POST

ಇತಿಹಾಸ ಪ್ರಸಿದ್ಧ ಈಚನೂರು ಕೆರೆ -ಕೆ.ಟಿ.ಶಾಂತಕುಮಾರ್

ಕುಡಿಯುವ ನೀರು ಯೋಜನೆ ಈಚನೂರು ಕೆರೆಗೆ ಕೆ ,ಟಿ, ಶಾಂತಕುಮಾರ್ ಭೇಟಿ ನೀಡಿ ಪರಿಶೀಲಿಸಿ ಮಾತನಾಡುತ್ತಾ ಇತಿಹಾಸ ಪ್ರಸಿದ್ಧ ಈಚನೂರು ಕೆರೆ ಸುಮಾರು ಹತ್ತಾರು ಹಳ್ಳಿಗಳ ಜೀವನಾಡಿಯಾಗಿದ್ದು ಕೆರೆಯ ಹೂಳೆತ್ತುವ ಕಾರ್ಯದಲ್ಲಿ ಕೆರೆಯ ಫಲವತ್ತಾದ ಮಣ್ಣನ್ನು ಸುತ್ತಮುತ್ತಲಿನ ಗ್ರಾಮದ ರೈತರಿಗೆ ಒಂದು ಕಿಮೀ ಉಚಿತವಾಗಿ ನೀಡುತ್ತಿದ್ದು ರೈತರಿಗೆ ಅನ್ಯಾಯವಾಗಿದೆ ಕೆರೆಯ ಮಣ್ಣನ್ನು ಸುಮಾರು 5 ಕಿ ಮೀ ವರೆಗೆ ಉಚಿತವಾಗಿ ಕೆರೆಯ ಮಣ್ಣನ್ನು ರೈತರ ತೋಟಗಳಿಗೆ ತುಂಬಿಸುವ ಕೆಲಸ ಮಾಡಬೇಕೆಂದು ಮನವಿ ಮಾಡಿದರು.

ರಾತ್ರೋರಾತ್ರಿ ಹಠಾತ್ತನೇ ಲಾಕ್ ಡೌನ್ ಘೋಷಿಸಿದ ಅಬು ಧಾಬಿ

ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಆತಂಕದ ಹಿನ್ನೆಲೆಯಲ್ಲಿ ದಿಢೀರನೆ ಗುರುವಾರ ತಡರಾತ್ರಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.

ದೇಶದ ಉಳಿದ ಭಾಗಗಳು ಪ್ರವಾಸೋದ್ಯಮಕ್ಕೆ ಮುಕ್ತವಾಗಿದ್ದರೂ ಸಹ ಅಬುಧಾಬಿ ಮಾತ್ರ ಈ ನಿರ್ಧಾರಕ್ಕೆ ಬಂದಿದೆ.  ಸೋಮವಾರದಿಂದ ಲಾಕ್‌ಡೌನ್ ಪ್ರಾರಂಬಿವಾಗಲಿದ್ದು, ಪ್ರತಿದಿನ ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 5 ಗಂಟೆವರೆಗೆ ಇರುತ್ತದೆ ಎಂದು ಸರ್ಕಾರಿ ಸ್ವಾಮ್ಯದ ಡಬ್ಲ್ಯುಎಎಂ ಸುದ್ದಿ ಸಂಸ್ಥೆ ತಿಳಿಸಿದೆ.

ಸೋಮವಾರದಿಂದ ಯುಎಇಯಲ್ಲಿ ಯುಎಇ ಸುದೀರ್ಘ ಈದ್ ಅಲ್-ಅಧಾ ರಜಾದಿನಗಳು ಆರಂಭವಾಗುತ್ತಿವೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಬುಧಾಬಿ ಪ್ರವೇಶಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಲಾಕ್‌ಡೌನ್ ಘೋಷಿಸಲಾಗಿದೆ ಎನ್ನಲಾಗಿದೆ.

ವರ್ಷದ ಹಿಂದೆ ದುಬೈ ಪ್ರವಾಸೋದ್ಯಮಕ್ಕೆ ಅನುಮತಿ ನೀಡಿದ ನಂತರ ಅಬುಧಾಬಿ ಕಠಿಣ ನಿಲುವು ತಳೆದಿತ್ತು. ಅಬುಧಾಬಿ ಪ್ರವೇಶಿಸುವವರಿಗೆ ಆರ್‌ಟಿ–ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯಗೊಳಿಸಲಾಗಿತ್ತು. ಸಾಮೂಹಿಕ ಲಸಿಕಾ ಕಾರ್ಯಕ್ರಮದ ಹೊರತಾಗಿಯೂ ದುಬೈನಲ್ಲಿ ನಿತ್ಯ 1,500 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದೃಢಪಡುತ್ತಿವೆ.

ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ವಾಗ್ದಾಳಿ

ಕಳಪೆ ಮಟ್ಟದ ಆರ್ಥಿಕ ನಿರ್ವಹಣೆಯಿಂದಾಗಿ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಕೇಂದ್ರದ ಬಿಜೆಪಿ ಸರಕಾರ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಆರ್ಥಿಕ ಬಿಕ್ಕಟ್ಟು ಹಾಗೂ ಪಿಡುಗಿನ ಸಮಯದಲ್ಲಿ ಹಣದುಬ್ಬರ ಜನಸಾಮಾನ್ಯರಿಗೆ ಹೊರೆಯಾಗಿದೆ. ಸರಕಾರದ ದುರಾಸೆ ಹಾಗೂ ಶೋಷಣೆಯಿಂದ ಇಂಧನ ತೈಲ ಬೆಲೆ ಏರಿಕೆ ಹೆಚ್ಚುತ್ತಿದೆ.

ದಿನಬಳಕೆ ವಸ್ತುಗಳ ಮೇಲೆ ಅತಿಯಾದ ಜಿಎಸ್ಟಿಯಿಂದ ಜನ ಸಾಮಾನ್ಯ ಸಂಕಷ್ಟಕ್ಕೆ ಸಿಲುಕಿದ್ದಾನೆ. ಹಣದುಬ್ಬರ ವಿಚಾರವನ್ನು ಕಾಂಗ್ರೆಸ್ ಸಂಸತ್ ಸದನದಲ್ಲಿ ಪ್ರಸ್ತಾಪಿಸಲಿದೆ. ಇಂಧನ ತೈಲ ಬೆಲೆ ಇಳಿಸಬೇಕು, ಆಮದು ಸುಂಕ ಹಾಗೂ ಜಿಎಸ್ಟಿ ಪ್ರಮಾಣ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟು ಹಾಗೂ ಪಿಡುಗಿನ ಸಮಯದಲ್ಲಿ ಜನಸಾಮಾನ್ಯರು ತತ್ತರಿಸಿದ್ದು, ಈ ಮಧ್ಯೆ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಿದೆ. ಜನ ಭಯಾನಕ ವೈರಸ್ ಹಾಗೂ ಮೋದಿ ಸರಕಾರದ ಆರ್ಥಿಕ ದುರಾಡಳಿತದ ವಿರುದ್ಧ ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಉದ್ಯೋಗ ನಷ್ಟ, ವೇತನ ಕಡಿತವಾಗಿದೆ. ಈ ಪರಿಸ್ಥಿತಿಯಲ್ಲಿ ಜನರ ಕೈಗೆ ಹಣ ನೀಡಬೇಕಾದ ಸರಕಾರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗಿ ಬೇಜವಾಬ್ದಾರಿ ತೋರುತ್ತಿದೆ ಎಂದು ಕಿಡಿಕಾರಿದ್ದಾರೆ.

ಯುಪಿಎ ಸರ್ಕಾರದ ಉತ್ತಮ ಕೆಲಸದ ಮೂಲಕ ದೇಶದ 27 ಕೋಟಿ ಜನರನ್ನು ಬಡತನ ರೇಖೆಗಿಂತ ಹೊರಕ್ಕೆ ತಂದಿತ್ತು. ಆದರೆ ಬಿಜೆಪಿ ಸರ್ಕಾರದ ದುರಾಡಳಿತ ದೇಶದ 23 ಕೋಟಿ ಜನ ಬಡತನ ರೇಖೆಗಿಂತ ಕೆಳಕ್ಕೆ ದೂಡಿದೆ. ಕಳೆದ ವರ್ಷ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ 2 ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ದೇಶದ ಶೇ.97ರಷ್ಟು ಜನ ಕಡಿಮೆ ವೇತನ ಪಡೆಯುವಂತಾಗಿದೆ. ಪರಿಣಾಮ ಭಾರತೀಯರು 1.25 ಲಕ್ಷ ಕೋಟಿ ರೂ.ಕಾರ್ಮಿಕ ನಿಧಿ ಹಣ ಪಡೆಯುವಂತಾಗಿದೆ.

ದೇಶದ ಜಿಡಿಪಿ ಕುಸಿಯುತ್ತಿರುವಾಗ ಹಣದುಬ್ಬರ ಮಹಾಪರಾಧ. ಜನರ ಆದಾಯ ಕುಸಿದಿರುವಾಗ ಅಗತ್ಯ ವಸ್ತುಗಳ ಮೇಲೆ ಹೆಚ್ಚು ವ್ಯಯಿಸುವಂತೆ ಮಾಡುವಂತಾಗಿದೆ. ಇದು ಕೇವಲ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ವಿಚಾರ ಮಾತ್ರವಲ್ಲ. ಅಡುಗೆ ಎಣ್ಣೆ, ಬೇಳೆ ಕಾಳುಗಳು, ಚಹಾ, ಕಾಫಿ, ಸೋಪುಗಳ ಬೆಲೆ ಕೂಡ ಹೆಚ್ಚಾಗಿವೆ. ಇತ್ತೀಚಿನ ಹಣದುಬ್ಬರ ಸಂಖ್ಯೆ ಎಚ್ಚರಿಕೆ ಗಂಟೆಯಾಗಿದೆ. ಚಿಲ್ಲರೆ ಹಣದುಬ್ಬರವು ಆರ್ ಬಿ ಐನ ಗುರಿ ಶೇ.6ಕ್ಕಿಂತ ಹೆಚ್ಚಾಗಿದ್ದು, ಶೇ.6.3ರಷ್ಟು ತಲುಪಿದೆ ಎಂದು ತಿಳಿಸಿದ್ದಾರೆ.

ಮೋದಿ ಸರ್ಕಾರ ಜನರಿಗೆ ದ್ರೋಹ ಬಗೆದಿದೆ. ಅತಿಯಾದ ಹಣದುಬ್ಬರಕ್ಕೆ ಅತಿಯಾದ ಬೇಡಿಕೆ ಅಥವಾ ಜನರ ಕೈಯಲ್ಲಿ ಹೆಚ್ಚಿನ ಹಣವಿರುವ ಕಾರಣದಿಂದ ಉಂಟಾಗಿಲ್ಲ. ಬದಲಿಗೆ ಜನರ ಆದಾಯ ಕುಸಿದು ಜನರ ಕೈಯಲ್ಲಿ ಹಣವಿಲ್ಲದಂತಾಗಿದೆ. ಈ ಪರಿಸ್ಥಿತಿಯಲ್ಲಿ ಬೆಲೆ ಏರಿಕೆಗೆ ಕಾರಣವಾಗಿರುವುದು ಸರಕಾರದ ಶೋಷಣೆ, ದುರಾಸೆ ಹಾಗೂ ಆರ್ಥಿಕತೆ ನಿರ್ವಹಣೆಯಲ್ಲಿನ ವೈಫಲ್ಯವಾಗಿದೆ.

ಜನರ ಮೇಲಿನ ಹೊರೆ ಇಳಿಸಲು ಸರ್ಕಾರ ಕೂಡಲೇ ಪೆಟ್ರೋಲ್, ಡೀಸೆಲ್ ಹಾಗೂ ಎಲ್ ಪಿಜಿ ಬೆಲೆ ಇಳಿಸಬೇಕು. ಆಮದು ಸುಂಕ ಪರಿಶೀಲಿಸಬೇಕು. ದಿನಬಳಕೆ ವಸ್ತುಗಳ ಮೇಲಿನ ಜಿಎಸ್ಟಿ ದರ ಇಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ. ಈ ಎಲ್ಲ ವಿಚಾರಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ವಿಸ್ತೃತ ಚರ್ಚೆ ಜತೆಗೆ ಜನರಿಗೆ ಪರಿಹಾರ ನೀಡುವಂತೆ ಕಾಂಗ್ರೆಸ್ ಆಗ್ರಹಿಸಲಿದೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

ಮನೆಯಲ್ಲಿ ಕಸವಿದ್ದರೆ ಲಕ್ಷ್ಮಿ ಒಲಿಯುವುದಿಲ್ಲವೇ, ಲಕ್ಷ್ಮಿ ನಿಲ್ಲುವುದಿಲ್ಲವೇ?

ಮನೆ ಸ್ವಚ್ಛವಾಗಿರದಿದ್ದರೆ, ಕೊಳಕು, ಕಸಕಡ್ಡಿ, ಬಲೆ ತುಂಬಿಕೊಂಡಿದ್ದರೆ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ, ಹೊರಟುಹೋಗುತ್ತಾಳೆ, ಮನೆಯಲ್ಲಿ ದಟ್ಟದಾರಿದ್ರ್ಯವಿರುತ್ತದೆ ಎಂಬುದು ಜನರ ನಂಬಿಕೆ.

ನಮ್ಮ ಮನೆ-ಮನ ಯಾವಾಗಲೂ ಶುದ್ಧವಾಗಿರಬೇಕು. ಮನೆ ಸ್ವಚ್ಛವಾಗಿಲ್ಲದಿದ್ದರೆ ಲಕ್ಷ್ಮಿ ನೆಲೆಸುವುದಿಲ್ಲ ಎಂಬ ಅಕ್ಷರಶಃ ಅರ್ಥವನ್ನು ನಾವಿಲ್ಲಿ ತೆಗೆದುಕೊಳ್ಳಬಾರದು ಎನ್ನುತ್ತಾರೆ ಆಧ್ಯಾತ್ಮಿಕ ಚಿಂತಕಿ ಡಾ ಆರತಿ ಕೌಂಡಿನ್ಯ.

ಇದರ ಹಿಂದೆ ಒಂದು ಆಸಕ್ತಿಕರವಾದ ಜಾನಪದ ಭಾವವಿದೆ ಎನ್ನುತ್ತಾರೆ ಅವರು. ಜಾನಪದದಲ್ಲಿ ಮನೆ ತುಂಬ ಪಾತ್ರೆಗಳು ಚೆಲ್ಲಾಡಿರಲಿ, ವಸ್ತುಗಳು ಚೆಲ್ಲಾಡುತ್ತಿರಲಿ, ಮನೆತುಂಬ ಅಕ್ಕಿ, ಧಾನ್ಯ, ಬೇಳೆ ಚೆಲ್ಲಾಡಿರಲಿ. ಮನೆಯಲ್ಲಿ ಎಲ್ಲೆಂದರಲ್ಲಿ ಬಟ್ಟೆ ಚೆಲ್ಲಾಪಿಲ್ಲಿಯಾಗಿರಲಿ, ಮನೆತುಂಬ ಜನ, ಜನರ ಕಾಲಗುರುತುಗಳು, ಮಕ್ಕಳ ಕೇಕೆ, ಆಟ-ತುಂಟಾಟ, ಕೂಗಾಟ ಕೇಳುತ್ತಿರಲಿ ಎನ್ನುತ್ತಾರೆ.

ಅಂದರೆ ಇದರರ್ಥ ಮನೆತುಂಬ ಪಾತ್ರೆಗಳು ಚೆಲ್ಲಾಡಿರಬೇಕೆಂದರೆ ಮನೆತುಂಬ ಜನರು, ಚಿಕ್ಕಮಕ್ಕಳು, ಅತಿಥಿಗಳು ಬಂದು ಹೋಗುತ್ತಿರಬೇಕು, ಮನೆಯಲ್ಲಿ ಯಾವಾಗಲೂ ಹಬ್ಬದ ವಾತಾವರಣ, ನೆಮ್ಮದಿ, ಖುಷಿ ನೆಲೆಸಿರಬೇಕು ಎಂದರ್ಥ. ಆಗ ಮನೆಯಲ್ಲಿ ಜೀವಂತಿಕೆ, ಲವಲವಿಕೆ, ಸಂಭ್ರಮ ಇರುತ್ತದೆ, ಮನೆಗೆ ಜನರು ಬರುತ್ತಿರಬೇಕು, ಅಡುಗೆ ಮಾಡಿ ಬಳಸಬೇಕು, ಆ ಮೂಲಕ ಮನೆಯಲ್ಲಿರುವ ಪಾತ್ರೆಗಳು ಬಳಕೆಯಾಗಬೇಕು, ಮನೆಯಲ್ಲಿರುವ ಬಟ್ಟೆಗಳು ಬಳಕೆಯಾಗಬೇಕು, ಇಲ್ಲದಿದ್ದರೆ ಮನೆಯಲ್ಲಿ ಮನೆಮಂದಿಗೆ, ಜೀವನದಲ್ಲಿ ಏನು ಸೊಗಸಿದೆ, ಮನೆಗೆ ಅತಿಥಿಗಳು ಬರುತ್ತಿದ್ದರೆ ಮನೆಯೊಡತಿಗೆ ಊಟ, ತಿಂಡಿ ಮಾಡಿ ಬಡಿಸುವುದು ಸ್ವಲ್ಪ ಕಷ್ಟವಾಗಬಹುದು, ಆದರೆ ಆ ಕಷ್ಟದಲ್ಲಿ ಸುಖ-ಸಂತೋಷವಿರುತ್ತದೆ ಎನ್ನುತ್ತಾರೆ ಡಾ ಆರತಿ.

ಮನೆಯಲ್ಲಿರುವ ವಸ್ತುಗಳು ಬಳಕೆಯಾಗಬೇಕು, ಶುಚಿತ್ವ ಇರಬೇಕು ಎಂದೇ ಹೊರತು ಇದರಲ್ಲಿ ಬೇರೆ ಅರ್ಥ ಇಲ್ಲ. ಇದು ಕಸ-ಕೊಳೆ ಎಂದರ್ಥವಲ್ಲ,ಕಾಯಾ ವಾಚಾ ಮನಸಾ ಮಡಿ ಇಟ್ಟುಕೊಂಡು ಮನೆಯಲ್ಲಿ ಸಂಭ್ರಮಪಡಬೇಕು ಎಂದರ್ಥ

ಬೇಲೂರು: ಬೈಕ್ ರೈಡ್ ಕಾರ್ಯಕ್ರಮ ಉದ್ಘಾಟನೆ

ಬೇಲೂರು: ಬೈಕ್ ರೈಡ್ ಕಾರ್ಯಕ್ರಮ ಉದ್ಘಾಟನೆ ಮಾಜಿ ಸಚಿವರುಜಾಮಿರ್ ಆಮ್ಮದ್ ರವರು ಹಾಗೂ ಬಿ.ಶಿವರಾಂ ಮಾಜಿ ಶಾಸಕರು ಗಡಸಿ ಕ್ಷೇತ್ರ ಕಾಂಗ್ರೇಸ್ ಪಕ್ಷದ ಮುಂಖಡರು ಇದ್ದರು ಮಾಜಿ ಸಚಿವರು ಜಾಮಿರ್ ಆಮ್ಮದ್ ರವರು ಬೈಕ್ ರೈಡ್ ಗೆ 150000 ಲಕ್ಷ ನೀಡಿದರು ಅವರು ಪಕ್ಷದ ಸಂಘಟನೆ ಮುಖ್ಯವಾಗಿ ಎಲ್ಲಾರು ಮಾಡಬೇಕಾಗಿದೆ ಎಂದು ಹೇಳಿದರು.

“ಧೂಮಪಾನದ ಅಭ್ಯಾಸವಿದ್ದರೆ ಕೋವಿಡ್-19 ಎದುರಿಸುವುದು ಮತ್ತಷ್ಟು ಕಷ್ಟ

ಬೆಂಗಳೂರು: ತಂಬಾಕು ಶ್ವಾಸಕೋಶಕ್ಕೆ ಹಾನಿಯುಂಟುಮಾಡಬಲ್ಲ ಅಪಾಯಕಾರಿ ಪದಾರ್ಥ ಎಂದೇ ಕುಖ್ಯಾತಿ ಪಡೆದಿದ್ದು, ಇದರ ಬಳಕೆಯಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳಲಿದ್ದು ಕೋವಿಡ್-19 ಎದುರಿಸುವುದು ತಂಬಾಕು ಅಭ್ಯಾಸವುಳ್ಳವರಿಗೆ ಕಷ್ಟ ಎಂದು ಡಾ. ರಾಮಚಂದ್ರ ಹೇಳಿದ್ದಾರೆ.

ಕಿದ್ವಾಯಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಆನ್ಕೋಲಜಿಯ ನಿರ್ದೇಶಕರಾಗಿರುವ ಡಾ. ಸಿ ರಾಮಚಂದ್ರ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಹೇಳಿಕೆ ನೀಡಿದ್ದು, ಕೋವಿಡ್-19 ವೈರಾಣು ಪ್ರಾಥಮಿಕವಾಗಿ ಶ್ವಾಸಕೋಶದ ಮೇಲೆ ದಾಳಿ ಮಾಡುತ್ತವೆ ಹಾಗೂ ಧೂಮಪಾನದ ಅಭ್ಯಾಸವುಳ್ಳವರ ಶ್ವಾಸಕೋಶ ದುರ್ಬಲವಾಗಿದ್ದು, ಇವರಿಗೆ ಕೋವಿಡ್-19 ಎದುರುವುದು ಕಷ್ಟವಾಗಲಿದೆ ಎನ್ನುತ್ತಾರೆ.

2020 ರ ಏ.29 ರಂದು ಸಾರ್ವಜನಿಕ ಆರೋಗ್ಯ ತಜ್ಞರ ಅಧ್ಯಯನಗಳ ವಿಮರ್ಶೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿದ್ದು ಧೂಮಪಾನ ಮಾಡದವರಿಗೆ ಹೋಲಿಕೆ ಮಾಡಿದಲ್ಲಿ ಧೂಮಪಾನ ಮಾಡುವವರಿಗೇ ಕೋವಿಡ್-19 ಹೆಚ್ಚು ಬಾಧಿಸುತ್ತದೆ ಎಂದು ಎಚ್ಚರಿಸಿದೆ.

ತಂಬಾಕು ಸಾಂಕ್ರಾಮಿಕವಲ್ಲದ ರೋಗಗಳಾದ ಹೃದಯರಕ್ತನಾಳದ ಕಾಯಿಲೆ, ಕ್ಯಾನ್ಸರ್, ಉಸಿರಾಟದ ಕಾಯಿಲೆ ಮತ್ತು ಮಧುಮೇಹಕ್ಕೂ ಕಾರಣವಾಗುತ್ತದೆ. ಇವೆಲ್ಲವೂ ಕೋವಿಡ್-19 ಬಂದಲ್ಲಿ ಆರೋಗ್ಯದ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದ್ದು ಸಾವಿಗೂ ಕಾರಣವಾಗಬಹುದು ಎಂದು ಡಾ.ರಾಮಚಂದ್ರ ಹೇಳಿದ್ದಾರೆ.

ಇದೇ ವೇಳೆ ತಂಬಾಕು ಕೋವಿಡ್-19 ಅಪಾಯವನ್ನು ಕಡಿಮೆ ಮಾಡುತ್ತದೆ ಎಂಬ ಆಧಾರವಿಲ್ಲದ ಉಲ್ಲೇಖಗಳಿಂದ ಮಾಧ್ಯಮಗಳು, ಸಂಶೋಧಕರು, ವಿಜ್ಞಾನಿಗಳಿಗೆ ಡಬ್ಲ್ಯುಹೆಚ್ಒ ಎಚ್ಚರಿಕೆ ನೀಡಿದೆ.

ಶಂಕರರಿಲ್ಲದಿದ್ದಿದ್ದರೆ ಛಿದ್ರ-ಛಿದ್ರವಾಗಿರುತ್ತಿತ್ತು ಸನಾತನ ತತ್ವಾದರ್ಶ, ಇರುತ್ತಿರಲಿಲ್ಲ ಭರತ ವರ್ಷ!

ನರ್ಮದೆ ಉಕ್ಕಿ ಹರಿಯುತ್ತಿದ್ದಳು…, ಪ್ರವಾಹ… ಸಮತೋಲನ ಕಳೆದುಕೊಂಡು ಧಾರಿಣಿಗೆ ಬಂದೊದಗಿತ್ತು ವಿಪತ್ತು. ಧರ್ಮಕ್ಕೂ ಎದುರಾಗಿತ್ತು ಆಪತ್ತು…

ನರ್ಮದೆಯಲ್ಲಿ ಸಮತೋಲನ ಕಳೆದುಹೋಗಿ ಅತಿವೃಷ್ಟಿಯಿಂದ ಜಲ ಪ್ರವಾಹ… ಭರತ ವರ್ಷದಲ್ಲಿ  ಸಮಚಿತ್ತತೆಯ ಜ್ಞಾನ ಮರೆತು ಕರ್ಮಕಾಂಡದ ಅತಿವೃಷ್ಟಿಯ ಅಜ್ಞಾನದ ಪ್ರವಾಹ…

ಅದ್ವೈತದ ನೆಲದಲ್ಲಿ ಆಗ ಕಂಡ ಕಂಡಲ್ಲಿ ಅಜ್ಞಾನ, ಅಸಮತೋಲನ, ಅತಿವೃಷ್ಟಿಗಳ ಪ್ರವಾಹ….  ಅಂದು, ಹಿಂದೊಮ್ಮೆ, ದೇವ-ಅಸುರರು ನಡೆಸಿದ್ದ ಸಮುದ್ರಮಥನದಲ್ಲಿ ಆವಿರ್ಭವಿಸಿದ್ದ ಹಾಲಾಹಲದಿಂದ ಸೃಷ್ಟಿಯನ್ನು ಉಳಿಸಿದ್ದಾದಿ ಯೋಗಿ ಶಂಕರನೇ ಮತ್ತೊಮ್ಮೆ ಆದಿ ಗುರು ಶಂಕರಾಚಾರ್ಯನಾಗಿ ಅವತರಿಸಿದ್ದ. ಶಂಕರರು ನರ್ಮದೆಯ ತಟದಲ್ಲಿದ್ದ ಗುರು ಗೋವಿಂದ ಭಗವತ್ಪಾದರ ಆಶ್ರಯ ಪಡೆದರು. ಅದಾಗಲೇ ತೀಕ್ಷ್ಣ ಬುದ್ಧಿಯನ್ನು ಹೊಂದಿದ್ದ ಶಂಕರರು ತಮ್ಮ ಗುರುಗಳ ಬಳಿ ಸಕಲ ಶಾಸ್ತ್ರಗಳನ್ನು ಕರತಲಾಮಲಕ ಮಾಡಿಕೊಂಡರು. ವ್ಯಾಸರೇ ತಲೆದೂಗುವಂತೆ ಪ್ರಸ್ಥಾನ ತ್ರಯಗಳಿಗೆ ಭಾಷ್ಯಗಳನ್ನು ರಚಿಸಿದರು. ಕಮಂಡಲದಿಂದ ನರ್ಮದೆಯ ಪ್ರವಾಹವನ್ನು ತಗ್ಗಿಸಿದರು. ಭರತ ಮಂಡಲವನ್ನು ಕಾಲ್ನಡಿಗೆಯಲ್ಲಿ ಸುತ್ತಿ ಉಕ್ಕುತ್ತಿದ್ದ ಅಜ್ಞಾನದ ಹರಿವನ್ನೂ ನಿವಾರಿಸಿದರು.

‘ಶಂ ಕರೋತಿ ಇತಿ ಶಂಕರಃ|’ ‘ಶಂ’ ಎಂದರೆ ಒಳಿತು ಮತ್ತು ‘ಕರೋತಿ’ ಎಂದರೆ ಮಾಡುವವನು. ಯಾರು ಸಮಸ್ತ ಸೃಷ್ಟಿಗೆ ಒಳಿತು ಮಾಡುತ್ತಾನೆಯೋ ಅವನೇ ಶಂಕರ.

ಹಾಗಂತ ಶಂಕರರೇನು ಹೊಸತನ್ನು ಸೃಷ್ಟಿಸಿ ಕೊಡಲಿಲ್ಲ. ಆ ಆದಿ ಯೋಗಿ ಶಂಕರ ಹೇಗೆ ಲಯಕರ್ತನೋ ಹಾಗೆಯೇ ಈ ಆದಿ ಶಂಕರರೂ ಲಯವನ್ನಷ್ಟೇ ಮಾಡಿದರು. ಯಾವುದರ ಲಯ? ಅಜ್ಞಾನದ ಲಯ….

ಅದ್ವೈತ ಸಿದ್ಧಾಂತ ವೇದ-ಉಪನಿಷತ್ ಗಳಲ್ಲೇ ಸ್ಪಷ್ಟವಾಗಿ ಉಲ್ಲೇಖವಾಗಿತ್ತು. ಕಾಲಕ್ರಮೇಣ ಧರ್ಮಕ್ಕೆ ಗ್ಲಾನಿಯುಂಟಾದಾಗ ಪಂಡಿತರೂ ವಿದ್ವಾಂಸರು ಅದನ್ನು ತಪ್ಪಾಗಿ ಅರ್ಥೈಸಿಕೊಂಡು, ತಪ್ಪಾದ ವ್ಯಾಖ್ಯಾನಗಳನ್ನು ಪ್ರಚಾರ ಮಾಡುತ್ತಾ, ಅದ್ವೈತವನ್ನು ಮರೆತರು. ಜ್ಞಾನ ಮಾರ್ಗಕ್ಕಿಂತ ಕರ್ಮಕಾಂಡ(ಯಜ್ಞ ಯಾಗಗಳು) ಹೆಚ್ಚಿನ ಮಹತ್ವ ಕೊಟ್ಟಿದ್ದರು. ಶ್ರುತಿ (ವೇದ)ಯ ಸಿದ್ಧಾಂತದ ಮೂಲ ಉದ್ದೇಶಕ್ಕೆ ಧಕ್ಕೆ ಉಂಟಾದಂತೆಲ್ಲಾ ಧರ್ಮಕ್ಕೂ ಗ್ಲಾನಿಯುಂಟಾಗಿತ್ತು. ಮೂಲ ತತ್ವವನ್ನೇ ಮರೆತು ಜಡವಾಗುತ್ತಿತ್ತು ಭಾರತವ.

ಭಾರತದ ತತ್ವವನ್ನು ಪುನಃ ಸ್ಥಾಪಿಸಲು, ಶ್ರುತಿ ಸಾರವನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಸುವ ಜ್ಞಾನಿಯ ಅಗತ್ಯತೆ ಶಂಕರರ ಕಾಲದಲ್ಲಿ ಅತ್ಯವಶ್ಯಕವಾಗಿತ್ತು. ದಾರಿ ತಪ್ಪಿದವರನ್ನು ಸರಿ ದಾರಿಗೆ ತರುವ ಕೆಲಸವನ್ನು ಶಂಕರರು ಸಮರ್ಥವಾಗಿ ಮಾಡಿದರೇ ಹೊರತು ಹೊಸ ಸಿದ್ಧಾಂತವನ್ನು ತಾವಾಗಿಯೇ ಸೃಷ್ಟಿಸಿ ಅದನ್ನು ಪ್ರಚಾರ ಮಾಡಲಿಲ್ಲ. ಹಾಗಾಗಿಯೇ ಶಂಕರರ ಸಿದ್ಧಾಂತ ಇಂದಿಗೂ, ಎಂದಿಗೂ ಅಪ್ರಕಂಪ್ಯವಾಗಿ ಉಳಿಯಲು ಸಾಧ್ಯವಾಗಿದೆ.

ಶಂಕರರಿಗೆ ಪರಮ ಗುರುಗಳು ಗೌಡಪಾದರು. ಮಾಂಡೂಕ್ಯ ಕಾರಿಕೆಗಳಿಗೆ ಭಾಷ್ಯಗಳನ್ನು ರಚಿಸಿದ್ದ ಗೌಡಪಾದರು “ಮಾಯಾಮಾತ್ರಂ ಇದಂ ದ್ವೈತಂ, ಅದ್ವೈತಂ ಪರಮಾರ್ಥತಃ” ಎಂದು ಹೇಳಿ, ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು. ಆದರೆ ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳದ ಸಾಂಖ್ಯಾದಿಗಳು ಪ್ರತಿಪಾದಿಸಿದ್ದ ದ್ವೈತದಲ್ಲೇ ಮುಳುಗಿದ್ದ ಪಂಡಿತರು, ವೇದ-ವೇದಾಂತದ ಸಾರವನ್ನು ತಪ್ಪಾಗಿ ಅರ್ಥೈಸಿಕೊಂಡು ಕರ್ಮಕಾಂಡಕ್ಕೇ ಹೆಚ್ಚಿನ ಮಹತ್ವ ನೀಡಿ ಜ್ಞಾನ ಮಾರ್ಗವನ್ನು ನಿರಾಕರಿಸಿದ್ದರು. ಅಂದರೆ ವೇದಗಳಲ್ಲಿ ಹೇಳಿದ ಒಂದು ಹಂತವನ್ನು ಬಿಟ್ಟು ಮುಂದಕ್ಕೆ ಹೋಗದೇ ಜಡವಾಗಿ ಅಂಟಿಕೊಂಡು ಕರ್ಮಕಾಂಡ (ಯಜ್ಞ ಯಾಗಗಳಿಂದಲೇ) ಮೋಕ್ಷ ಪ್ರಾಪ್ತಿ ಎಂಬ ಭ್ರಮೆಯಲ್ಲಿದ್ದರು. ಅದನ್ನು ಕಳಚಿದ್ದೇ ಶಂಕರರು. ಶಂಕರರು ಕೇವಲ ಅಜ್ಞಾನವನ್ನಷ್ಟೇ ಕಳೆಯಲಿಲ್ಲ. ವಿಷಕಂಠ ಹಾಲಾಹಲವನ್ನು ತಾನು ಸೇವಿಸಿ ಅಮೃತವನ್ನು ನೀಡಿ ದೇವತೆಗಳನ್ನು, ಸೃಷ್ಟಿಯನ್ನು ರಕ್ಷಿಸಿದಂತೆ, ಬಂದ ಕಷ್ಟಗಳನ್ನೆಲ್ಲಾ ಎದುರಿಸಿ ಅಜ್ಞಾನದ ರೂಪದಲ್ಲಿ ಭಾರತದ ಸನಾತನ ಧರ್ಮಕ್ಕೆ ಎದುರಾಗಿದ್ದ ಅಪಾಯವನ್ನೂ ಕಳೆದರು. ಸನಾತನ ಧರ್ಮವನ್ನು ಪುನಃ ಪ್ರತಿಷ್ಠಾಪಿಸಿ, ಅದ್ವೈತದ ಸುಧೆಯನ್ನು ಅನುಗ್ರಹಿಸಿದರು.

ಪ್ರಸ್ತುತ ಸನ್ಯಾಸಿ ಎಂದರೆ ಕೇವಲ ಮೂಗು ಹಿಡಿದು ತಪಸ್ಸು ಮಾಡುವುದು ಅಥವಾ ಲೋಕ ವ್ಯವಹಾರಗಳಿಂದ ದೂರವಿದ್ದುಬಿಡುವುದು ಅಥವಾ ಒಂದು ವ್ಯವಸ್ಥೆಯಿಂದ ದೂರ ಇರುವುದು ಎಂಬ ಭಾವನೆ ಗಟ್ಟಿಯಾಗುತ್ತಿವೆ. ಆದರೆ ಭಾರತದ ಉಸಿರಾಗಿರುವ ತರ್ಕಬದ್ಧ ವಿಚಾರ ಮಂಡನೆ ಅಂದರೆ ಲಾಜಿಕ್ ನಲ್ಲಿ ನಮ್ಮ ಸನಾತನ ಧರ್ಮ ಅದೆಷ್ಟು ಮುಂದುವರೆದಿತ್ತು ಎನ್ನುವುದಕ್ಕೆ ಶಂಕರರು ಅತ್ಯುತ್ತಮ ಉದಾಹರಣೆಯಾಗಿ ನಿಲ್ಲುತ್ತಾರೆ. ಎಷ್ಟರ ಮಟ್ಟಿಗೆ ಎಂದರೆ ಸಾವಿರ ವರ್ಷಗಳು ಕಳೆದರೂ ಅವರ ತರ್ಕಬದ್ಧ ಮಂಡನೆ ಈ ಕ್ಷಣಕ್ಕೂ ಮಾದರಿಯಾಗುತ್ತದೆ. ವಿರೋಧಿಗಳೂ ಸಹ ತಮ್ಮ ವಾದದ ಸೌಧ ಕಟ್ಟುವುದಕ್ಕೆ ಶಂಕರರನ್ನೇ ಅಡಿಪಾಯವನ್ನಾಗಿರಿಸಿಕೊಳ್ಳುತ್ತಾರೆ. ಒಂದು ವಿಷಯದ ಬಗ್ಗೆ ಎರಡು ಪಕ್ಷಗಳ ನಡುವಿನ ವಾದ ಎಂದರೆ ಶಂಕರರು-ಮಂಡನ ಮಿಶ್ರರ ನಡುವಿನ ವಾದ ಸರಣಿಯೇ ಇಂದಿಗೂ ಮಾದರಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಧ್ಯಯನಕ್ಕೆ ಸೂಕ್ತ ಉದಾಹರಣೆ.

ನಾವೆಲ್ಲಾ ಯೂತ್ ಐಕಾನ್ ಎಂದು ಪ್ರತಿ ಜನವರಿ 12 ರಂದು ಆರಾಧಿಸುವ ವಿವೇಕಾನಂದರು ಸಹ  ಶಂಕರಭಗವತ್ಪಾದರ ಕುರಿತು “In Shankaracharya we saw tremendous intellectual power, throwing the scorching light of reason upon everything. We want today that bright sun of intellectuality joined with the heart of Buddha”, ಅಂದರೆ “ಶಂಕರಭಗವತ್ಪಾದರು ಪ್ರಚಂಡ ಬೌದ್ಧಿಕ ಶಕ್ತಿಯನ್ನು ಹೊಂದಿದ್ದರು “ನಮಗೆ ಈಗ ಅಗತ್ಯವಿರುವುದು ಶಂಕರರ ರೀತಿಯ ಬುದ್ಧಿಮತ್ತೆ ಹಾಗೂ ಬುದ್ಧನ ರೀತಿಯ ಪ್ರೀತಿ ಎಂದಿದ್ದಾರೆ. ಅಷ್ಟೇ ಏಕೆ, ಸ್ವಾಮಿ ವಿವೇಕಾನಂದರ ಗುರುಗಳಾಗಿದ್ದ ರಾಮಕೃಷ್ಣ ಪರಮಹಂಸರಿಗೂ ಸಹ ಪ್ರೇರಕ ಶಕ್ತಿಯಾಗಿದ್ದದ್ದು ಇದೇ ಶಂಕರ ಭಗವತ್ಪಾದರು.

ಯೂತ್ ಐಕಾನ್
ಇಂದು ಇಡೀ ಭಾರತವೇ ಯೂತ್ ಐಕಾನ್ ಎಂದು ಮೆಚ್ಚಿ ಮೆರೆಸುವ ಇತ್ತೀಚಿನ ವಿವೇಕಾನಂದರಂತಹ ಧೀಶಕ್ತಿಯುಳ್ಳ ಸನ್ಯಾಸಿಗೇ ಆರಾಧ್ಯ ಮೂರ್ತಿಯಾಗಿದ್ದರು 12 ಶತಮಾನಗಳ ಹಿಂದಿನ ಶಂಕರ ಭಗವತ್ಪಾದರು!

ಅಲ್ಲವೇ? 8 ವರ್ಷದ ಬಾಲ ಸನ್ಯಾಸಿ. 12 ಶತಮಾನಗಳ ಹಿಂದೆ ಯಾವ ಸಂಚಾರ ವ್ಯವಸ್ಥೆ? ಕೇರಳದ ಕಾಲಟಿಯೆಲ್ಲಿ? ನರ್ಮದಾ ನದಿಯ ತಟದ ಗುಹೆಯೆಲ್ಲಿ? ಯಾವ ನೆರವು? ಯಾವ ಅರ್ಥವ್ಯವಸ್ಥೆ? ಬುದ್ಧಿ ಚಿಗುರೊಡೆಯುವ ವಯಸ್ಸಿನಲ್ಲೇ ಗುರುವನ್ನು ಅರಸಿ ಹೊರಟರಲ್ಲಾ ಬಾಲ ಸನ್ಯಾಸಿ ಶಂಕರರು ಅವರ ಧೀರೋದಾತ್ತ ಮನಸ್ಥಿತಿ, ವ್ಯಕ್ತಿತ್ವವನ್ನು ಬಣ್ಣಿಸುವುದೆಂತು? ಪದಪುಂಜಗಳು ಸಾಲದೇ ನತಮಸ್ತಕರಾಗುತ್ತೇವೆ ಅಷ್ಟೇ! ಶಂಕರರು ತಮ್ಮ ಗುರು ಗೋವಿಂದ ಭಗವತ್ಪಾದರನ್ನು ಸಂದರ್ಶಿಸಿ ತಮ್ಮನ್ನು ಭವ ಸಾಗರದಿಂದ ಮುಕ್ತಗೊಳಿಸಿ ಅನುಗ್ರಹಿಸಬೇಕೆಂದು ಪ್ರಾರ್ಥಿಸುತ್ತಾರೆ. ಆದರೆ ಇದಕ್ಕೆ ಪ್ರತಿಯಾಗಿ ” ಈ ಮರ್ತ್ಯ ಶರೀರದಿಂದ ಹೇಗೆ ಭವ ಸಾಗರದಿಂದ ಬಿಡುಗಡೆ ಹೊಂದುವೆ ಎಂದು ಕೇಳುತ್ತಾರೆ ಗೋವಿಂದ ಭಗವತ್ಪಾದರು. ಗುರುಗಳ ಪ್ರಶ್ನೆಗೆ ಉತ್ತರಿಸಿದ್ದ ಶಂಕರರು ಜೀವನ್ಮರಣ ಶರೀರಕ್ಕೇ ಹೊರತು ಆತ್ಮಕ್ಕೆ ಅಲ್ಲ ಎಂದು ಹೇಳುತ್ತಾರೆ, ಗುರುಗಳನ್ನು ಆಶ್ರಯಿಸಿ ಅಧ್ಯಯನ ಮಾಡುವುದಕ್ಕೂ ಮುನ್ನವೇ ಇಂತಹ ಪಾರಮಾರ್ಥಿಕ ಉತ್ತರವನ್ನು ನೀಡುವಷ್ಟು ಜ್ಞಾನಿಗಳಾಗಿದ್ದರಲ್ಲಾ ಶಂಕರರು ಆದ್ದರಿಂದಲೆ ಅವರನ್ನು ಬುದ್ಧಿವಂತಿಕೆಯಲ್ಲಿ ಸೂರ್ಯನಿಗೆ ಹೋಲಿಸಿ ನಮಿಸಿದ್ದೇವೆ. ಆದ್ದರಿಂದಲೇ ಜಗತ್ತು ಶಂಕರರನ್ನು ನಮಾಮಿ ಭಗವತ್ಪಾದಂ ಲೋಕಶಂಕರಂ, ಆರಾದ್ ಜ್ಞಾನದಭಿಸ್ತಿಭಿಹಿ ಪ್ರತಿಹತಶ್ಚನ್ದ್ರಾಯುತೆ ಭಾಸ್ಕರಹ ತಸ್ಮೈ ಶಂಕರ ಭಾನವೇ ತನುಮನೋ ವಾಭಿರ್ನಮಸ್ಕುರ್ಮಹೆ ಎಂದು ಕೊಂಡಾಡಿದೆ. ಕೇವಲ ಕೊಂಡಾಡುವವರಿಗಷ್ಟೇ ಅಲ್ಲ, ಶಂಕರರು ತಮ್ಮನ್ನು ವಿರೋಧಿಸುವವರಿಗೂ ಕೊಂಡಾಡುವವರಷ್ಟೇ ಮುಖ್ಯವಾಗಿದ್ದಾರೆ. ಏಕೆಂದರೆ ಶಂಕರರು ಸಂಪ್ರದಾಯಸ್ಥರಾಗಿದ್ದುಕೊಂಡೇ ಸಂಪ್ರದಾಯಸ್ಥರು ಮಾಡುತ್ತಿದ್ದ ತಪ್ಪುಗಳನ್ನು ವಿರೋಧಿಸಿದ್ದರು, ಕರ್ಮಠರಾಗಿದ್ದುಕೊಂಡೇ ಕರ್ಮಠರ ತಪ್ಪುಗಳನ್ನು ತಿದ್ದಿ ತೀಡಿದರು.

ಸಾಂಖ್ಯರನ್ನು, ಇತರ ಪ್ರತಿಪಕ್ಷದ ವಿದ್ವಾಂಸರುಗಳನ್ನು ಸಾತ್ವಿಕ ಮಾರ್ಗದಲ್ಲಿ ವಿರೋಧಿಸಿ, ಮಣಿಸಿದ್ದರು. ಬೌದ್ಧರ ತಪ್ಪುಗಳನ್ನೂ ತಿದ್ದಿ ಬುದ್ಧಿ ಹೇಳಿದರು. ವೇದಗಳ ಚೌಕಟ್ಟುಗಳನ್ನು ದಾಟದೇ, ವೇದದ ಪರಮ ತತ್ವಕ್ಕೆ ಚ್ಯುತಿ ಬಾರದಂತೆ ಅದ್ವೈತ ಸಿದ್ಧಾಂತವನ್ನು ಸ್ಥಾಪಿಸಲು ಅಂದಿನ ಜನರು ವಿಧಿಸಿದ್ದ ಕಟ್ಟುಪಾಡುಗಳನ್ನು ಮೀರಿದರು.

ತಾವೊಬ್ಬರೇ ಒಂದು ಪಕ್ಷ ಉಳಿದವರೆಲ್ಲಾ ಒಂದು ಪಕ್ಷ ಎಂಬಂತಿದ್ದಾಗಲೂ ಸಂಚಾರ ವ್ಯವಸ್ಥೆಯೇ ಇಲ್ಲದ ಕಾಲದಲ್ಲಿ ಪ್ರತಿ ನಿತ್ಯವೂ ಯಾತ್ರೆ ಕೈಗೊಂಡರು. ಭಾರತದ ಮೂಲೆ ಮೂಲೆಗಳನ್ನೂ ಸಂಚರಿಸಿ, ‘ವಾದೇ ವಾದೇ ಜಾಯತೇ ತತ್ತ್ವಬೋಧಃ ಎಂಬಂತೆ ವಾದ ಮಾಡಿ ಅನೇಕ ದುರಹಂಕಾರಿ ವಿದ್ವಾಂಸರು ತಮ್ಮ ತಪ್ಪನ್ನು ತಾವೇ ಅರ್ಥಮಾಡಿಕೊಳ್ಳುವಂತೆ,  ಜ್ಞಾನ ಮಾರ್ಗದ ಮೂಲಕವೇ ಮೋಕ್ಷ ಪ್ರಾಪ್ತಿ ಎಂಬುದನ್ನು ಒಪ್ಪಿ ಜಿತೋಸ್ಮಿ ಎನ್ನಿಸಿದ್ದರು. ಕರ್ಮಕಾಂಡದಲ್ಲಿ ಅಪ್ರಕಂಪ್ಯವಾದ ನಂಬಿಕೆ ಹೊಂದಿದ್ದ ಮಂಡನ ಮಿಶ್ರರಂತಹ ಪಂಡಿತರನ್ನು ಶಿಷ್ಯರನ್ನಾಗಿಸಿಕೊಂಡರು.

ಕೇವಲ 35 ವರ್ಷಗಳಲ್ಲಿನ ಜೀವಿತಾವಧಿಯಲ್ಲಿ ಭಾರತದ ಸನಾತನ ಧರ್ಮದ ಸತ್ವವನ್ನು ಪುನಃ ಪ್ರತಿಷ್ಠಾಪಿಸಿದ ಶಂಕರರಲ್ಲದೇ ಇಂದಿನ ಯುವ ಪೀಳಿಗೆಗೆ, ವಿವೇಕಾನಂದರು ಹೇಳಿದಂತೆ ಭಾರತಕ್ಕೆ ಅಗತ್ಯವಿರುವ ತೀಕ್ಷ್ಣ ಬುದ್ಧಿವಂತಿಕೆಗೆ ಶಂಕರರಲ್ಲದೇ ಮತ್ಯಾರು ತಾನೆ ಪ್ರೇರಕ ಶಕ್ತಿಯಾಗಬಲ್ಲರು? ಭಾರತ ಎದುರಿಸುತ್ತಿರುವ ಬೌದ್ಧಿಕ ದಾಸ್ಯ, ವಿಸ್ಮೃತಿಯಿಂದ ಹೊರಬರಲು ಶಂಕರರಲ್ಲದೇ ಮತ್ಯಾರು ತಾನೆ ಪ್ರೇರೇಪಿಸಬಲ್ಲರು?

ಇಷ್ಟಕ್ಕೂ ನಾವೇಕೆ ಶಂಕರರಿಗೆ ಕೃತಜ್ಞರಾಗಿರಬೇಕು ಅಥವಾ ಗೌರವಿಸಬೇಕೆಂದರೆ ಅವರು ಜೀವಿಸಿ- ಗತಿಸಿದ ಸಾವಿರ ವರ್ಷಗಳು ಕಳೆದರೂ ನಾವು ಧರ್ಮದ ವಿಷಯದಲ್ಲಿ ಯಾವುದೇ ಸಮಸ್ಯೆಯನ್ನೂ ಎದುರಿಸದಂತಹ ಸ್ಥಿತಿಯನ್ನು ನಿರ್ಮಾಣ ಮಾಡಿ ಹೋಗಿದ್ದಾರೆ. ಸಾವಿರ ವರ್ಷಗಳು ಕಳೆದರೂ ಧರ್ಮಕ್ಕೆ ವಿಪ್ಲವ ಬರದಂತಹ ವಾತಾವರಣ ನಿರ್ಮಿಸಿದ್ದರು.

ಇನ್ನು ಕೊನೆಯದಾಗಿ, ಸಾ.ಕೃ ರಾಮಚಂದ್ರರಾಯರಂತಹ ವಿದ್ವಾಂಸರು ತಮ್ಮ ದರ್ಶನ ಪ್ರಬಂಧದಲ್ಲಿ ಶಂಕರರ ಬಗ್ಗೆ ಹೀಗೆ ಬರೆಯುತ್ತಾರೆ, “ನಾಡಿನ ಮೇಧಾವಿಗಳಲ್ಲಿ, ಮಾರ್ಗದರ್ಶಕರಲ್ಲಿ ಬುದ್ಧನನ್ನು ಬಿಟ್ಟರೆ ಶ್ರೀಶಂಕರರದ್ದೆ ಅಗ್ರಸ್ಥಾನ. ಅವರ ಬುದ್ಧಿಶಕ್ತಿ, ವಿಚಾರನೈಪುಣ್ಯ, ಸಂಪ್ರದಾಯಶ್ರದ್ಧೆ, ಸಮನ್ವಯ ಬುದ್ಧಿ, ಲೋಕಾನುಗ್ರಹ ದೃಷ್ಟಿ, ಪ್ರತಿಪಾದನಾ ಸಾಮರ್ಥ್ಯ ಇವೆಲ್ಲವೂ ಅನಾದೃಶ್ಯವಾದುವು. ಅವರ ನಂತರ ತೋರಿಕೊಂಡ ಯಾವ ಪಂಥದ ಆಚಾರ್ಯರಾಗಲಿ ವ್ಯಾಖ್ಯಾನಕಾರರಾಗಲಿ ಅವರ ಬರಹಗಳನ್ನು ಅಲ್ಲಗಳೆಯುವಂತಿರಲಿಲ್ಲ. ಅವರನ್ನು ಅನುಸರಿಸಿದವರಿಗೂ ವಿರೋಧಿಸಿದವರಿಗೂ ಅವರು ಸಮನಾಗಿಯೇ ಉಪಜೀವ್ಯರು! ವೇದಾಂತ ಸಂಪ್ರದಾಯ ಸ್ಪಷ್ಟವಾದುದು ಅವರ ಕಾಲದಲ್ಲಿಯೇ. ಅವರಿಂದಲೇ. ಮುಂದೆ ಒಂದು ಸಾವಿರಕ್ಕೂ ಮಿಕ್ಕು ವರ್ಷಗಳು ಕಳೆದ ಮೇಲೂ ಅವರ ಈ ನಾಡಿದ ಎಲ್ಲರ ನೆನಪಿನಲ್ಲಿ ಅಚ್ಚಳಿಯದೇ ಉಳಿದುಕೊಂಡಿದೆ”.

ಅದ್ವೈತ ತತ್ವ ಸಿದ್ದಾಂತ, ಅದರ ಸಮರ್ಥನೆಗಾಗಿ ಅವರು ಮಾಡಿದ ವಾದ ಮಂಡನೆ, ತರ್ಕ, ಇಡೀ ಜಗತ್ತನ್ನೇ ಬೆರಗುಗೊಳಿಸಿದೆ. ಇಂದು ಶಂಕರ ಜಯಂತಿ.ಸಾವಿರಕ್ಕೂ ಮಿಕ್ಕು ವರ್ಷಗಳು ಕಳೆದರೂ ಅವರ ಸಿದ್ಧಾಂತ ಅಚ್ಚಳಿಯದೇ ಉಳಿದುಕೊಂಡಿದೆ ಎಂದರೆ, ಶಂಕರರಿಲ್ಲದಿದ್ದಿದ್ದರೆ ಯಾವ ಸನಾತನ ಧರ್ಮದ ಅನುಯಾಯಿಗಳು ಇಂದು “ಹಿಂದೂ” ಎಂದು ಹೇಳಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಇಂದಿಗೆ ವೇದಾಂತ ತತ್ವ ಎಂದರೆ ಯಾರಿಗೂ ಅರ್ಥವೇ ಆಗುತ್ತಿರಲಿಲ್ಲ. ವೇದಾಂತ ತತ್ವ ಎಂದರೇನು ಎಂಬುದೇ ಅರ್ಥವಾಗದೇ ಇದ್ದಿದ್ದರೆ ಇತ್ತೀಚಿನ ಶತಮಾನಗಳಲ್ಲಿ ನಾವು ರಾಮಕೃಷ್ಣ ಪರಮಹಂಸ, ರಮಣ ಮಹರ್ಷಿಗಳು,

ವಿವೇಕಾನಂದರಂತಹವರನ್ನೂ ಕಾಣಲು ಬಹುಶಃ ಸಾಧ್ಯವಾಗುತ್ತಿರಲಿಲ್ಲ. ಅಷ್ಟೇ ಏಕೆ ಅಸಲಿಗೆ ಭಾರತ ಭಾರತವಾಗೇ ಉಳಿಯುತ್ತಿರಲಿಲ್ಲ, ಭಾರತದ ಸನಾತನ ಧರ್ಮ ಜೀವಂತವಾಗಿದ್ದರೆ ಅದಕ್ಕೆ ಶಂಕರರ ಕೊಡುಗೆ ಅಪಾರ.  ಹಾಗಾಗಿಯೇ ಸಾವಿರ ಅಲ್ಲ ಮತ್ತೂ ಸಾವಿರ ವರ್ಷ ಕಳೆದರೂ ಜಗತ್ತಿನ ಶ್ರೇಷ್ಠ ತತ್ವ ತತ್ವಜ್ಞಾನಿ ಶಂಕರರು ಪ್ರಸ್ತುತ. ಎಂದಿಗೂ ಜೀವಂತ…

ಶಂಕರಾಚಾರ್ಯರ ಜನ್ಮದಿನವನ್ನು ರಾಜ್ಯ ಸರ್ಕಾರ ಅನೇಕ ವರ್ಷಗಳಿಂದ ತತ್ವಜ್ಞಾನಿಗಳ ದಿನಾಚರಣೆ ಎಂದು ಆಚರಿಸುತ್ತಿದೆ. ತತ್ವಜ್ಞಾನಿಗಳ ದಿನಾಚರಣೆಯ ಶುಭಾಶಯಗಳು!

ರಾಷ್ಟ್ರೀಯ ಹಾಕಿ ಸಬ್ ಜೂನಿಯರ್ ತಂಡದಲ್ಲಿ ದಿಶಾ ಪೊನ್ನಮ್ಮ

ಮಡಿಕೇರಿ  : ಕಳತ್ಮಾಡು ಲಯನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ದಿಶಾಪೊನ್ನಮ್ಮ ಸಬ್ ಜೂನಿಯರ್ ಹಾಕಿ ಪಂದ್ಯಾವಳಿಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ, ಜಾರ್ಖಂಡ್ ನಲ್ಲಿ ನಡೆದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.
ದಿಶಾ ಪೊನ್ನಮ್ಮ ಪೊನ್ನಂಪೇಟೆಯ ಕ್ರೀಡಾ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಜಿಸ್ಕಾಮಾಲ ಉಸ್ಕಾ ಹಮಾಲ.

ವಿಜಯಪುರ ಜಿಲ್ಲಾ ಲಾರಿ ಮಾಲಕರ ಸಂಘದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಗಳು ಮಾತನಾಡಿ.ಇತ್ತೀಚಿನ ದಿನಗಳಲ್ಲಿ ಡಿಜಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತಿದೆ. ಹಾಗೂಎಲ್ಲಾ ರಸ್ತೆಗಳಿಗೂ ಟೋಲ್ ಪಾವತಿಸುವ ಕಾರಣ ಹಾಗೂ ಲಾರಿ ಗಳಲ್ಲಿ ಲೋಡ್ ಹಾಗೂ ಅನ್ಲೋಡ್ ಮಾಡುವದಕ್ಕೆ ಹಮಾಲಿ ಹಣ ಇನ್ನಿತರ ಖರ್ಚುಗಳು ಹೆಚ್ಚಾಗಿದ್ದು.ಯೋಗ್ಯ ಬಾಡಿಗೆ ಸಿಗದೇ ನಾವು ಬಹಳ ಕಷ್ಟ ದಲ್ಲಿದ್ದೇವೆ ಎಂದರು. ಮೋಟರು ವಾಹನ ಕಾಯೆದೆ ಸೆಕ್ಸನ.67. ಸಬ್. ಸೆಕ್ಸ್ ನ.1ರ ಪ್ರಕಾರ ನಮಗೆ ಕಿಲೋಮೀಟರ್ ಪ್ರಕಾರ್ ಈಗಿರುವ ಖರ್ಚುವೆಚ್ಚಗಳ ಪ್ರಕಾರ ಯೋಗ್ಯ ಬಾಡಿಗೆ ದರ ನಿಗದಿ ಪಡಿಸಿ 2002ಆದೇಶ ಪ್ರತಿಯನ್ನು ನವಿಕರಿಸಿ ಕೊಡಬೇಕೆಂದು. ಈ ಮೂಲಕ. ಮಾನ್ಯ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಿದರು ವರದಿ : ಆರ್ ಎಸ್. ಹೊರಕೇರಿ

ಪಂಜಾಬ್ ರಾಜಕೀಯ ಬೇಗುದಿ ಉಲ್ಬಣ: ಸೋನಿಯಾ, ರಾಹುಲ್ ಗಾಂಧಿ ಭೇಟಿ ಮಾಡಿದ ನವಜೋತ್ ಸಿಂಗ್ ಸಿಧು

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದು ಇಂದು ದೆಹಲಿಯಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ಪಂಜಾಬ್ ಸಿಎಂ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಮತ್ತು ಮಾಜಿ ಸಚಿವ ನವಜೋತ್‌ ಸಿಂಗ್‌ ಸಿಧು ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ ಹಾಡಲು ಕೊನೆಗೂ ಸಂಧಾನ ಸೂತ್ರ ಸಿದ್ಧಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸಿಧು ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು.

ಈ ಹಿನ್ನೆಲೆಯಲ್ಲಿ ಇಂದು ದೆಹಲಿಯ ನಿವಾಸದಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ನವಜೋತ್ ಸಿಂಗ್ ಸಿಧು ಭೇಟಿ ಮಾಡಿದ್ದಾರೆ.ಈ ವೇಳೆ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಕೂಡ ಉಪಸ್ಥಿತರಿದ್ದರು.

ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಂಜಾಬ್‌ನಲ್ಲಿ ನಡೆಯುತ್ತಿರುವ ಭಿನ್ನಮತಕ್ಕೆ ಕೊನೆಗೂ ಪೂರ್ಣ ವಿರಾಮ ಬೀಳುವ ಸಾಧ್ಯತೆಯಿದೆ. ಪಂಜಾಬ್‌ ಪ್ರದೇಶ ಕಾಂಗ್ರೆಸ್‌ ಸಮಿತಿ (ಪಿಪಿಸಿಸಿ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು ನೇಮಕ ಮಾಡಲು ಕಾಂಗ್ರೆಸ್‌ ವರಿಷ್ಠರ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ

1 5 6 7 8 9 11