾರಿಗಳು ಸದ್ಯ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ತೀವ್ರ ಅಸ್ವಸ್ಥಗೊಂಡ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಹಿತಕರ ಘಟನೆ ಆಗದಂತೆ ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆಯನ್ನು ತಾಲೂಕು ವೈದ್ಯರು ಮಾಡುತ್ತಿದ್ದಾರೆ.

ಈವರೆಗೂ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಡಿಎಚ್ಓ ಮಾಹಿತಿ ನೀಡಿದ್ದಾರೆ. ಪ್ರಸಾದ ಸೇವಿಸಿದವರಲ್ಲಿ ವಾಂತಿಭೇದಿ ಕಂಡುಬಂದ ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ. ಯಾವುದೇ ರೀತಿಯ ಸಮಸ್ಯೆ ಆಗದಂತೆ ‌ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಎಚ್ಓ ಡಾ.ಮಹೇಶ ಕೋಣಿ ತಿಳಿಸಿದ್ದಾರೆ.


Share

ಆರೋಗ್ಯಕರ ಮಗು ಬೇಕೆ? ಸಂಸ್ಕರಿತ ಆಹಾರ ಸೇವನೆ ತ್ಯಜಿಸಿ…!

Share

ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲದು. ಕೆಲವು ಆಹಾರಗಳು ಗರ್ಭಿಣಿಯರ ಆರೋಗ್ಯವನ್ನು ಹದಗೆಡಿಸುತ್ತದೆ. ಅವುಗಳಲ್ಲಿ ಅತಿಯಾಗಿ ಸಂಸ್ಕರಿಸಿದ ಆಹಾರ ಹಾಗೂ ಫಾಸ್ಟ್​ ಫುಡ್ ಕೂಡ ಸೇರಿದೆ. ಈ ಆಹಾರಗಳನ್ನು ಸೇವಿಸಿದರೆ ಗರ್ಭಿಣಿಯರ ಆರೋಗ್ಯದಲ್ಲಿ ಏನು ಬದಲಾವಣೆಯಾಗುತ್ತದೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಗರ್ಭಿಣಿಯರು ತಮ್ಮ ಆಹಾರದ ಆಯ್ಕೆಗಳ ಬಗ್ಗೆ ಜಾಗರೂಕರಾಗಿರುವುದು ಅಗತ್ಯ. ಅದರಲ್ಲೂ ಸಂಸ್ಕರಿಸಿದ ಆಹಾರದಿಂದ ದೂರ ಉಳಿಯುವುದು ಉತ್ತಮ. ಏಕೆಂದರೆ, ಇವುಗಳಲ್ಲಿ ಕೊಬ್ಬು, ಸಕ್ಕರೆ ಮತ್ತು ಉಪ್ಪು ಅಧಿಕವಾಗಿರುತ್ತದೆ. ಅವುಗಳ ಸೇವನೆಯು ಭ್ರೂಣದ ಬೆಳವಣಿಗೆ ಹಾನಿಯುಂಟು ಮಾಡುತ್ತವೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (ICMR-NIN) ಹೇಳಿದೆ.

ಗರ್ಭಿಣಿ ಮಹಿಳೆಯರು ಸಂಸ್ಕರಿಸಿದ ಆಹಾರದ ಬದಲಿಗೆ ಪೌಷ್ಟಿಕಾಂಶದ ಅಗತ್ಯತೆಗಳು ಮತ್ತು ಮಗುವಿನ ಬೆಳವಣಿಗೆಗಳ ಅಗತ್ಯಗಳನ್ನು ಪೂರೈಸಲು ವಿವಿಧ ರೀತಿಯ ಆಹಾರವನ್ನು ಸೇವಿಸಬೇಕು.

ಗರ್ಭಿಣಿಯರು ಕಡಿಮೆ ಪೌಷ್ಟಿಕಾಂಶವುಳ್ಳ ಆಹಾರ ಅಥವಾ ಕೊಬ್ಬು, ಸಕ್ಕರೆ ಮತ್ತು ಉಪ್ಪು ಅಧಿಕವಾಗಿರುವ ಆಹಾರಗಳನ್ನು ಸೇವನೆ ಮಾಡಿದರೆ, ಅದು ಭ್ರೂಣದ ಬೆಳವಣಿಗೆಗೆ ಹಾನಿಯುಂಟು ಮಾಡುತ್ತದೆ ಎಂದು ವರದಿ ಹೇಳಿದೆ.
ಅಪೌಷ್ಟಿಕತೆಯಿರುವ ಮಹಿಳೆಯರು ಗರ್ಭಾವಸ್ಥೆಯಲ್ಲಿ ಚಿಕ್ಕದಾದ ಅಥವಾ ಕಡಿಮೆ ಜನನ ತೂಕವನ್ನು ಹೊಂದಿರುವ ಅಥವಾ ಪ್ರಸವಪೂರ್ವ ಶಿಶುಗಳಿಗೆ ಜನ್ಮ ನೀಡುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಹೀಗಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು ಸಂಸ್ಕರಿಸಿದ ಆಹಾರದಿಂದ ದೂರ ಉಳಿಯುವುದರ ಜೊತೆಗೆ ಧೂಮಪಾನ ಮತ್ತು ಮದ್ಯಪಾನವನ್ನು ಕೂಡ ತ್ಯಜಿಸಬೇಕು ಎಂದು ವರದಿಯಲ್ಲಿ ತಿಳಿಸಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ ಕೇವಲ ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗಷ್ಟೇ ಅಲ್ಲದೆ, ಗರ್ಭಿಣಿಯಾಗಲು ಬಯಸುತ್ತಿರುವ ಮಹಿಳೆಯರಿಗೂ ಆಹಾರದ ಪಟ್ಟಿಯನ್ನು ನೀಡಿದೆ.

ಹಸಿರು ಎಲೆಗಳ ತರಕಾರಿಗಳು, ತಾಜಾ ಹಣ್ಣುಗಳು ಮತ್ತು ಮಾಂಸಾಹಾರ ಸೇರಿದಂತೆ ವಿವಿಧ ಕಾಳುಗಳು ಮತ್ತು ಕಾಲೋಚಿತ ತರಕಾರಿಗಳನ್ನು ಸೇವಿಸುವ ಮೂಲಕ ಖನಿಜ ಮತ್ತು ವಿಟಮಿನ್ ಅವಶ್ಯಕತೆಗಳನ್ನು ಪೂರೈಸಬಹುದು. ಹಾಲು ಜೈವಿಕವಾಗಿ ಲಭ್ಯವಿರುವ ಅತ್ಯುತ್ತಮ ಮೂಲವಾಗಿದ್ದು, ಇದಲ್ಲಿ ಕ್ಯಾಲ್ಶಿಯಂ ಹೇರಳವಾಗಿದೆ ಎಂದು ಹೇಳಿದೆ.

ಗರ್ಭಿಣಿಯರು ಸಾಕಷ್ಟು ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳಬೇಕು. ಇದು ವಿಟಮಿನ್ ಡಿ ಅವಶ್ಯಕತೆಗಳನ್ನು ಪೂರೈಸಲು ಅವಶ್ಯಕವಾಗಿದೆ ಎಂದೂ ತಿಳಿಸಿದೆ.ಚೆನ್ನೈನ ಮದರ್‌ಹುಡ್ ಆಸ್ಪತ್ರೆಯ ಸಲಹೆಗಾರ, ಆಹಾರ ಪದ್ಧತಿ ಮತ್ತು ಪೌಷ್ಟಿಕತಜ್ಞ ಆರ್. ಧನಲಕ್ಷ್ಮಿ ಅವರು ಮಾತನಾಡಿ, ICMR-NIN ಪರಿಷ್ಕೃತ ಆಹಾರ ಮಾರ್ಗಸೂಚಿಗಳು ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೆ ತಮ್ಮ ಆಹಾರಕ್ರಮವನ್ನು ಯೋಜಿಸಲು ಸಹಾಯ ಮಾಡುತ್ತದೆ. ಗರ್ಭಿಣಿಯರು ಧಾನ್ಯಗಳು, ಕಾಳುಗಳು, ತರಕಾರಿಗಳು, ಹಣ್ಣುಗಳು, ಮಾಂಸ, ಡೈರಿ ಮತ್ತು ಮೀನುಗಳಲ್ಲಿ ಸಮೃದ್ಧವಾಗಿರುವ ಸಮತೋಲಿತ ಆಹಾರವನ್ನು ಸೇವನೆ ಮಾಡಬೇಕು. ಇದು ಅವರ ಗರ್ಭಿಣಿ ಮಹಿಳೆ ಮತ್ತು ಭ್ರೂಣದ ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.

ಪ್ಲಾಸ್ಟಿಕ್‌ಗಳೊಂದಿಗೆ ಸಾಮಾನ್ಯವಾಗಿ ಸಂಬಂಧಿಸಿದ ರಾಸಾಯನಿಕಗಳ ವರ್ಗವಾದ ಥಾಲೇಟ್‌ಗಳಿಗೆ ಒಡ್ಡಿಕೊಳ್ಳುವುದರ ಬಗ್ಗೆ ಗರ್ಭಿಣಿಯರು ಹೆಚ್ಚು ಎಚ್ಚರ ವಹಿಸಬೇಕು.

ಎನ್​ವಿರಾನ್ಮೆಂಟಲ್ ಇಂಟರ್‌ನ್ಯಾಷನಲ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಗರ್ಭಾವಸ್ಥೆಯಲ್ಲಿ ಒಮ್ಮೆ ಸೇವಿಸಿದ ಥಾಲೇಟ್‌ಗಳು ರಕ್ತಕ್ಕೆ ಪ್ರವೇಶಿಸಬಹುದು. ಇದು ಭ್ರೂಣದ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದೆ. ಗರ್ಭಾವಸ್ಥೆಯಲ್ಲಿ ಈ ರಾಸಾಯನಿಕಗಳಿಗೆ ಒಡ್ಡಿಕೊಳ್ಳುವಿಕೆಯು ಕಡಿಮೆ ಜನನದ ತೂಕ, ಅವಧಿಪೂರ್ವ ಜನನ ಮತ್ತು ಮಕ್ಕಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.


Share